ಬಿಹಾರ ಎಸ್‌ಐಆರ್ ಕಾರ್ಯವಿಧಾನ ಅಕ್ರಮವೆಂದು ಕಂಡುಬಂದರೆ ಇಡೀ ಪ್ರಕ್ರಿಯೆ ರದ್ದು: ಚುನಾವಣಾ ಆಯೋಗಕ್ಕೆ ಸುಪ್ರೀಂ ಕೋರ್ಟ್ ಎಚ್ಚರಿಕೆ

Date:

ಚುನಾವಣಾ ಆಯೋಗವು ಅಳವಡಿಸಿಕೊಂಡಿರುವ ಕಾರ್ಯವಿಧಾನದಲ್ಲಿ ಯಾವುದೇ ಅಕ್ರಮವು ಕಂಡು ಬಂದರೆ ಬಿಹಾರದಲ್ಲಿ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯನ್ನು(ಎಸ್‌ಐಆರ್) ಸಂಪೂರ್ಣವಾಗಿ ರದ್ದುಗೊಳಿಸುವುದಾಗಿ ಸುಪ್ರೀಂ ಕೋರ್ಟ್ ಸೋಮವಾರ ಎಚ್ಚರಿಕೆ ನೀಡಿದೆ.

ಬಿಹಾರದಲ್ಲಿ ಎಸ್‌ಐಆರ್‌ಗಾಗಿ ಚುನಾವಣಾ ಆಯೋಗವು ಅಳವಡಿಸಿಕೊಂಡಿರುವ ಕಾರ್ಯವಿಧಾನದಲ್ಲಿ ಯಾವುದೇ ಹಂತದಲ್ಲಿ ಅಕ್ರಮ ಕಂಡುಬಂದರೆ ಇಡೀ ಪ್ರಕ್ರಿಯೆಯನ್ನು ರದ್ದುಗೊಳಿಸಲಾಗುವುದು ಎಂದು ನ್ಯಾಯಮೂರ್ತಿಗಳಾದ ಸೂರ್ಯಕಾಂತ ಮತ್ತು ಜಾಯಮಲ್ಯ ಬಾಗ್ಚಿ ಅವರ ಪೀಠವು ಖಡಕ್ಕಾಗಿ ಹೇಳಿತು.

ಎಸ್‌ಐಆರ್‌ನ್ನು ಪ್ರಶ್ನಿಸಿ ಸಲ್ಲಿಸಲಾಗಿರುವ ಅರ್ಜಿಗಳ ವಿಚಾರಣೆಯನ್ನು ನಡೆಸುತ್ತಿದ್ದ ಪೀಠವು, ಸಾಂವಿಧಾನಿಕ ಪ್ರಾಧಿಕಾರವಾಗಿ ಚುನಾವಣಾ ಆಯೋಗವು ಎಸ್‌ಐಆರ್ ನಡೆಸುವಾಗ ಕಾನೂನಿಗೆ ಬದ್ಧವಾಗಿದೆ ಮತ್ತು ಎಲ್ಲ ಕಡ್ಡಾಯ ನಿಯಮಗಳನ್ನು ಪಾಲಿಸಿದೆ ಎಂದು ಭಾವಿಸಿ ನ್ಯಾಯಾಲಯವು ಮುಂದುವರಿಯುತ್ತಿದೆ ಎಂದು ತಿಳಿಸಿತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ಮತಾಂತರ ವಿಚಾರದಲ್ಲಿ ಬಿಜೆಪಿಯ ಬೂಟಾಟಿಕೆ ಮತ್ತು ವಾಸ್ತವ

ಎಸ್‌ಐಆರ್ ಸಿಂಧುತ್ವ ಕುರಿತು ಅಂತಿಮ ವಾದಗಳನ್ನು ಮಂಡಿಸಲು ಅ.7ರ ದಿನಾಂಕವನ್ನು ನಿಗದಿಗೊಳಿಸಿದ ಪೀಠವು, ಎಸ್‌ಐಆರ್ ಕುರಿತು ಯಾವುದೇ ಬಿಡಿ ಅಭಿಪ್ರಾಯವನ್ನು ನೀಡಲು ನಿರಾಕರಿಸಿತು.

‘ಬಿಹಾರ ಎಸ್‌ಐಆರ್ ಕುರಿತು ನಮ್ಮ ತೀರ್ಪು ದೇಶಾದ್ಯಂತ ಎಸ್‌ಐಆರ್‌ಗೆ ಅನ್ವಯಿಸುತ್ತದೆ ’ಎಂದು ಹೇಳಿದ ಪೀಠವು, ಚುನಾವಣಾ ಆಯೋಗವು ದೇಶಾದ್ಯಂತ ಎಸ್‌ಐಆರ್ ನಡೆಸುವುದನ್ನು ತಡೆಯಲು ಸಾಧ್ಯವಿಲ್ಲ ಎಂದು ಸ್ಪಷ್ಟಪಡಿಸಿತು.

ಆದಾಗ್ಯೂ,ಬಿಹಾರ ಎಸ್‌ಐಆರ್‌ನ್ನು ವಿರೋಧಿಸಿರುವ ಅರ್ಜಿದಾರರು ಅ.7ರಂದು ಪ್ರಕರಣದ ವಿಚಾರಣೆ ಸಂದರ್ಭದಲ್ಲಿ ದೇಶಾದ್ಯಂತ ಎಸ್‌ಐಆರ್ ಕುರಿತು ವಾದ ಮಂಡಿಸಲು ಪೀಠವು ಅನುಮತಿ ನೀಡಿತು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...