ನಿಷೇಧಿತ ಪ್ಲಾಸ್ಟಿಕ್ ವಸ್ತುಗಳ ಪಟ್ಟಿಯಲ್ಲಿ ಹೂವುಗಳು ಯಾಕಿಲ್ಲ: ಕೇಂದ್ರಕ್ಕೆ ಹೈಕೋರ್ಟ್ ಪ್ರಶ್ನೆ

Date:

ನಿಷೇಧಿಸಲಾದ ಏಕ ಬಳಕೆ ಪ್ಲಾಸ್ಟಿಕ್‌ಗಳ ಪಟ್ಟಿಯಲ್ಲಿ ಪ್ಲಾಸ್ಟಿಕ್ ಹೂವುಗಳ ಪಟ್ಟಿಯಲ್ಲಿ ಸೇರಿಸಿಲ್ಲ? ಈ ಪ್ಲಾಸ್ಟಿಕ್ ಹೂವುಗಳನ್ನು ಮರುಬಳಕೆ ಮಾಡಲು ಸಾಧ್ಯವೇ ಎಂದು ಕೇಂದ್ರ ಸರ್ಕಾರವನ್ನು ಬಾಂಬೆ ಹೈಕೋರ್ಟ್ ಪ್ರಶ್ನಿಸಿದೆ.

ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಅಲೋಕ್ ಅರಾದೆ ಮತ್ತು ನ್ಯಾಯಮೂರ್ತಿ ಭಾರತಿ ದಂಗ್ರೆ ಅವರು ಪ್ಲಾಸ್ಟಿಕ್ ಹೂವುಗಳನ್ನು ಮರುಬಳಕೆ ಮಾಡಬಹುದೇ ಅಥವಾ ಅದು ಕೊಳೆಯಬಲ್ಲದೇ ಎಂದು ಪ್ರಶ್ನಿಸಿದ್ದಾರೆ.

ಇದನ್ನು ಓದಿದ್ದೀರಾ? ಬೆಂಗಳೂರು | ಏಕ ಬಳಕೆಯ ನಿಷೇಧಿತ ಪ್ಲಾಸ್ಟಿಕ್ ಬಳಸುತ್ತಿರುವ ಮಳಿಗೆಗಳಿಗೆ ಬೀಗ ಜಡಿದ ಬಿಬಿಎಂಪಿ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಪ್ಲಾಸ್ಟಿಕ್ ಹೂವು ಬಳಕೆಯನ್ನು ನಿಷೇಧಿಸಬೇಕು ಎಂದು ಆಗ್ರಹಿಸಿ ಹೂವು ಬೆಳೆಗಾರರ ಕೌನ್ಸಿಲ್ (ಜಿಎಫ್‌ಸಿಐ) ಸಲ್ಲಿಸಿದ ಅರ್ಜಿಯ ವಿಚಾರಣೆಯನ್ನು ಹೈಕೋರ್ಟ್ ನಡೆಸಿದೆ.

“ಪ್ಲಾಸ್ಟಿಕ್ ಹೂವುಗಳನ್ನು ಮರುಬಳಕೆ ಮಾಡಬಹುದು ಎಂಬುದು ಕೇಂದ್ರ ಸರ್ಕಾರಕ್ಕೆ ಖಚಿತವಾಗಿದೆಯೇ ಅಥವಾ ಅದು ಕೊಳೆದು ಮಣ್ಣಿನಲ್ಲಿ ಸೇರುವಂತದ್ದೇ? ಅವುಗಳು ಅತೀ ತೆಳ್ಳಗೆ ಇರುತ್ತವೆ. ಅದನ್ನು ಮರುಬಳಕೆ ಮಾಡಲಾಗುತ್ತದೆಯೇ” ಎಂದು ಕೇಂದ್ರ ಸರ್ಕಾರವನ್ನು ಹೈಕೋರ್ಟ್ ಪ್ರಶ್ನಿಸಿದೆ. ಹಾಗೆಯೇ ಅರ್ಜಿದಾರರಿಗೆ ಎರಡು ವಾರಗಳಲ್ಲಿ ಅಫಿಡವಿಟ್ ಸಲ್ಲಿಸುವಂತೆ ಸೂಚಿಸಿದೆ.

ಪ್ಲಾಸ್ಟಿಕ್ ಹೂವುಗಳು ಗರಿಷ್ಠವಾಗಿ 30 ಮೈಕ್ರೋನ್ಸ್‌ ಇರುತ್ತದೆ. ಆದರೆ ಕೇಂದ್ರ ಹಾಗೂ ಮಹಾರಾಷ್ಟ್ರ ಸರ್ಕಾರವು 100 ಮೈಕ್ರೋನ್‌ಗಿಂತ ಕಡಿಮೆ ದಪ್ಪವಾಗಿರುವ ಪ್ಲಾಸ್ಟಿಕ್‌ಗಳನ್ನು ಏಕ ಬಳಕೆಯ ಪ್ಲಾಸ್ಟಿಕ್ ಎಂದು ಪರಿಗಣಿಸುವಂತೆ ಸುತ್ತೋಲೆ ಹೊರಡಿಸಿದೆ ಎಂದು ಅರ್ಜಿಯಲ್ಲಿ ಉಲ್ಲೇಖಿಸಲಾಗಿದೆ.

ಹಾಗೆಯೇ ಸುತ್ತೋಲೆಯು ಪ್ಲಾಸ್ಟಿಕ್ ಹೂವುಗಳನ್ನು ನಿಷೇಧಿಸಬೇಕು ಎಂದು ಹೇಳಿಲ್ಲ. 100 ಮೈಕ್ರೋನ್‌ಗಿಂತ ಕಡಿಮೆ ದಪ್ಪವಿರುವ ಪ್ಲಾಸ್ಟಿಕ್ ಹೂವುಗಳನ್ನು ನಿಷೇಧಿಸಬೇಕು ಎಂದು ಅರ್ಜಿದಾರರು ಆಗ್ರಹಿಸಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...