ಮಧ್ಯಪ್ರದೇಶದಲ್ಲಿ ಕಾಮುಕರ ಅಟ್ಟಹಾಸ; ಪತಿಯನ್ನು ಮರಕ್ಕೆ ಕಟ್ಟಿ ಪತ್ನಿ ಮೇಲೆ ಸಾಮೂಹಿಕ ಅತ್ಯಾಚಾರ

Date:

ಕೋಲ್ಕತ್ತಾ ಟ್ರೈನಿ ವೈದ್ಯ ಅತ್ಯಾಚಾರ-ಹತ್ಯೆ ಪ್ರಕರಣ ಮತ್ತು ಮಹಾರಾಷ್ಟ್ರದ ಬದ್ಲಾಪುರದಲ್ಲಿನ ಅಪ್ರಾಪ್ತ ಬಾಲಕಿಯ ಮೇಲಿನ ಅತ್ಯಾಚಾರ ಪ್ರಕರಣಗಳ ವಿರುದ್ಧದ ಆಕ್ರೋಶ ಮುಂದುವರೆದಿದೆ. ಹಲವಾರು ಪ್ರತಿಭಟನೆಗಳು ನಡೆಯುತ್ತಿದೆ. ಇದೇ ಸಂದರ್ಭದಲ್ಲಿ ಮಧ್ಯಪ್ರದೇಶದಲ್ಲಿ ಎರಡು ಭೀಕರ ಅತ್ಯಾಚಾರ ಪ್ರಕರಣಗಳು ವರದಿಯಾಗಿವೆ. ಇಂಧೋರ್ ಮತ್ತು ರೇವಾದಲ್ಲಿ ಪ್ರತ್ಯೇಕ ಘಟನೆಗಳಲ್ಲಿ ಇಬ್ಬರು ಮಹಿಳೆಯರ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿದೆ.

ಅಕ್ಟೋಬರ್‌ 21ರಂದು ರೇವಾದಲ್ಲಿ ಅಮಾನುಷ ಘಟನೆ ನಡೆದಿದೆ. ದೇವಸ್ಥಾನದ ಸಮೀಪದಲ್ಲಿದ್ದ ಪಿಕ್ನಿಕ್ ಸ್ಪಾಟ್‌ನಲ್ಲಿ ದಂಪತಿಗಳ ಮೇಲೆ ಕಾಮುಕರ ಗುಂಪು  ಹಲ್ಲೆ ನಡೆಸಿದೆ. ಪತಿಯನ್ನು ಮರಕ್ಕೆ ಕಟ್ಟಿಹಾಕಿ ಪತ್ನಿಯ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದೆ. ಕಾಮುಕರ ಗುಂಪು ತಮ್ಮ ಕೃತ್ಯವನ್ನು ಮೊಬೈಲ್‌ನಲ್ಲಿ ಚಿತ್ರೀಕರಿಸಿದ್ದು, ಪೊಲೀಸರಿಗೆ ದೂರು ನೀಡಿದರೆ, ವಿಡಿಯೋವನ್ನು ಸಾಮಾಜಿಕ ಜಾಲತಾಣದಲ್ಲಿ ಹರಿಬಿಡುವುದಾಗಿ ಬೆದರಿಕೆ ಹಾಕಿದೆ.

ಮರುದಿನ ದಂಪತಿಗಳು ಪೊಲೀಸರಿಗೆ ದೂರು ನೀಡಿದ್ದು, ಪ್ರಕರಣ ದಾಖಲಿಸಿಕೊಂಡ ಪೊಲೀಸರು ಕೆಲ ಆರೋಪಿಗಳನ್ನು ಬಂಧಿಸಿದ್ದಾರೆ. ಉಳಿದ ಆರೋಪಿಗಳಿಗಾಗಿ ಶೋಧ ನಡೆಸುತ್ತಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಅಕ್ಟೋಬರ್ 22ರಂದು ಇಂಧೋರ್‌ನಲ್ಲಿ ನಿರಾಶ್ರಿತ ಮಹಿಳೆಯ ಮೇಲೆ ಸಾಮೂಹಿಕ ಅತ್ಯಾಚಾರ ಕೃತ್ಯ ನಡೆದಿದೆ. ಮಂಗಳವಾರ ಮುಂಜಾನೆ 4 ಗಂಟೆಯ ಸಮಯದಲ್ಲಿ ದಿನಗೂಲಿ ಕಾರ್ಮಿಕ ಆಕೆಯ ಮೇಲೆ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ.

ಇಂಧೋರ್‌ನ ಸದರ್ ಬಜಾರ್ ಪ್ರದೇಶದಲ್ಲಿ ಸಂತ್ರಸ್ತ ಮಹಿಳೆ ರಕ್ತಸ್ರಾವ ಮತ್ತು ಅರೆಬೆತ್ತಲೆಯಾಗಿ ಅಲೆದಾಡುತ್ತಿರುವುದು ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಪೊಲೀಸರು ವಿಡಿಯೋ ತುಣುಕುಗಳನ್ನು ಪರಿಶೀಲಿಸಿದ್ದು, ಸಂತ್ರಸ್ತೆಯನ್ನು ಆರೋಪಿಯು ತ್ಯಾಜ್ಯ ಸಂಸ್ಕರಣಾ ಕೇಂದ್ರಕ್ಕೆ ಎಳೆದೊಯ್ದು ಅತ್ಯಾಚಾರ ಎಸಗಿದ್ದಾರೆ ಎಂದು ತಿಳಿಸಿದ್ದಾರೆ.

ಎರಡು ದಿನಗಳಲ್ಲಿ ಎರಡು ಭೀಕರ ಅತ್ಯಾಚಾರ ಪ್ರಕರಣಗಳು ಘಟಿಸಿದ್ದು, ಆಡಳಿತಾರೂಢ ಬಿಜೆಪಿ ವಿರುದ್ಧ ಕಾಂಗ್ರೆಸ್‌ ವಾಗ್ದಾಳಿ ನಡೆಸಿದೆ. ಕಾಂಗ್ರೆಸ್ ಮುಖ್ಯಸ್ಥ ಜಿತು ಪಟ್ವಾರಿ, “ಮುಖ್ಯಮಂತ್ರಿ ಮೋಹನ್ ಯಾದವ್ ಅವರು ಕಾರ್ಯಕ್ರಮದಲ್ಲಿ ಬ್ಯುಸಿಯಾಗಿದ್ದಾರೆ. ರಾಜ್ಯದ ಮಗಳು ರಸ್ತೆಯಲ್ಲಿ ಬೆತ್ತಲೆಯಾಗಿದ್ದಾಳೆ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇಂಧೋರ್ ಮಹಿಳೆ ಕಂಡುಬಂದ ಸ್ಥಿತಿಯನ್ನು ಮಹಾಭಾರತದ ದ್ರೌಪದಿ ವಸ್ತ್ರಾಪಹರಣಕ್ಕೆ ಹೋಲಿಸಿರುವ ಪಟ್ಟಾರಿ, “ತನ್ನನ್ನು ತಾವು ‘ದೇವರು’ ಎಂದು ಪರಿಗಣಿಸುವ ಮುಖ್ಯಮಂತ್ರಿ ಯಾದವ್ ಅವರಿಗೆ ದ್ರೌಪದಿಯ ವಸ್ತ್ರಾಪಹರಣವು ಕಾಣಿಸಲಿಲ್ಲವೇ? ನಮ್ಮ ಹೆಣ್ಣುಮಕ್ಕಳ ಸ್ಥಿತಿಯ ಬಗ್ಗೆ ನನಗೆ ಆತಂಕವಿದೆ. ನಮ್ಮ ಹೆಣ್ಣುಮಕ್ಕಳ ಮೇಲಿನ ಅಪರಾಧಗಳು ನಿಲ್ಲುತ್ತಿಲ್ಲ. ಆದರೆ, ಮುಖ್ಯಮಂತ್ರಿ ಕಣ್ಣು ಮುಚ್ಚಿ ಕುಳಿತಿದ್ದಾರೆ” ಎಂದು ಕಿಡಿಕಾರಿದ್ದಾರೆ.

 “ಇಂದೋರ್ ಪ್ರಕರಣದಲ್ಲಿ ಆರೋಪಿಗಳನ್ನು ಬಂಧಿಸಲಾಗಿದೆ. ಆರೋಪಿಗಳಿಗೆ ಕಾನೂನು ತಕ್ಕ ಪಾಠ ಕಲಿಸಲಾಗುತ್ತದೆ. ಅವರನ್ನು ಬಿಡುವುದಿಲ್ಲ” ಎಂದು ಸಚಿವ ನರೇಂದ್ರ ಶಿವಾಜಿ ಪಟೇಲ್ ಹೇಳಿದ್ದಾರೆ.

ಈ ಹಿಂದೆ, 2023ರ ಸೆಪ್ಟೆಂಬರ್‌ನಲ್ಲಿ ಇದೇ ಮಧ್ಯಪ್ರದೇಶದ ಉಜ್ಜಯಿನಿಯಲ್ಲಿ ಇಂಥದ್ದೇ ಭೀಕರ ಕೃತ್ಯವೊಂದು ನಡೆದಿತ್ತು. ಅಪ್ತಾಪ್ತ ಬಾಲಕಿಯೊಬ್ಬಳ ಮೇಲೆ ಅತ್ಯಾಚಾರ ಎಸಗಲಾಗಿತ್ತು. ಆಕೆ ರಕ್ತಸ್ರಾವದಿಂದ ಸಹಾಯಕ್ಕಾಗಿ ಮನೆ-ಮನೆಗಳ ಎದುರು ಅಂಗಲಾಚಿದ್ದಳು. ಆದರೂ, ಯಾರೂ ಆಕೆಯ ನೆರವಿಗೆ ಬರಲಿಲ್ಲ. ದೇವಸ್ಥಾನದ ಅರ್ಚಕರೊಬ್ಬರು ಆಕೆಯನ್ನು ರಕ್ಷಿಸಿ, ಆಸ್ಪತ್ರೆಗೆ ದಾಖಲಿಸಿದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...