ಪ್ರಜ್ವಲ್ ರೇವಣ್ಣ ಲೈಂಗಿಕ ಹಗರಣ: ಪ್ರಧಾನಿ ಮೌನ ಪ್ರಶ್ನಿಸಿದ ಪ್ರಿಯಾಂಕಾ ಗಾಂಧಿ

Date:

ಹಾಸನ ಜೆಡಿಎಸ್ ಸಂಸದ ಪ್ರಜ್ವಲ್‌ ರೇವಣ್ಣ ಲೈಂಗಿಕ ಹಗರಣ ಪ್ರಕರಣದ ಬಗ್ಗೆ ದೇಶಾದ್ಯಂತ ಆಕ್ರೋಶ ವ್ಯಕ್ತವಾಗುತ್ತಿದ್ದು, ಮೈತ್ರಿ ಪಕ್ಷದ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ನಿಲುವಿನ ಬಗ್ಗೆ ಕಾಂಗ್ರೆಸ್ ನಾಯಕರು ಪ್ರಶ್ನಿಸಿದ್ದಾರೆ.

ಈ ಬಗ್ಗೆ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿರುವ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ, ಹಗರಣದಲ್ಲಿ ಭಾಗಿಯಾಗಿರುವ ನಾಯಕನ ಜೊತೆ ಪ್ರಧಾನಿ ಭುಜದ ಮೇಲೆ ಕೈಹಾಕಿ ಫೋಟೋ ತೆಗೆದುಕೊಳ್ಳುತ್ತಾರೆ. 10 ದಿನಗಳ ಹಿಂದೆ ಆತನ ಪರವಾಗಿ ಪ್ರಧಾನಿ ಪ್ರಚಾರ ನಡೆಸುತ್ತಾರೆ. ವೇದಿಕೆಯಲ್ಲಿ ಆತನನ್ನು ಹೊಗಳುತ್ತಾರೆ.ಇಂದು ಆ ನಾಯಕ ದೇಶದಿಂದ ಪರಾರಿಯಾಗಿದ್ದಾನೆ. ಆತನ ಅಮಾನವೀಯ ಅಪರಾಧಗಳನ್ನು ಕೇಳಿದರೆ ಹೃದಯಕ್ಕೆ ಆಘಾತವಾಗುತ್ತದೆ. ಈತ ನೂರಾರು ಮಹಿಳೆಯರ ಜೀವನವನ್ನು ಹಾಳು ಮಾಡಿದ್ದಾನೆ. ಮೋದಿಯವರೆ ಇನ್ನೂ ಏಕೆ ಮೌನವಾಗಿದ್ದೀರಿ? ಎಂದು ಪ್ರಶ್ನಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಸುಳ್ಳುಗಾರರನ್ನು ಸೋಲಿಸುವ ಸಮಯ ಬಂದಿದೆ; ಮತದಾರರೇ ಮುಂದಾಗಬೇಕಿದೆ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪವನ್ ಖೇರಾ, “ಬಿಜೆಪಿ ಇನ್ನೂ ಏಕೆ ಮೈತ್ರಿಯನ್ನು ಮುಂದುವರೆಸುತ್ತಿದೆ? ಪೆನ್‌ ಡ್ರೈವ್‌ನಲ್ಲಿ ಇರುವಂತೆ ದಾಖಲಾಗಿರುವ ವಿಡಿಯೋದಲ್ಲಿ ಸರಣಿ ಅತ್ಯಾಚಾರಗಳು ನಡೆದರೂ ಏಕೆ ಕ್ರಮ ತೆಗೆದುಕೊಂಡಿಲ್ಲ?ವಿಶ್ವದ ಅತ್ಯಂತ ದೊಡ್ಡದಾದ ಲೈಂಗಿಕ ಹಗರಣದಲ್ಲಿ ಭಾಗಿಯಾಗಿರುವ ಪ್ರಜ್ವಲ್‌ ರೇವಣ್ಣ ಬಗ್ಗೆ ವಿಷಯ ತಿಳಿದಿದ್ದರೂ ಪ್ರಧಾನಿ ಆತನ ಪರವಾಗಿ ಏಕೆ ಪ್ರಚಾರ ಕೈಗೊಂಡರು?  ಪ್ರಜ್ವಲ್‌ ರೇವಣ್ಣ ಅವರು ಜರ್ಮನಿ ಹೋಗಲು ಸಹಾಯ ಮಾಡಿದ್ದಾರೆಯೆ ಎಂದು ಪ್ರಶ್ನಿಸಿದರು.

ಪ್ರಜ್ವಲ್‌ ರೇವಣ್ಣ ಲೈಂಗಿಕ ಹಗರಣ ಬೆಳಕಿಗೆ ಬರುತ್ತಿದ್ದಂತೆ ಕರ್ನಾಟಕ ಸರ್ಕಾರ ವಿಶೇಷ ತನಿಖಾ ತಂಡ ರಚಿಸಿ ತನಿಖೆಗೆ ಆದೇಶಿಸಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಪುದುಚೆರಿ ಚುನಾವಣೆ | ‘ಇಂಡಿಯಾ’ ಗೊಂದಲ ನಿವಾರಣೆ: ಕಾಂಗ್ರೆಸ್ 16, ಡಿಎಂಕೆ 14 ಕ್ಷೇತ್ರಗಳಲ್ಲಿ ಸ್ಪರ್ಧೆ

ಪುದುಚೆರಿಯ 'ಇಂಡಿಯಾ' ಮೈತ್ರಿಕೂಟದ ಪ್ರಮುಖ ಪಕ್ಷಗಳಾದ ಡಿಎಂಕೆ ಮತ್ತು ಕಾಂಗ್ರೆಸ್‌ ಪಕ್ಷಗಳ...

ತಮಿಳುನಾಡು ಚುನಾವಣೆ | ಎಐಎಡಿಎಂಕೆ 178, ಬಿಜೆಪಿ 27 ಕ್ಷೇತ್ರಗಳಲ್ಲಿ ಸ್ಪರ್ಧೆ

ಈ ಬಾರಿಯ ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ ಗೆದ್ದು ಅಧಿಕಾರಕ್ಕೇರಲೇ ಬೇಕೆಂದು ಪಣ...

ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಬ್ಯಾಲೆಟ್ ಪೇಪರ್ ಬಳಕೆ; ವಿಧಾನಸಭೆಯಲ್ಲಿ ಮಸೂದೆ ಅಂಗೀಕಾರ

ರಾಜ್ಯದ ಸ್ಥಳೀಯ ಸಂಸ್ಥೆಗಳ ಚುನಾವಣಾ ಪ್ರಕ್ರಿಯೆಯಲ್ಲಿ ಬದಲಾವಣೆ ತರಲು ರಾಜ್ಯ ಸರ್ಕಾರ...

ಪ್ರಧಾನಿ ಮೋದಿ ಅಮೆರಿಕಕ್ಕೆ 100% ಶರಣಾಗಿದ್ದಾರೆ: ರಾಹುಲ್ ಗಾಂಧಿ

ಪಶ್ಚಿಮ ಏಷ್ಯಾದಲ್ಲಿನ ಯುದ್ಧದ ಪರಿಸ್ಥಿತಿ ಮತ್ತು ದೇಶದ ಆರ್ಥಿಕ ನೀತಿಗಳ ಕುರಿತು...