‘ರೈತರಿಗೇಕೆ ಎಲ್ಲವೂ ಉಚಿತವಾಗಿ ಬೇಕು?’ ಮಹಾರಾಷ್ಟ್ರ ಡಿಸಿಎಂ ಅಜಿತ್ ಪವಾರ್ ವಿವಾದಾತ್ಮಕ ಹೇಳಿಕೆ

Date:

ಯಾವಾಗಲೂ ರೈತರು ತಮ್ಮ ಸಾಲ ಮನ್ನಾ ಮಾಡುವಂತೆ ಕೇಳುವುದು ಯಾಕೆ? ರೈತರಿಗೆ ಯಾಕೆ ಎಲ್ಲವೂ ಉಚಿತವಾಗಿಯೇ ಬೇಕು? ಎಂದು ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಕೇಳಿದ್ದು, ವಿವಾದ ಸೃಷ್ಟಿಸಿದ್ದಾರೆ. ರೈತರು ಮತ್ತು ರೈತ ಹೋರಾಟಗಾರರ ಆಕ್ರೋಶಕ್ಕೆ ಗುರಿಯಾಗಿದ್ದಾರೆ.

ಮುಂಬೈನಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಅಜಿತ್ ಪವಾರ್, “ಈ ಹಿಂದೆ, ಶರದ್ ಪವಾರ್, ದೇವೇಂದ್ರ ಫಡ್ನವೀಸ್, ಉದ್ಧವ್ ಠಾಕ್ರೆ ನೇತೃತ್ವದ ಸರ್ಕಾರಗಳ ಅವಧಿಯಲ್ಲಿ ರೈತರ ಕೃಷಿ ಸಾಲ ಮನ್ನಾ ಮಾಡಲಾಗಿತ್ತು. ಈಗಲೂ ಕೃಷಿ ಸಾಲ ಮನ್ನಾಗೆ ಬೇಡಿಕೆ ಇದೆ. ಸಾಲ ಮನ್ನಾ ಆಗ್ಗಾಗ್ಗೆ ಮಾಡುತ್ತಿರಬೇಕಾದ ವಿಷಯವಲ್ಲ. ರೈತರು ಸಾಲ ಮನ್ನಾ ಮಾಡುವಂತೆ ಕೇಳುವುದು ಯಾಕಾಗಿ” ಎಂದು ಹೇಳಿದ್ದಾರೆ.

“ರೈತರಿಗೆ ರಾಜ್ಯ ಸರ್ಕಾರ ಶೂನ್ಯ ಬಡ್ಡಿದರದಲ್ಲಿ ಬೆಳೆ ಸಾಲ ನೀಡುತ್ತದೆ. ಆದರೂ, ಸಾಲ ಮನ್ನಾ ಮಾಡುವಂತೆ ರೈತರು ಕೇಳುತ್ತಿದ್ದಾರೆ. 2024ರ ವಿಧಾನಸಭಾ ಚುನಾವಣೆಯ ಸಮಯದಲ್ಲಿ ಕೃಷಿ ಸಾಲ ಮನ್ನಾ ಮಾಡುವುದಾಗಿ ನಾವು ಭರವಸೆ ನೀಡಿದ್ದೇವೆ. ಚುನಾವಣೆ ಗೆಲ್ಲುವ ಉದ್ದೇಶದಿಂದ ಭರವಸೆ ನೀಡಲಾಗಿತ್ತು. ಈಗ ರೈತರು ಕೃಷಿ ಸಾಲ ಮನ್ನಾ ಮಾಡುವಂತೆ ಕೇಳುತ್ತಿದ್ದಾರೆ. ಆದರೆ, ಸಾಲ ಮನ್ನಾ ಮಾಡುವುದು ಸುಲಭವಲ್ಲ. ಅದಕ್ಕಾಗಿ, ಸಾವಿರಾರು ಕೋಟಿ ರೂ.ಗಳು ಬೇಕಾಗುತ್ತವೆ” ಎಂದು ಹೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಅಜಿತ್ ಪವಾರ್ ಹೇಳಿಕೆಯನ್ನು ವಿಪಕ್ಷಗಳು ಟೀಕಿಸಿವೆ. ಮಹಾಯುತಿ ಸರ್ಕಾರ ಮಾತು ತಪ್ಪುತ್ತಿದ್ದು, ರೈತರಿಗೆ ಮೋಸ ಮಾಡುತ್ತಿದೆ ಎಂದು ಆರೋಪಿಸಿವೆ.

“ಚುನಾವಣೆ ಸಮಯದಲ್ಲಿ ಸಾಲ ಮನ್ನಾ ಮಾಡುವುದಾಗಿ ಮಹಾಯುತಿ ಭರವಸೆ ನೀಡಿತ್ತು. ಈಗ ನುಣುಚಿಕೊಳ್ಳುತ್ತಿದೆ. ರೈತರು ಸಂಕಷ್ಟದಲ್ಲಿರುವ ಕಾರಣದಿಂದ ಸಾಲ ಮನ್ನಾ ಮಾಡುವಂತೆ ಕೇಳುತ್ತಿದ್ದಾರೆ. ಸರ್ಕಾರಕ್ಕೆ ಸಾಲ ಮನ್ನಾ ಮಾಡಲು ಸಾಧ್ಯವಾಗದಿದ್ದರೆ, ಅಧಿಕಾರದಿಂದ ಕೆಳಗಿಳಿಯಬೇಕು” ಎಂದು ಮಹಾರಾಷ್ಟ್ರ ಕಾಂಗ್ರೆಸ್ ಅಧ್ಯಕ್ಷ ಹರ್ಷವರ್ಧನ್ ಸಪ್ಕಲ್ ಒತ್ತಾಯಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...