ಎಂಎಸ್‌ಪಿಗೆ ಗ್ಯಾರಂಟಿ ಖಾತರಿ ನೀಡಲು ಮೋದಿ ಸರ್ಕಾರದ ಮೇಲೆ ಒತ್ತಡ: ರಾಹುಲ್ ಗಾಂಧಿ

Date:

ರೈತರು ಕನಿಷ್ಠ ಬೆಂಬಲ ಬೆಲೆ(ಎಂಎಸ್‌ಪಿ)ಗಾಗಿ ಗ್ಯಾರಂಟಿ ಖಾತರಿ ಪಡೆಯುವವರೆಗೂ ಇಂಡಿಯಾ ಒಕ್ಕೂಟ ಮೋದಿ ಸರ್ಕಾರದ ಮೇಲೆ ಒತ್ತಡ ಹೇರುವುದಾಗಿ ಲೋಕಸಭೆಯ ವಿಪಕ್ಷ ನಾಯಕ ರಾಹುಲ್ ಗಾಂಧಿ ತಿಳಿಸಿದ್ದಾರೆ.

ಸಂಸದೀಯ ಭವನ ಸಂಕೀರ್ಣದಲ್ಲಿ ರೈತ ನಾಯಕರ ನಿಯೋಗವನ್ನು ಭೇಟಿ ನೀಡಿದ ನಂತರ ಮಾತನಾಡಿದರು.

ರೈತರ ಸಮಸ್ಯೆಗಳನ್ನು ಸಂಸತ್ತಿನಲ್ಲಿ ಪ್ರಸ್ತಾಪಿಸುವಂತೆ ಮನವಿ ಮಾಡಲು ಆಗಮಿಸಿದ್ದ ಪಂಜಾಬ್‌, ಉತ್ತರ ಪ್ರದೇಶ, ತೆಲಂಗಾಣ, ತಮಿಳುನಾಡು ಹಾಗೂ ಕರ್ನಾಟಕದ ರೈತ ನಾಯಕರ ನಿಯೋಗವನ್ನು ಭೇಟಿ ಮಾಡಿದ ನಂತರ ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ನಾವು ಎನ್‌ಡಿಎ ಒಕ್ಕೂಟದ ನಾಯಕರೊಂದಿಗೆ ಚರ್ಚೆ ನಡೆಸಿ ಎಂಎಸ್‌ಪಿಗಾಗಿ ರೈತರಿಗಾಗಿ ಕಾನೂನು ಖಾತರಿ ನೀಡಲು ಮೋದಿ ಸರ್ಕಾರ ಮೇಲೆ ಒತ್ತಡವೇರುತ್ತೇವೆ” ಎಂದು ಸಭೆಯ ನಂತರ ಸುದ್ದಿಗಾರರೊಂದಿಗೆ ಮಾತನಾಡಿದರು.

ರೈತ ನಾಯಕರ ನಿಯೋಗದಲ್ಲಿ ಕರ್ನಾಟಕ, ತಮಿಳುನಾಡು, ತೆಲಂಗಾಣ, ಉತ್ತರ ಪ್ರದೇಶ, ಹರಿಯಾಣ, ಪಂಜಾಬ್‌ ಸೇರಿದಂತೆ 12 ರೈತ ನಾಯಕರು ಹಾಜರಿದ್ದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ನಿಜಕ್ಕೂ ಮೋದಿಯವರು ಕುರ್ಚಿ ಉಳಿಸಿಕೊಳ್ಳಲು ಮಂಡಿಸಿದ ಬಜೆಟ್ ಇದು

ಸಭೆಯಲ್ಲಿ ರೈತರು ತಮ್ಮ ತಮ್ಮ ರಾಜ್ಯದಲ್ಲಿ ರೈತರು ಎದುರಿಸುತ್ತಿರುವ ಸಮಸ್ಯೆಗಳ ಬಗ್ಗೆ ರಾಹುಲ್‌ ಗಾಂಧಿ ಅವರಿಗೆ ತಿಳಿಸಿದರು.

ತಮ್ಮ ಬೇಡಿಕೆಗಳ ಬಗ್ಗೆ ಹಾಗೂ ಹರಿಯಾಣದಲ್ಲಿ ರೈತರ ಮೇಲೆ ಗುಂಡು ಸಿಡಿಸಿದ ಘಟನೆಯ ಬಗ್ಗೆ ಲೋಕಸಭೆಯಲ್ಲಿ ಧ್ವನಿ ಎತ್ತುವುದಾಗಿ ರಾಹುಲ್‌ ಗಾಂಧಿ ತಿಳಿಸಿರುವುದಾಗಿ ರೈತ ನಾಯಕರು ಸಭೆಯ ನಂತರ ಹೇಳಿದರು.

ರಾಹುಲ್‌ ಪಾಲ್ಗೊಂಡಿದ್ದ ಸಭೆಯಲ್ಲಿ ಕಾಂಗ್ರೆಸ್ ನಾಯಕರಾದ ಕೆ ಸಿ ವೇಣುಗೋಪಾಲ್, ದೀಪೇಂದರ್ ಸಿಂಗ್ ಹೂಡಾ, ಅಮರೇಂದರ್ ಸಿಂಗ್ ರಾಜ ಮುಂತಾದವರು ಹಾಜರಿದ್ದರು.

ಈ ವರ್ಷದ ಫೆಬ್ರವರಿ 21 ರಂದು ಹರ್ಯಾಣದ ಹಿಸ್ಸಾರ್‌ನಲ್ಲಿ ರೈತರು ಪ್ರತಿಭಟನೆ ನಡೆಸುತ್ತಿದ್ದಾಗ ಪೊಲೀಸರು ಅಶ್ರುವಾಯು ಸಿಡಿಸಿದ್ದರು.

ಸುಪ್ರೀಂ ಕೋರ್ಟ್ ಕೂಡ ಜುಲೈ 24ರಂದು ಬೆಳೆಗಳಿಗೆ ಎಂಎಸ್‌ಪಿ ಖಾತರಿ ಸೇರಿದಂತೆ ರೈತರ ವಿವಿಧ ಬೇಡಿಕೆಗಳನ್ನು ಈಡೇರಿಸಲು ಸಮಿತಿಯನ್ನು ರಚಿಸುವಂತೆ ಆದೇಶಿಸಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...