ಅಮಿತ್ ಶಾ ಇರುವ ಹೋಟೆಲ್‌ನಲ್ಲಿ ಸಿಸಿಟಿವಿ ಸ್ಥಗಿತ: ಕಾಂಗ್ರೆಸ್ ಗಂಭೀರ ಆರೋಪ

Date:

ನವದೆಹಲಿಯ ಕೆಂಪುಕೋಟೆಯ ಬಳಿ ನಡೆದ ಸ್ಫೋಟದ ನಂತರ ಗೃಹ ಸಚಿವ ಅಮಿತ್ ಶಾ ರಾಜೀನಾಮೆ ನೀಡಬೇಕು ಎಂದು ಕಾಂಗ್ರೆಸ್ ಆಗ್ರಹಿಸಿದೆ. ಹರಿಯಾಣದ ಫರಿದಾಬಾದ್‌ನಲ್ಲಿ 360 ಕೆಜಿ ಸ್ಫೋಟಕ ವಶಪಡಿಸಿಕೊಂಡ ಹಿನ್ನೆಲೆಯಲ್ಲಿ ಪ್ರತಿಕ್ರಿಯಿಸಿದ ಕಾಂಗ್ರೆಸ್‌ನ ಹಿರಿಯ ನಾಯಕ ಪವನ್ ಖೇರಾ ಕೇಂದ್ರ ಸರ್ಕಾರವು ಸಂಪೂರ್ಣ ವಿಫಲವಾಗಿದೆ ಎಂದು ಟೀಕಿಸಿದ್ದಾರೆ.

ಬಿಹಾರ ಚುನಾವಣಾ ಫಲಿತಾಂಶಗಳ ಮುನ್ನ ಅಮಿತ್ ಶಾ ಅಧಿಕಾರಿಗಳೊಂದಿಗೆ “ರಹಸ್ಯ ಸಭೆಗಳನ್ನು” ನಡೆಸುತ್ತಿದ್ದಾರೆ ಎಂದು ಖೇರಾ ಇತ್ತೀಚೆಗೆ ಆರೋಪಿಸಿದ್ದರು.

“ಅಮಿತ್ ಶಾ ತಂಗಿದ್ದ ಹೋಟೆಲ್‌ನಲ್ಲಿ ಸಿಸಿಟಿವಿ ಕ್ಯಾಮೆರಾಗಳನ್ನು ಏಕೆ ಸ್ಥಗಿತಗೊಳಿಸಲಾಗಿದೆ? ಅವರು ಯಾರೊಂದಿಗೆ ರಹಸ್ಯವಾಗಿ ಭೇಟಿಯಾಗುತ್ತಿದ್ದಾರೆ? ಬಿಹಾರವನ್ನು ಗೆಲ್ಲಲು ಅಧಿಕಾರಿಗಳನ್ನು ರಹಸ್ಯವಾಗಿ ಸಭೆ ನಡೆಸುತ್ತಿದ್ದಾರೆಯೇ?” ಎಂದು ಖೇರಾ ಪ್ರಶ್ನಿಸಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಅಸ್ಸಾಂ ಕಾಂಗ್ರೆಸ್ ನಾಯಕಿ ಹರ್ಮೀತ್ ಕೌರ್ ಅವರು ಈ ಸಂಬಂಧ ಖೇರಾ ಅವರ ವಿಡಿಯೋವನ್ನು ಎಕ್ಸ್ ನಲ್ಲಿ ಹಂಚಿಕೊಂಡು, “ದೆಹಲಿಯ ಕೆಂಪುಕೋಟೆಯ ಸ್ಫೋಟಕ್ಕೆ ಅಮಿತ್ ಶಾ ನೇರವಾಗಿ ಹೊಣೆಗಾರರು. ಅವರು ತಕ್ಷಣ ರಾಜೀನಾಮೆ ನೀಡಬೇಕು” ಎಂದು ಪೋಸ್ಟ್ ಮಾಡಿದ್ದಾರೆ.

ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ಸುಧಾರಣೆಯಾಗಬೇಕಾದದ್ದು ಜೈಲುಗಳೋ, ರಾಜ್ಯ ಸರ್ಕಾರವೋ?

ಖೇರಾ ಹಂಚಿಕೊಂಡ ವಿಡಿಯೋ ಕ್ಲಿಪ್‌ನಲ್ಲಿ, ಹೋಟೆಲ್ ಸೀಲಿಂಗ್‌ನಲ್ಲಿ ಸುತ್ತ ಸಿಸಿಟಿವಿ ಮುಚ್ಚುವಂತೆ ಕಾಗದ ಹಚ್ಚಿರುವುದು ಕಾಣುತ್ತದೆ. “ಗೃಹ ಸಚಿವರು ಪಾಟ್ನಾಗೆ ಬಂದಾಗಲೆಲ್ಲಾ, ಹೋಟೆಲ್ ಲಿಫ್ಟ್‌ನಲ್ಲಿರುವ ಸಿಸಿಟಿವಿ ಮೇಲೆ ಕಾಗದ ಅಂಟಿಸಲಾಗುತ್ತದೆ. ಅವರು ಅಧಿಕಾರಿಗಳೊಂದಿಗೆ ರಹಸ್ಯ ಸಭೆ ನಡೆಸುತ್ತಾರಾ? ಇದು ಭದ್ರತಾ ಉಲ್ಲಂಘನೆ. ಏಕೆ ಈ ರಹಸ್ಯ?” ಎಂದು ಖೇರಾ ಪ್ರಶ್ನಿಸಿದ್ದಾರೆ.

ಹರಿಯಾಣ ಮತ್ತು ಬಿಹಾರ ಚುನಾವಣೆಗಳಲ್ಲಿ ಬಿಜೆಪಿ ಮತ್ತು ಭಾರತೀಯ ಚುನಾವಣಾ ಆಯೋಗ ಸೇರಿ “ಮತದಾರರ ಪಟ್ಟಿಯನ್ನು ಬದಲಾಯಿಸಿ ಜನರ ಹಕ್ಕು ಕಸಿದುಕೊಳ್ಳಲು ಪ್ರಯತ್ನಿಸುತ್ತಿವೆ” ಎಂದು ಗಂಭೀರ ಆರೋಪವನ್ನೂ ಅವರು ಮಾಡಿದ್ದಾರೆ.

“ತಲೆಮಾರುಗಳಿಂದ ಮತ ಚಲಾಯಿಸುತ್ತಿದ್ದವರ ಹೆಸರುಗಳನ್ನು ಪಟ್ಟಿಯಿಂದ ಅಳಿಸಲಾಗಿದೆ. ಬಿಹಾರದಲ್ಲಿ ಎಸ್‌ಐಆರ್ ಪ್ರದರ್ಶನ ವಿಫಲವಾಗಿದೆ. ಇದೇ ಮಾದರಿಯಲ್ಲಿ ಹರಿಯಾಣದಲ್ಲಿಯೂ ಮತ ಕಳವು ನಡೆದಿದೆ. ಇದೇ ಕಾರಣಕ್ಕೆ ಹರಿಯಾಣದಲ್ಲಿ ಸರ್ಕಾರ ರಚಿಸಲು ನಮಗೆ ಸಾಧ್ಯವಾಗಲಿಲ್ಲ” ಎಂದು ಖೇರಾ ಹೇಳಿದರು.

https://x.com/iamharmeetK/status/1988090435227857278?ref_src=twsrc%5Etfw%7Ctwcamp%5Etweetembed%7Ctwterm%5E1988090435227857278%7Ctwgr%5E2ca705039a0f4f794e6c70f1d5c10377abf33521%7Ctwcon%5Es1_&ref_url=https%3A%2F%2Fd-15801826642266879558.ampproject.net%2F2510081644000%2Fframe.html

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...