ದುರಭ್ಯಾಸ ಪ್ರಶ್ನಿಸಿದ್ದಕ್ಕೆ ಪತಿಯ ಗುಪ್ತಾಂಗಕ್ಕೆ ಸಿಗರೇಟ್‌ನಿಂದ ಚಿತ್ರಹಿಂಸೆ ನೀಡಿದ ಪತ್ನಿ: ವಿಡಿಯೋ ವೈರಲ್ ಬಳಿಕ ಬಂಧನ

Date:

ಮದ್ಯ ಹಾಗೂ ಸಿಗರೇಟ್‌ನ ಚಟ ಹೊಂದಿದ್ದ ಪತ್ನಿಯನ್ನು ಪತಿಯೋರ್ವ ಪ್ರಶ್ನಿಸಿದ್ದಕ್ಕೆ ಕೋಪಗೊಂಡ ಪತ್ನಿ, ಪತಿಯನ್ನು ಕಟ್ಟಿ ಹಾಕಿ ಚಿತ್ರಹಿಂಸೆ ಕೊಟ್ಟ ಆಘಾತಕಾರಿ ಘಟನೆಯೊಂದು ಉತ್ತರ ಪ್ರದೇಶದಿಂದ ವರದಿಯಾಗಿದೆ.

ಉತ್ತರ ಪ್ರದೇಶ ಸಿಯೋಹರಾ ಜಿಲ್ಲೆಯಲ್ಲಿ ಈ ಆಘಾತಕಾರಿ ಘಟನೆ ನಡೆದಿದ್ದು, ವಿಡಿಯೋ ವೈರಲಾದ ಬಳಿಕ ತಪ್ಪಿತಸ್ಥ ಮಹಿಳೆಯನ್ನು ಪೊಲೀಸರು ಬಂಧಿಸಿರುವುದಾಗಿ ತಿಳಿದುಬಂದಿದೆ.

ಬಂಧಿತ ಮಹಿಳೆಯನ್ನು ಮೆಹರ್‌ ಜಹಾನ್(30) ಎಂದು ಗುರುತಿಸಲಾಗಿದೆ. ಪತ್ನಿಯ ಚಿತ್ರಹಿಂಸೆಯಿಂದ ನಲುಗಿದ ಪತಿ ಮನ್ನಾನ್ ಝೈದಿ ಎಂಬಾತನನ್ನು ಸದ್ಯ ರಕ್ಷಣೆ ಮಾಡಲಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಏನಿದು ಘಟನೆ?

ಮೆಹರ್‌ ಜಹಾನ್ ಹಾಗೂ ಮನ್ನಾನ್ ಝೈದಿ ಪರಸ್ಪರ ಪ್ರೀತಿಸುತ್ತಿದ್ದರು. 2023ರ ನವೆಂಬರ್ 17ರಂದು ಉತ್ತರ ಪ್ರದೇಶದ ಬಿಜನೋರ್‌ನಲ್ಲಿ ವಿವಾಹವಾಗಿದ್ದರು. ಮದುವೆಯ ಬಳಿಕ ಕೌಟುಂಬಿಕ ಕಲಹದಿಂದಾಗಿ ಬೇರೆಯೇ ಮನೆ ಮಾಡಿಕೊಂಡು, ವಾಸವಾಗಿದ್ದರು.

ಇವರಿಬ್ಬರ ದಾಂಪತ್ಯದ ನಡುವೆ ಬಿರುಕು ಮೂಡಿದ ಬಳಿಕ ಮೆಹರ್‌ ಮದ್ಯಪಾನ ಹಾಗೂ ಸಿಗರೇಟ್‌ ಸೇದಲು ಆರಂಭಿಸಿದ್ದಾಳೆ. ಈ ದುರಭ್ಯಾಸವನ್ನು ನಿಲ್ಲಿಸಬೇಕು ಎಂದು ಗಂಡ ಬುದ್ಧಿಮಾತು ಹೇಳಿದ್ದರಿಂದ ಕೋಪಗೊಂಡ ಪತ್ನಿ, ನಿನ್ನ ಮೇಲೆ ವರದಕ್ಷಿಣೆ ಕಿರುಕುಳದ ಸುಳ್ಳು ಆರೋಪ ಹೊರಿಸಿ, ಜೈಲಿಗೆ ಕಳುಹಿಸುವುದಾಗಿ ಬೆದರಿಸಿದ್ದಾರೆ.

ಇದರಿಂದ ಸುಮ್ಮನಾಗಿದ್ದರೂ ಮತ್ತೆ ಮತ್ತೆ ದುರಾಭ್ಯಾಸವನ್ನು ನಿಲ್ಲಿಸಿರಲಿಲ್ಲ. ಈ ಮಧ್ಯೆ ಪತ್ನಿಯಿಂದಲೇ ತನಗೆ ಜೀವ ಬೆದರಿಕೆ ಇರುವುದನ್ನು ಅರಿತಿದ್ದ ಗಂಡ, ಆಕೆಗೆ ಗೊತ್ತಾಗದಂತೆ ಮನೆಯಲ್ಲಿ ಸಿಸಿಟಿವಿ ಅಳವಡಿಸಿದ್ದಾನೆ. ಈ ನಡುವೆ ಗಂಡ ಮತ್ತೆ ಬುದ್ಧಿಮಾತು ಹೇಳಿದ್ದಕ್ಕೆ, ದಂಪತಿಗಳ ನಡುವೆ ಜಗಳವಾಗಿದೆ.

ಈ ನಡುವೆ ಗಂಡನಿಗೆ ಹಾಲಿನಲ್ಲಿ ಮತ್ತು ಬರುವ ಔಷಧಿ ನೀಡಿದ ಆರೋಪಿ ಪತ್ನಿ, ಪ್ರಜ್ಞೆ ತಪ್ಪಿದ ಬಳಿಕ ಆತನ ಎರಡೂ ಕೈಗಳನ್ನು ಕಟ್ಟಿ ಹಾಕಿದ್ದಾಳೆ. ಆ ಬಳಿಕ ಗುಪ್ತಾಂಗಕ್ಕೆ ಸಿಗರೇಟ್‌ನಿಂದ ಚಿತ್ರಹಿಂಸೆ ನೀಡಿದ್ದಾಳೆ. ಈ ಎಲ್ಲ ಬೆಳವಣಿಗೆಯು ಗಂಡ ಮನೆಯಲ್ಲಿ ಹಾಕಿದ್ದ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಆ ಬಳಿಕ ಈ ವಿಡಿಯೋವನ್ನು ಆಧಾರವಾಗಿರಿಸಿ, ಗಂಡ ಪೊಲೀಸರಿಗೆ ದೂರು ನೀಡಿದ್ದಾನೆ.

ದೂರಿನಲ್ಲಿ, “ಪತ್ನಿ ಮೆಹರ್ ತನ್ನನ್ನು ದೈಹಿಕವಾಗಿ ನಿಂದಿಸಿದ್ದಾಳೆ. ತನ್ನ ಮೇಲೆ ಸುಳ್ಳು ಆರೋಪ ಹೊರಿಸುವುದಾಗಿ ಬೆದರಿಕೆ ಹಾಕಿದ್ದಾಳೆ. ತನ್ನ ಖಾಸಗಿ ಅಂಗಗಳನ್ನು ಸಿಗರೇಟಿನಿಂದ ಸುಡುವ ಮುನ್ನ ನನ್ನ ಕೈಕಾಲುಗಳನ್ನು ಕಟ್ಟಿ ಹಾಕಿದ್ದಾಳೆ” ಎಂದು ಆರೋಪಿಸಿದ್ದಾನೆ.

ಪತಿ ದೂರು ಮತ್ತು ಸಿಸಿಟಿವಿ ದೃಶ್ಯಾವಳಿಗಳನ್ನು ಸಲ್ಲಿಸಿದ ನಂತರ ಸಿಯೋಹರಾ ಜಿಲ್ಲಾ ಪೊಲೀಸರು ಕ್ರಮ ಕೈಗೊಂಡಿದ್ದು, ಭಾನುವಾರ ಮಹಿಳೆಯನ್ನು ಬಂಧಿಸಿದ್ದಾರೆ. ದೂರಿನ ಆಧಾರದ ಮೇಲೆ ಪೊಲೀಸರು ಆರೋಪಿ ಮಹಿಳೆಯ ವಿರುದ್ಧ ಸಂಬಂಧಿತ ಸೆಕ್ಷನ್‌ಗಳ ಅಡಿಯಲ್ಲಿ ಕೇಸ್‌ ದಾಖಲಿಸಿಕೊಂಡಿದ್ದಾರೆ ಎಂದು ಎಸ್‌ಪಿ ಪೂರ್ವ ಧರಂಪಾಲ್ ಸಿಂಗ್ ತಿಳಿಸಿದ್ದಾರೆ.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...