ತಲೆ ಕಡಿದು ತಂದವರಿಗೆ 10 ಕೋಟಿ ನೀಡುತ್ತೇನೆ ಎಂದ ಅಯೋಧ್ಯೆ ಸ್ವಾಮೀಜಿಗೆ ಸ್ಟಾಲಿನ್‌ ತಕ್ಕ ಉತ್ತರ

Date:

ತಮಿಳುನಾಡು ಡಿಎಂಕೆ ಸಚಿವ ಉದಯನಿಧಿ ಸ್ಟಾಲಿನ್‌ ತಲೆ ಕಡಿದು ತಂದವರಿಗೆ 10 ಕೋಟಿ ಬಹುಮಾನ ನೀಡುತ್ತೇನೆ ಎಂದು ಅಯೋಧ್ಯೆಯ ಸ್ವಾಮೀಜಿ ಪರಮಹಂಸ ಆಚಾರ್ಯ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.

ಒಂದು ಕೈಯಲ್ಲಿ ಉದಯನಿಧಿಯ ಪೋಸ್ಟರ್, ಮತ್ತೊಂದು ಕೈಯಲ್ಲಿ ಕತ್ತಿ ಹಿಡಿದುಕೊಂಡು ಉದಯನಿಧಿ ಅವರ ಶಿರಚ್ಛೇದನವನ್ನು ಸಾಂಕೇತಿಕವಾಗಿ ಪ್ರದರ್ಶಿಸುವ ವೀಡಿಯೊವನ್ನು ಬಿಡುಗಡೆ ಮಾಡಿದ್ದಾರೆ. ಪೋಸ್ಟರ್‌ಗೆ ಬೆಂಕಿ ಹಚ್ಚುವ ದೃಶ್ಯವನ್ನೂ ವಿಡಿಯೋದಲ್ಲಿ ಹಂಚಿಕೊಂಡಿದ್ದಾರೆ.

ಅಯೋಧ್ಯೆಯ ಸ್ವಾಮೀಜಿ ಪ್ರಚೋದನಕಾರಿ ಹೇಳಿಕೆಗೆ ಎಲ್ಲಡೆ ಆಕ್ರೋಶ ವ್ಯಕ್ತವಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದಕ್ಕೆ ಪ್ರತಿಕ್ರಿಯಿಸಿರುವ ಸಚಿವ ಉದಯನಿಧಿ ಸ್ಟಾಲಿನ್‌, ಸ್ವಾಮೀಜಿಯೊಬ್ಬರು ನನ್ನ ತಲೆಗೆ 10 ಕೋಟಿ ರೂ. ಬೆಲೆ ಕಟ್ಟಿದ್ದಾರೆ. ಅವರು ನಿಜವಾದ ಸಂತನೋ ಅಥವಾ ನಕಲಿ ಸಂತನೋ? ನನ್ನ ತಲೆಯನ್ನ ಏಕೆ ಅಷ್ಟು ಇಷ್ಟಪಡುತ್ತೀರಿ? ನಿಮಗೆ ಇಷ್ಟು ಹಣ ಎಲ್ಲಿಂದ ಬರುತ್ತದೆ? ನನ್ನ ತಲೆ ಕೂದಲು ಬಾಚುವುದಕ್ಕೆ ಏಕೆ 10 ಕೋಟಿ ರೂ. ಘೋಷಣೆ ಮಾಡಿದ್ದೀರಿ? 10 ರೂಪಾಯಿ ಬಾಚಣಿಗೆ ಕೊಟ್ಟರೆ ನಾನೇ ಬಾಚಿಕೊಳ್ಳುತ್ತೇನೆ ಎಂದು ವ್ಯಂಗ್ಯವಾಡಿದ್ದಾರೆ.

ಲೇಖಕರ ಸಮಾವೇಶವೊಂದರಲ್ಲಿ ಮಾತನಾಡಿದ್ದ ಉದಯನಿಧಿ ಸ್ಟಾಲಿನ್, ಸನಾತನ ಧರ್ಮವು ಡೆಂಗ್ಯೂ, ಮಲೇರಿಯಾ ಇದ್ದಂತೆ. ಅದನ್ನು ನಿರ್ಮೂಲನೆ ಮಾಡಬೇಕೇ ಹೊರತು, ವಿರೋಧಿಸಬಾರದು. ಈ ಪರಿಕಲ್ಪನೆಯು ಅಂತರ್ಗತವಾಗಿ ಹಿಂದುಳಿದಿದೆ. ಇದು ಜಾತಿ ಮತ್ತು ಆಧಾರದ ಮೇಲೆ ಜನರನ್ನು ವಿಭಜಿಸುತ್ತದೆ. ಮೂಲಭೂತವಾಗಿ ಸಮಾನತೆ ಮತ್ತು ಸಾಮಾಜಿಕ ನ್ಯಾಯವನ್ನು ವಿರೋಧಿಸುತ್ತದೆ ಎಂದು ಹೇಳಿದ್ದರು.

ಈ ಸುದ್ದಿ ಓದಿದ್ದೀರಾ? ‘ಇಂಡಿಯಾ’ ಗೆಲ್ಲದಿದ್ದರೆ ಮಣಿಪುರ, ಹರಿಯಾಣದಂತೆ ದೇಶ ಬದಲು: ಎಂ ಕೆ ಸ್ಟಾಲಿನ್

ಈ ಹೇಳಿಕೆಗೆ ವಿರೋಧ ವ್ಯಕ್ತವಾದಾಗ ಉದಯನಿಧಿ ಸ್ಟಾಲಿನ್‌, ತನ್ನ ಹೇಳಿಕೆಗೆ ಬದ್ಧವಾಗಿದ್ದೇನೆ, ಈ ಬಗ್ಗೆ ಕಾನೂನಾತ್ಮಕವಾಗಿ ಯಾವುದೇ ಪ್ರಕರಣಗಳನ್ನು ಎದುರಿಸಲು ಸಿದ್ಧವಿದ್ದೇನೆ ಎಂದು ಹೇಳಿದ್ದರು. ನಾನು ಸನಾತನ ಧರ್ಮವನ್ನು ಮಾತ್ರ ಟೀಕಿಸಿದ್ದೇನೆ ಮತ್ತು ಸನಾತನ ಧರ್ಮವನ್ನು ನಿರ್ಮೂಲನೆ ಮಾಡಬೇಕು ಎಂದು ಹೇಳಿದ್ದೇನೆ ಎಂದು ಪುನರುಚ್ಚರಿಸುತ್ತಿದ್ದೇನೆ. ಇವು ಎಲ್ಲ ಧರ್ಮಗಳಲ್ಲೂ ಇವೆ. ಇದನ್ನು ನಾನು ನಿರಂತರವಾಗಿ ಹೇಳುತ್ತೇನೆ” ಎಂದಿದ್ದರು.  

ಈ ನಡುವೆ ಉದಯನಿಧಿ ಸ್ಟಾಲಿನ್ ಸನಾತನ ಧರ್ಮದ ಕುರಿತಾಗಿ ಭಾಷಣ ಮಾಡಿದ್ದಕ್ಕಾಗಿ ಕಾನೂನು ಹಕ್ಕುಗಳ ವೀಕ್ಷಣಾಲಯ ಸ್ವಯಂಪ್ರೇರಿತ ಎಫ್‌ಐಆರ್ ದಾಖಲಿಸಿಕೊಳ್ಳುವಂತೆ ಸೋಮವಾರ ಚೆನ್ನೈನ ಪೊಲೀಸ್ ಕಮಿಷನರ್‌ಗೆ ಲೀಗಲ್ ನೋಟಿಸ್ ಕಳುಹಿಸಿದೆ. ದೆಹಲಿ ಹಾಗೂ ಬಿಹಾರದಲ್ಲೂ ಪ್ರಕರಣ ದಾಖಲಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...