ಹರಿಯಾಣ, ಮಹಾರಾಷ್ಟ್ರ ಮತದಾರರ ಪಟ್ಟಿ ಬಿಡುಗಡೆ ಕೋರಿ ಕಾಂಗ್ರೆಸ್ ಅರ್ಜಿ: 3 ತಿಂಗಳಲ್ಲಿ ಇತ್ಯರ್ಥವೆಂದ ಇಸಿಐ

Date:

2009 ಮತ್ತು 2024ರ ನಡುವೆ ಹರಿಯಾಣ ಮತ್ತು ಮಹಾರಾಷ್ಟ್ರದಲ್ಲಿ ನಡೆದ ಚುನಾವಣೆಗಳಿಗೆ ಮತದಾರರ ಪಟ್ಟಿಯನ್ನು ಕೋರಿ ಕಾಂಗ್ರೆಸ್ ಸಂಸದ ರಣದೀಪ್ ಸಿಂಗ್ ಸುರ್ಜೇವಾಲಾ ಸಲ್ಲಿಸಿರುವ ಅರ್ಜಿಯನ್ನು ಮೂರು ತಿಂಗಳ ಒಳಗಾಗಿ ಇತ್ಯರ್ಥಗೊಳಿಸಲಾಗುವುದು ಎಂದು ಭಾರತೀಯ ಚುನಾವಣಾ ಆಯೋಗವು (ಇಸಿಐ) ಮಂಗಳವಾರ ದೆಹಲಿ ಹೈಕೋರ್ಟ್‌ಗೆ ತಿಳಿಸಿದೆ.

ನ್ಯಾಯಮೂರ್ತಿ ಜ್ಯೋತಿ ಸಿಂಗ್ ಅವರು ಚುನಾವಣಾ ಆಯೋಗದ (ಇಸಿಐ) ವಕೀಲರ ಅರ್ಜಿಯನ್ನು ದಾಖಲಿಸಿಕೊಂಡರು. 2009ಕ್ಕೆ ಸಂಬಂಧಿಸಿದ ವಿವರಗಳು ಕೋರಿರುವ ಕಾರಣ ತಕ್ಷಣ ನಿರ್ಧಾರ ಕೈಗೊಳ್ಳಲು ಸಾಧ್ಯವಾಗದು. ಮೂರು ತಿಂಗಳುಗಳ ಅವಕಾಶಬೇಕು ಎಂದು ಇಸಿಐ ಪರ ವಕೀಲರು ಅರ್ಜಿಯಲ್ಲಿ ಕೋರಿದ್ದಾರೆ.

“ಇಸಿಐ ಅರ್ಜಿಯಲ್ಲಿ 2024ರ ಡಿಸೆಂಬರ್ 29ರಂದು ಸಲ್ಲಿಸಲಾದ ಅರ್ಜಿಯನ್ನು ಸಾಧ್ಯವಾದಷ್ಟು ಬೇಗ ಮತ್ತು ಇಂದಿನಿಂದ ಮೂರು ತಿಂಗಳ ನಂತರ ನಿರ್ಧರಿಸಲಾಗುವುದು ಎಂದು ಇಸಿಐ ತಿಳಿಸಿದ ಕಾರಣ ಈ ರಿಟ್ ಅರ್ಜಿಯನ್ನು ವಿಲೇವಾರಿ ಮಾಡಲಾಗಿದೆ” ಎಂದು ನ್ಯಾಯಾಲಯ ಹೇಳಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನು ಓದಿದ್ದೀರಾ? ಮತದಾರರ ಪಟ್ಟಿಯಲ್ಲಿ ಅಕ್ರಮ; ಮಹಾರಾಷ್ಟ್ರ ಸರ್ಕಾರ ಕಾನೂನುಬದ್ಧವಾಗಿ ಆಯ್ಕೆಯಾಗಿಲ್ಲ : ಕಾಂಗ್ರೆಸ್ ಆರೋಪ

ಸುರ್ಜೆವಾಲಾ ಪರ ವಾದ ಮಂಡಿಸಿದ ಹಿರಿಯ ವಕೀಲ ಅಭಿಷೇಕ್ ಸಿಂಘ್ವಿ, 2009 ಮತ್ತು 2024ರ ನಡುವೆ ಹರಿಯಾಣ ಮತ್ತು ಮಹಾರಾಷ್ಟ್ರದಲ್ಲಿ ನಡೆದ ಲೋಕಸಭೆ ಮತ್ತು ವಿಧಾನಸಭಾ ಚುನಾವಣೆಗಳಿಗೆ ಮತದಾರರ ಪಟ್ಟಿಯನ್ನು ಪೂರೈಸುವಂತೆ ಕೋರಿ 2024ರ ಡಿಸೆಂಬರ್ 29ರಂದು ಸಲ್ಲಿಸಿದ ಅರ್ಜಿಯ ಬಗ್ಗೆ ಇಸಿಐ ಇನ್ನೂ ಕೂಡಾ ನಿರ್ಧಾರ ತೆಗೆದುಕೊಂಡಿಲ್ಲ ಎಂದು ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು.

2025ರ ಫೆಬ್ರವರಿಯಲ್ಲಿ ಕಾನೂನಿನ ಪ್ರಕಾರ ಪ್ರಾತಿನಿಧ್ಯವನ್ನು ನಿರ್ಧರಿಸಲು ಆಯಾ ರಾಜ್ಯಗಳ ಮುಖ್ಯ ಚುನಾವಣಾ ಅಧಿಕಾರಿಗಳಿಗೆ ಇಸಿಐ ಪತ್ರವನ್ನು ನೀಡಿತ್ತು. ಆದರೆ ಈ ಬಗ್ಗೆ ನಿರ್ಧರಿಸಲು ಕಾನೂನಿನ ಪ್ರಕಾರ ಪ್ರಾತಿನಿಧ್ಯವನ್ನು ನಿರ್ಧರಿಸಲು ಆಯಾ ರಾಜ್ಯಗಳ ಮುಖ್ಯ ಚುನಾವಣಾ ಅಧಿಕಾರಿಗಳಿಗೆ ಇಸಿಐ ಪತ್ರವನ್ನು ನೀಡಿತ್ತು ಎಂದು ಸಿಂಘ್ವಿ ವಾದಿಸಿದ್ದಾರೆ.

ಇದನ್ನು ಓದಿದ್ದೀರಾ? 2024ರಲ್ಲಿ ದ್ವೇಷ ಭಾಷಣಗಳ ಸಂಖ್ಯೆ 74.4% ಹೆಚ್ಚಳ; ಬಿಜೆಪಿಗರೇ ಪ್ರಮುಖ ಆರೋಪಿಗಳು!

ಮಹಾರಾಷ್ಟ್ರ ಮತ್ತು ಹರಿಯಾಣದಲ್ಲಿ ಚುನಾವಣೆಯಲ್ಲಿ ಮತ ಪ್ರಮಾಣದಲ್ಲಿ ಭಾರೀ ವ್ಯತ್ಯಾಸ ಕಂಡುಬಂದಿದೆ. ಅದರಲ್ಲೂ ಮಹಾರಾಷ್ಟ್ರದ ಹಲವು ಬೂತ್‌ಗಳಲ್ಲಿ ಮತದಾರರ ಪ್ರಮಾಣ ಮತ್ತು ಎಣಿಕೆಯಾದ ಮತದ ನಡುವೆ ತೀವ್ರ ವ್ಯತ್ಯಾಸ ಕಂಡುಬಂದಿದೆ. ಈ ಬಗ್ಗೆ ಸ್ಥಳೀಯವಾಗಿ ಪ್ರತಿಭಟನೆಗಳು ನಡೆದಿದೆ. ಗ್ರಾಮಕ್ಕೆ ಗ್ರಾಮವೇ ಪ್ರತಿಭಟನೆ ನಡೆಸಿದೆ.

ಇವೆಲ್ಲವುದರ ನಡುವೆ 2009 ಮತ್ತು 2024ರ ನಡುವೆ ಹರಿಯಾಣ ಮತ್ತು ಮಹಾರಾಷ್ಟ್ರದಲ್ಲಿ ನಡೆದ ಚುನಾವಣೆಗಳಿಗೆ ಮತದಾರರ ಪಟ್ಟಿಯನ್ನು ಕೋರಿ ಕಾಂಗ್ರೆಸ್ ಸಂಸದ ರಣದೀಪ್ ಸಿಂಗ್ ಸುರ್ಜೇವಾಲಾ ಅರ್ಜಿಯನ್ನು ಸಲ್ಲಿಸಿದ್ದಾರೆ. ಕಳೆದ ಡಿಸೆಂಬರ್‌ನಲ್ಲಿ ಅರ್ಜಿ ಸಲ್ಲಿಸಿದ್ದರೂ ಇಸಿಐ ಈವರೆಗೂ ಸರಿಯಾದ ಮಾಹಿತಿ ನೀಡಿಲ್ಲ. ಇದೀಗ ಪ್ರಕರಣ ಹೈಕೋರ್ಟ್ ಮೆಟ್ಟಿಲೇರುತ್ತಿದ್ದಂತೆ ಮೂರು ತಿಂಗಳ ಅವಕಾಶ ಕೋರಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...