ಬಹುಮತದತ್ತ ಸುಳಿಯದ ಬಿಜೆಪಿ: ಇಂಡಿಯಾ ಮೈತ್ರಿಕೂಟಕ್ಕೆ ಟಿಡಿಪಿ, ಜೆಡಿಯು ಬೆಂಬಲ?

Date:

ಪ್ರಸ್ತುತ ಮತ ಎಣಿಕೆ ಸ್ಥಿತಿಗತಿಗಳನ್ನು ಗಮನಿಸಿದರೆ ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಅನಿರೀಕ್ಷಿತ ತಿರುವುಗಳು ನಡೆಯುವ ಸಾಧ್ಯತೆಗಳಿವೆ. 400 ಸಂಖ್ಯೆ ಗೆಲ್ಲುತ್ತೇವೆ ಎಂದು ಹೇಳುತ್ತಿದ್ದ ಬಿಜೆಪಿ ಸದ್ಯ 230 ಕ್ಕೂ ಹೆಚ್ಚು ಸ್ಥಾನಗಳಲ್ಲಿ ಮಾತ್ರ ಮುನ್ನಡೆ ಸಾಧಿಸಿದೆ. ಕಾಂಗ್ರೆಸ್ 97 ಸ್ಥಾನಗಳಲ್ಲಿ ಮುಂದಿದೆ.

ಎನ್‌ಡಿಎ ಮೈತ್ರಿಕೂಟದ ಪಕ್ಷಗಳಾಗಿರುವ ಬಿಹಾರದ ಜೆಡಿಯು ಹಾಗೂ ಆಂಧ್ರ ಪ್ರದೇಶದ ಟಿಡಿಪಿ ಉತ್ತಮ ಮುನ್ನಡೆ ಸಾಧಿಸಿವೆ. 40 ಕ್ಷೇತ್ರಗಳ ಬಿಹಾರದಲ್ಲಿ ಜೆಡಿಯು 15 ಕ್ಷೇತ್ರಗಳಲ್ಲಿ ಮುಂದಿದ್ದರೆ, 25 ಕ್ಷೇತ್ರವಿರುವ ಆಂಧ್ರ ಪ್ರದೇಶದಲ್ಲಿ ಟಿಡಿಪಿ 16 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದೆ.

ಬಿಜೆಪಿ ನೇತೃತ್ವದಲ್ಲಿ ಎನ್‌ಡಿಎ ಬಹುಮತ ಪಡೆಯಲು ಇವೆರೆಡು ಪಕ್ಷಗಳು ಗಣನೀಯ ಪಾತ್ರವಹಿಸಲಿವೆ. ಸದ್ಯ 230ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಇಂಡಿಯಾ ಒಕ್ಕೂಟದ ಪಕ್ಷಗಳು ಮುನ್ನಡೆ ಕಾಯ್ದುಕೊಂಡಿವೆ.  ಮೂಲಗಳ ಪ್ರಕಾರ ಇವೆರೆಡು ಪಕ್ಷಗಳು ಇಂಡಿಯಾ ಮೈತ್ರಿಕೂಟಕ್ಕೆ ಬೆಂಬಲ ನೀಡುವ ಸಾಧ್ಯತೆಯಿದೆ ಎನ್ನಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಹಣದ ಹರಿವು, ಆತ್ಮಹತ್ಯೆಗಳು, ಅಧಿಕಾರಸ್ಥರು ಮತ್ತು ಬಡವರು

ಬೆಂಬಲ ಪಡೆಯಲು ಇಂಡಿಯಾ ಒಕ್ಕೂಟದ ನಾಯಕರು ಟಿಡಿಪಿ ಹಾಗೂ ಜೆಡಿಯು ನಾಯಕರೊಂದಿಗೆ ಮಾತುಕತೆ ನಡೆಸುತ್ತಿದ್ದು, ಎರಡೂ ಕಡೆಗಳಿಂದಲೂ ಸಕಾರಾತ್ಮಕ ಪ್ರತಿಕ್ರಿಯೆ ಬಂದಿದೆ ಎಂದು ಹೇಳಲಾಗಿದೆ. ಒಂದು ವೇಳೆ ಎರಡೂ ಪಕ್ಷಗಳು ಇಂಡಿಯಾ ಒಕ್ಕೂಟವನ್ನು ಬೆಂಬಲಿಸಿದರೆ ಮೈತ್ರಿಕೂಟದ ಸರ್ಕಾರದಲ್ಲಿ ಮಹತ್ವದ ಸ್ಥಾನಮಾನಗಳನ್ನು ನೀಡುವ ಭರವಸೆಯನ್ನು ಇಂಡಿಯಾ ಒಕ್ಕೂಟದ ನಾಯಕರು ನೀಡಿದ್ದಾರೆ ಎನ್ನಲಾಗಿದೆ.

ಒಂದು ವೇಳೆ ಎನ್‌ಡಿಎ ಮೈತ್ರಿಕೂಟದಲ್ಲಿ ಇವೆರೆಡು ಪಕ್ಷಗಳು ಉಳಿದುಕೊಂಡು ಬಿಜೆಪಿ ನೇತೃತ್ವದ ಸರ್ಕಾರ ರಚನೆಯಾದರೆ ಮಹತ್ವದ ಹುದ್ದೆಗಳನ್ನು ನೀಡಬೇಕಾಗುತ್ತದೆ. ಕಮಲ ಪಕ್ಷದ ನಾಯಕರು ಮೈತ್ರಿಕೂಟದ ಪಕ್ಷಗಳಿಗೆ ಹೆಚ್ಚು ಮಣೆ ನೀಡುವ ಸಾಧ್ಯತೆ ಕಡಿಮೆ. ಈ ಹಿನ್ನೆಲೆಯಲ್ಲಿ ಚಂದ್ರ ಬಾಬು ನಾಯ್ಡು ನೇತೃತ್ವದ ತೆಲುಗು ದೇಶಂ ಹಾಗೂ ಬಿಹಾರದ ಜೆಡಿಯು ಇಂಡಿಯಾ ಒಕ್ಕೂಟಕ್ಕೆ ಸೇರ್ಪಡೆಯಾಗಲಿದ್ದಾರೆ ಎಂದು ಮೂಲಗಳು ತಿಳಿಸಿವೆ.

ನಿತೀಶ್ ಕುಮಾರ್ ಈ ಮೊದಲು ಇಂಡಿಯಾ ಒಕ್ಕೂಟದಲ್ಲಿ ಇದ್ದವರು. ಕೆಲವು ಭಿನ್ನಾಭಿಪ್ರಾಯಗಳಿಂದ ಎನ್‌ಡಿಎಗೆ ಸೇರ್ಪಡೆಗೊಂಡಿದ್ದಾರೆ. ಪುನಃ ಹಳೆಯ ಸ್ನೇಹಿತನತ್ತ ವಾಲಿದರೆ ಆಶ್ಚರ್ಯವೇನಿಲ್ಲ.

ಈ ನಡುವೆ ತೆಲುಗು ದೇಶಂ ಪಕ್ಷ ಆಂಧ್ರ ಪ್ರದೇಶದ ರಾಜ್ಯ ವಿಧಾನ ಸಭೆಯಲ್ಲಿ ಅಭೂತಪೂರ್ವ ಗೆಲುವು ಸಾಧಿಸುತ್ತಿದೆ. ಇತ್ತೀಚಿನ ವರದಿಗಳಂತೆ 175 ವಿಧಾನಸಭಾ ಕ್ಷೇತ್ರಗಳಲ್ಲಿ ಟಿಡಿಪಿ 125 ಸ್ಥಾನಗಳಲ್ಲಿ ಮುನ್ನಡೆ ಪಡೆದು ದೊಡ್ಡ ಗೆಲುವಿನ ನಿರೀಕ್ಷೆಯಲ್ಲಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...