ಆರೋಪಿಗಳ ಆಸ್ತಿ ಮಾರಿ ಪರಿಹಾರ ನೀಡಬಾರದೇಕೆ? – ಆ್ಯಸಿಡ್ ದಾಳಿಕೋರರಿಗೆ ಕಠಿಣ ಶಿಕ್ಷೆ ವಿಧಿಸಲು ಸುಪ್ರೀಂ ಚಿಂತನೆ

Date:

ಆ್ಯಸಿಡ್ ದಾಳಿ ಪ್ರಕರಣಗಳ ವಿಚಾರಣೆ ವಿಳಂಬದ ಬಗ್ಗೆ ಇತ್ತೀಚೆಗೆ ಆತಂಕ ವ್ಯಕ್ತಪಡಿಸಿದ್ದ ಸುಪ್ರೀಂ ಕೋರ್ಟ್‌, ಇದೀಗ ಆ್ಯಸಿಡ್ ದಾಳಿಕೋರರಿಗೆ ಕಠಿಣ ಶಿಕ್ಷೆಯ ಬಗ್ಗೆ ಚಿಂತನೆ ನಡೆಸುತ್ತಿದೆ. “ಆ್ಯಸಿಡ್ ದಾಳಿಕೋರರ ಆರೋಪಿಗಳನ್ನು ಮಾರಿ ಅದರ ಹಣವನ್ನು ಸಂತ್ರಸ್ತರಿಗೆ ಪರಿಹಾರ ನೀಡಲು ಯಾಕೆ ಬಳಸಬಾರದು” ಎಂದು ಮಂಗಳವಾರ ಸುಪ್ರೀಂ ಕೋರ್ಟ್ ಪ್ರಶ್ನಿಸಿದೆ.

2009ರ ಆ್ಯಸಿಡ್ ದಾಳಿ ಸಂತ್ರಸ್ತೆ ಮತ್ತು ಎನ್‌ಜಿಒ ಬ್ರೇವ್ ಸೋಲ್ಸ್ ಫೌಂಡೇಶನ್‌ನ ಸಂಸ್ಥಾಪಕಿ ಶಾಹೀನ್ ಮಲಿಕ್ ಸಲ್ಲಿಸಿದ ಪಿಐಎಲ್ ಅರ್ಜಿಯನ್ನು ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್ ಅವರ ಪೀಠವು, “ಈ ಘೋರ ಅಪರಾಧಗಳನ್ನು ತಡೆಗಟ್ಟಲು ನಾವು ಅಸಾಧಾರಣವಾದ, ನೋವಿನಿಂದ ಕೂಡಿದ ಶಿಕ್ಷೆಯನ್ನು ನೀಡುವ ಅಗತ್ಯವಿದೆ” ಎಂದು ಹೇಳಿದೆ.

ಇದನ್ನು ಓದಿದ್ದೀರಾ? ಶೇ.97.5 ಪ್ರಕರಣಗಳ ವಿಚಾರಣೆ ಬಾಕಿ: ಆ್ಯಸಿಡ್ ದಾಳಿ ಸಂತ್ರಸ್ತರಿಗೆ ಬೇಕಾಗಿರುವುದು ಸಹಾನುಭೂತಿಯಲ್ಲ ನ್ಯಾಯ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಸಂತ್ರಸ್ತರಿಗೆ ಕನಿಷ್ಠ 3 ಲಕ್ಷ ರೂಪಾಯಿ ಪರಿಹಾರ ನೀಡಬೇಕೆಂದು ಈ ಹಿಂದೆಯೇ ಸುಪ್ರೀಂ ಕೋರ್ಟ್ ಆದೇಶಿಸಿದೆ. ಆದರೆ ಚಿಕಿತ್ಸೆ ಮತ್ತು ಪುನರ್ವಸತಿಗೆ ಈ ಪರಿಹಾರ ಮೊತ್ತ ಸಾಕಾಗುವುದಿಲ್ಲ ಎಂಬುದನ್ನು ಗಮನಿಸಿದ ಸುಪ್ರೀಂ ಕೋರ್ಟ್, ಸದ್ಯ ಇರುವ ಪರಿಹಾರವನ್ನಾದರೂ ಸರಿಯಾದ ರೀತಿಯಲ್ಲಿ ಸಂತ್ರಸ್ತರಿಗೆ ದೊರಕುವಂತೆ ನೋಡಿಕೊಳ್ಳಬೇಕು ಎಂದು ಒತ್ತಿ ಹೇಳಿದೆ.

ಇನ್ನು ಎಲ್ಲಾ ಆರೋಪಿಗಳು ಕೆಳ ನ್ಯಾಯಾಲಯದಲ್ಲಿ ಖುಲಾಸೆಗೊಂಡಿರುವ ಬಗ್ಗೆ ಸಂತ್ರಸ್ತೆ ಸುಪ್ರೀಂ ಕೋರ್ಟ್‌ಗೆ ಹೇಳಿದ್ದು, ಆ್ಯಸಿಡ್ ದಾಳಿ ಸಂತ್ರಸ್ತೆಯು ಹೈಕೋರ್ಟ್‌ನಲ್ಲಿ ತನ್ನ ಪ್ರಕರಣವನ್ನು ಹೋರಾಡಲು ಅತ್ಯುತ್ತಮ ವಕೀಲರನ್ನು ಪಡೆಯುವಂತೆ ಸುಪ್ರೀಂ ಕೋರ್ಟ್ ನೋಡಿಕೊಳ್ಳುತ್ತದೆ ಎಂದು ಸಿಜೆಐ ಭರವಸೆ ನೀಡಿದರು.

2009ರಲ್ಲಿ 26 ವರ್ಷ ವಯಸ್ಸಿನ ಶಾಹೀನ್ ಮಲಿಕ್ ಅವರ ಮೇಲೆ ಹರಿಯಾಣದ ಪಾಣಿಪತ್‌ನಲ್ಲಿರುವ ಅವರ ಕಚೇರಿಯ ಹೊರಗೆ ಆ್ಯಸಿಡ್ ದಾಳಿಯಾಗಿದ್ದು, ಈ ಘಟನೆ ನಡೆದು ಈಗಾಗಲೇ 16 ವರ್ಷ ಕಳೆದಿದೆ. ಆದರೆ, ಇಂದಿಗೂ ವಿಚಾರಣೆ ಬಾಕಿ ಉಳಿದಿದೆ.

ಇದನ್ನು ಓದಿದ್ದೀರಾ? ಅತ್ಯಾಚಾರಕ್ಕೆ ಒಳಗಾದ ಮಹಿಳೆಯರನ್ನೇ ದೂಷಿಸುವ ಸಮಾಜ, ‘ವಿಕ್ಟಿಮ್ ಬ್ಲೇಮಿಂಗ್’ ನಿಲ್ಲುವುದು ಯಾವಾಗ?

ಇತ್ತೀಚೆಗೆ ಶಾಹೀನ್ ಮೇಲೆ ನಡೆದ ಆ್ಯಸಿಡ್ ದಾಳಿ ಪ್ರಕರಣದ ವಿಚಾರಣೆ ಬಾಕಿ ಪ್ರಶ್ನಿಸಿ ಸಲ್ಲಿಸಿದ ಪಿಐಎಲ್‌ ವಿಚಾರಣೆ ನಡೆಸಿದ್ದ ಸಿಜೆಐ ನೇತೃತ್ವದ ಪೀಠವು, “ವಿಚಾರಣೆಯಲ್ಲಿ ವಿಳಂಬವು ನ್ಯಾಯಾಂಗ ವ್ಯವಸ್ಥೆಯ ಅಪಹಾಸ್ಯ. ರಾಷ್ಟ್ರವೇ ತಲೆತಗ್ಗಿಸುವ ವಿಚಾರ. ಇದು ನಾಚಿಕೆಗೇಡಿನದು” ಎಂದು ಹೇಳಿತ್ತು. ಹಾಗೆಯೇ ದೇಶದಲ್ಲಿ ಬಾಕಿ ಇರುವ ಇಂತಹ ಪ್ರಕರಣಗಳ ಕುರಿತ ವಿವರಗಳನ್ನು ನಾಲ್ಕು ವಾರಗಳಲ್ಲಿ ಸಲ್ಲಿಸುವಂತೆ ಹೈಕೋರ್ಟ್‌ಗಳಿಗೆ ಸೂಚಿಸಿತ್ತು. ಕೇಂದ್ರ ಸರ್ಕಾರ ಮತ್ತು ಅಂಗವಿಕಲರ ಸಬಲೀಕರಣ ಇಲಾಖೆಗೆ ನೋಟಿಸ್ ಜಾರಿ ಮಾಡಿತ್ತು.

ಅಷ್ಟು ಮಾತ್ರವಲ್ಲದೆ ರಾಷ್ಟ್ರೀಯ ಅಪರಾಧ ದಾಖಲೆಗಳ ಬ್ಯೂರೋ (NCRB) ದತ್ತಾಂಶದ ಪ್ರಕಾರ ದೇಶದಲ್ಲಿ ಆ್ಯಸಿಡ್ ದಾಳಿ ಪ್ರಕರಣಗಳಲ್ಲಿ ಶೇ.97.5ರಷ್ಟು ಪ್ರಕರಣಗಳ ವಿಚಾರಣೆ ಬಾಕಿ ಉಳಿದಿವೆ. ಬರೀ ಶೇ.2.5ರಷ್ಟು ಪ್ರಕರಣಗಳಲ್ಲಿ ವಿಚಾರಣೆ ನಡೆದಿದೆ. ವಿಚಾರಣೆಗೆ ಒಳಗಾದ ಪ್ರಕರಣಗಳಲ್ಲಿಯೂ ಅಪರಾಧಿಗಳಿಗೆ ಶಿಕ್ಷೆಯಾಗಿರುವ ಪ್ರಮಾಣ ಅತಿ ಕಡಿಮೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...