ಬರಪೀಡಿತ ಪ್ರದೇಶದಲ್ಲಿ ಕೃಷಿ ಪುನರುಜ್ಜೀವನಕ್ಕೆ ನಾಂದಿ ಹಾಡಿದ ವಿಧವೆಯರು, ಒಂಟಿ ಮಹಿಳೆಯರು

Date:

ದೇಶದ ಬರಪೀಡಿತ ಪ್ರದೇಶಗಳಲ್ಲಿ ಒಂದಾಗಿರುವ ಆಂಧ್ರಪ್ರದೇಶದ ಅನಂತಪುರ ಜಿಲ್ಲೆಯೂ ಒಂದು. ಅಲ್ಲಿನ ಅನೇಕ ರೈತ ಕುಟುಂಬಗಳು ಕೃಷಿ ನಷ್ಟದಿಂದ ಹತಾಶರಾಗಿದ್ದಾರೆ. ಕೃಷಿಯಿಂದ ವಿಮುಖರಾಗಿದ್ದಾರೆ. ಆದರೆ, ಅಂತಹ ಬರಪೀಡಿತ ಪ್ರದೇಶದಲ್ಲಿ ವಿಧವೆಯರು, ಪತಿಯಿಂದ ದೂರವಾದ ಮಹಿಳೆಯರು ಮತ್ತು ಒಂಟಿ ತಾಯಂದಿರು ‘REDS ಸ್ವಯಂಸೇವಾ ಸಂಸ್ಥೆ’ಯ ನೇತೃತ್ವದಲ್ಲಿ ಸಾಮೂಹಿಕ ನೈಸರ್ಗಿಕ ಕೃಷಿಯಲ್ಲಿ ತೊಡಗಿದ್ದಾರೆ. ಉತ್ತಮ ಬೆಳೆಗಳನ್ನು ಬೆಳೆಯುತ್ತಿದ್ದಾರೆ. ಮಾತ್ರವಲ್ಲದೆ, ಘನತೆ ಮತ್ತು ಆರ್ಥಿಕ ಸ್ವಾತಂತ್ರ್ಯದ ಬದುಕು ಕಟ್ಟಿಕೊಂಡಿದ್ದಾರೆ. ಕೃಷಿಯಲ್ಲಿ ಮಾದರಿಯಾಗಿದ್ದಾರೆ.

ತಮ್ಮ ಗಂಡಂದಿರ ಆತ್ಮಹತ್ಯೆ ಅಥವಾ ಪತಿಯರು ಊರು ತೊರೆದ ಕಾರಣದಿಂದಾಗಿ ಏಕಾಂಗಿಯಾಗಿರುವ ಮಹಿಳೆಯರು, ಈಗ ಶಕ್ತಿ ಮತ್ತು ಸ್ವಾವಲಂಬನೆಯ ಸಂಕೇತಗಳಾಗಿ ಹೊರಹೊಮ್ಮುತ್ತಿದ್ದಾರೆ. ರಾಸಾಯನಿಕಗಳು ಅಥವಾ ಕೀಟನಾಶಕಗಳನ್ನು ಬಳಸದೆ ಅವರು ವಿವಿಧ ತರಕಾರಿಗಳು, ಹಣ್ಣುಗಳು, ಸೊಪ್ಪುಗಳು ಹಾಗೂ ರಾಗಿ ಬೆಳೆಗಳನ್ನು ಬೆಳೆಯುತ್ತಿದ್ದಾರೆ. ಸ್ಥಳೀಯರಿಗೆ ಉತ್ಪನ್ನಗಳನ್ನು ಒದಗಿಸುತ್ತಾರೆ ಮತ್ತು ಸುಸ್ಥಿರ ಜೀವನೋಪಾಯ ಕಟ್ಟಿಕೊಂಡಿದ್ದಾರೆ.

ವಿಧವೆಯರು ಅಥವಾ ಒಬ್ಬಂಟಿ ಮಹಿಳೆಯರ ಜೀವನ ಪರಿಸ್ಥಿತಿಗಳನ್ನು ಗಮನಿಸಿದ REDS ಸಂಸ್ಥಾಪಕಿ ಭಾನುಜಾ ಅವರು, ಅಂತಹ ಮಹಿಳೆಯರಿಗಾಗಿ ಕೃಷಿ ರಂಗದಲ್ಲಿ ವೇದಿಕೆಯನ್ನು ರಚಿಸಿದ್ದಾರೆ. ಅನಂತಪುರ ಗ್ರಾಮೀಣ ಮಂಡಲದ ಕುರುಗುಂಟದಲ್ಲಿ, REDS ಸಂಸ್ಥೆಯು ಎಂಟು ಎಕರೆ ಕೃಷಿ ಭೂಮಿಯನ್ನು ಗುತ್ತಿಗೆಗೆ ಪಡೆದಿದೆ. ಈ ಭೂಮಿಯಲ್ಲಿ ‘ಮನ ಭೂಮಿ – ಮಹಿಳಾ ಸಾಮೂಹಿಕ ನೈಸರ್ಗಿಕ ಕೃಷಿ’ ಎಂಬ ಬ್ಯಾನರ್ ಅಡಿಯಲ್ಲಿ, ಸಿ ಅಲಿವೇಲಮ್ಮ, ಚೌಡಮ್ಮ, ಲಕ್ಷ್ಮಿದೇವಿ, ಕೆ ರತ್ನಮ್ಮ, ಗಂಗಮ್ಮ ಹಾಗೂ ಸಿ ಪೆದ್ದಕ್ಕ ಮುಂತಾದ ಒಬ್ಬಂಟಿ ಮಹಿಳೆಯರು, ವಿಧವೆಯರು ಕೃಷಿ ಮಾಡುತ್ತಿದ್ದಾರೆ. ಅವರಿಗೆ REDS ಸಂಸ್ಥೆಯು ಬೀಜಗಳು ಮತ್ತು ಅಗತ್ಯ ವಸ್ತುಗಳನ್ನು ಪೂರೈಸುತ್ತಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ವರದಿ ಓದಿದ್ದೀರಾ?: ‘ಸಂಸತ್ತು ಸರ್ವೋಚ್ಚ’ ಎಂದಿದ್ದಾರೆ ಧನಕರ್; ನಿಜಕ್ಕೂ ಯಾವುದು ಶ್ರೇಷ್ಠ ಮತ್ತು ಸರ್ವೋಚ್ಚ?

ಜಿಲ್ಲೆಯಲ್ಲಿ ಕೃಷಿ ಮಾಡುತ್ತಿರುವ ಪ್ರಿತಿಯೊಬ್ಬ ಒಬ್ಬಂಟಿ ಮಹಿಳೆಗೂ ವಿಭಿನ್ನ ಕಥೆಗಳಿವೆ. ಆದರೆ, ಬಡತನ ಮತ್ತು ಪರಾವಲಂಬನೆಯ ವಿರುದ್ಧದ ಹೋರಾಟದಲ್ಲಿ ಅವರು ಒಗ್ಗಟ್ಟಿನಿಂದ ದುಡಿಯುತ್ತಿದ್ದಾರೆ. ಅವರು ವಾಟ್ಸ್‌ಆ್ಯಪ್‌ ಗ್ರೂಪ್‌ವೊಂದನ್ನು ರಚಿಸಿಕೊಂಡಿದ್ದು, ಅದರ ಮೂಲಕ ಅನಂತಪುರ ನಗರ ಖರೀದಿದಾರರೊಂದಿಗೆ ವ್ಯಾಪಾರ ವಹಿವಾಟು ನಡೆಸುತ್ತಿದ್ದಾರೆ. ಗುಂಪಿನಲ್ಲಿ ದೈನಂದಿನ ಕೃಷಿ ಉತ್ಪನ್ನಗಳ ಬೇಡಿಕೆ-ಪೂರೈಕೆಯ ಮಾಹಿತಿಯನ್ನು ಹಂಚಿಕೊಳ್ಳುತ್ತಾರೆ. ಅವರ ರಾಸಾಯನಿಕ ಮುಕ್ತ, ಹೊಸದಾಗಿ ಕೊಯ್ಲು ಮಾಡಿದ ಉತ್ಪನ್ನಗಳಿಗೆ ಹೆಚ್ಚಿನ ಬೇಡಿಕೆಯಿದೆ.

ಆರಂಭದಲ್ಲಿ REDS ಸಂಸ್ಥೆಯು ಮಹಿಳೆಯರನ್ನು ರಾಗಿ ಬೆಳೆಯುವುದರಲ್ಲಿ ತೊಡಗಿಸಿತು. ಬಳಿಕ, ಕಡಿಮೆ ವೆಚ್ಚದ, ಹವಾಮಾನ ವೈಪರೀತ್ಯದ ನಡುವೆಯೂ ಬೆಳೆಯಬಲ್ಲ ಹಾಗೂ ಶೀಘ್ರ ಆದಾಯದ ತರಕಾರಿಗಳು ಮತ್ತು ಹಣ್ಣುಗಳ ಬೆಳೆಗಳನ್ನು ಪರಿಚಯಿಸಿತು. ಈಗ ನಾನಾ ರೀತಿಯ ಬೆಳೆಗಳನ್ನು ಮಹಿಳೆಯರು ಬೆಳೆಯುತ್ತಿದ್ದಾರೆ.

ಕೃಪೆ: ಟಿಎನ್‌ಐಇ

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಪ್ರಧಾನಿ ಮೋದಿ ಅಮೆರಿಕಕ್ಕೆ 100% ಶರಣಾಗಿದ್ದಾರೆ: ರಾಹುಲ್ ಗಾಂಧಿ

ಪಶ್ಚಿಮ ಏಷ್ಯಾದಲ್ಲಿನ ಯುದ್ಧದ ಪರಿಸ್ಥಿತಿ ಮತ್ತು ದೇಶದ ಆರ್ಥಿಕ ನೀತಿಗಳ ಕುರಿತು...

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

18 ಸಾವಿರ ಕೋಟಿ ರೂ. ದಾಟಿದ ದೇಶದ ಕ್ರೀಡಾ ಅರ್ಥವ್ಯವಸ್ಥೆ; ಕ್ರಿಕೆಟ್ ದರ್ಬಾರಿನಲ್ಲಿ ಸೊರಗಿದ ಇತರ ಆಟಗಳು

ಐಪಿಎಲ್‌ನಲ್ಲಿ ಕೇವಲ ಬೆಂಚ್ ಕಾಯುವ ಸಾಮಾನ್ಯ ಕ್ರಿಕೆಟ್ ಆಟಗಾರನೊಬ್ಬ ಕೋಟ್ಯಾಧಿಪತಿಯಾಗಿ ಐಷಾರಾಮಿ...