ಜಾತಿ ಗಣತಿ, ಆರ್ಥಿಕ ಸಮೀಕ್ಷೆ ಆಧಾರದ ಮೇಲೆ ಶೇ.50ರ ಮೀಸಲಾತಿ ಮಿತಿ ತೆರವು: ರಾಹುಲ್ ಗಾಂಧಿ

Date:

ನಾವು ಅಧಿಕಾರಕ್ಕೆ ಬಂದರೆ ಜಾತಿ ಗಣತಿ ಹಾಗೂ ಆರ್ಥಿಕ ಸಮೀಕ್ಷೆಯ ಆಧಾರದ ಮೇಲೆ ಶೇ.50 ಮಿತಿಯನ್ನು ತೆರವುಗೊಳಿಸುವುದಾಗಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹೇಳಿದ್ದಾರೆ.

ಈ ಬಗ್ಗೆ ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿಕೊಂಡಿರುವ ಅವರು, ಕಾಂಗ್ರೆಸ್‌ನ ಘೋಷಣೆ ಎಣಿಕೆ, ಏಕೆಂದರೆ ಇದು ನ್ಯಾಯದ ಕಡೆಗಿನ ಮೊದಲ ಹೆಜ್ಜೆಯಾಗಿದೆ ಎಂದರು.

“ಯಾರು ಬಡವರು ಎಂದು ನಾವು ಎಂದಾದರೂ ಯೋಚಿಸಿದ್ದೇವೆಯೆ?ಎಷ್ಟು ಮಂದಿ ಯಾವ ಪರಿಸ್ಥಿತಿಯಲ್ಲಿದ್ದಾರೆ? ಇವೆಲ್ಲವನ್ನು ಲೆಕ್ಕ ಮಾಡಬೇಕಿತ್ತಲ್ಲವೆ? ಬಿಹಾರದಲ್ಲಿ ಕೈಗೊಂಡ ಜಾತಿ ಸಮೀಕ್ಷೆಯಲ್ಲಿ ಶೇ 88 ರಷ್ಟಿರುವ ಬಡವರು ದಲಿತರು, ಆದಿವಾಸಿಗಳು, ಹಿಂದುಳಿದ ವರ್ಗದವರು ಹಾಗೂ ಅಲ್ಪಸಂಖ್ಯಾತ ವರ್ಗಕ್ಕೆ ಸೇರಿದವರಾಗಿದ್ದಾರೆ” ಎಂದು ರಾಹುಲ್ ಗಾಂಧಿ ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಬಿಹಾರದ ಅಂಕಿಅಂಶಗಳು ದೇಶದ ನಿಜ ಚಿತ್ರಣದ ಒಂದು ಸಣ್ಣ ನೋಟವಷ್ಟೆ, ದೇಶದ ಬಡ ಜನರು ಯಾವ ಪರಿಸ್ಥಿತಿಯಲ್ಲಿ ಬದುಕುತ್ತಿದ್ದಾರೆ ಎಂಬ ಕಲ್ಪನೆ ಕೂಡ ನಮಗಿಲ್ಲ. ಅದಕ್ಕಾಗಿ ನಾವು ಜಾತಿ ಗಣತಿ ಹಾಗೂ ಆರ್ಥಿಕ ಸಮೀಕ್ಷೆ ಎರಡು ಐತಿಹಾಸಿಕ ನಿರ್ಧಾರಗಳನ್ನು ತೆಗೆದುಕೊಳ್ಳುತ್ತಿದ್ದೇವೆ. ಇದರ ಆಧಾರದ ಮೇಲೆ ನಾವು ಶೇ.50 ರಷ್ಟಿನ ಮೇಸಲಾತಿ ಮಿತಿಯನ್ನು ತೆರವುಗೊಳಿಸುತ್ತೇವೆ” ಎಂದು ರಾಹುಲ್ ಗಾಂಧಿ ಹೇಳಿದ್ದಾರೆ.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಬಿಜೆಪಿಯ ಬಾಂಡ್ ಬಹಿರಂಗಗೊಳಿಸಲು ಎಸ್‌ಬಿಐ ಏಕೆ ಹಿಂಜರಿಯುತ್ತಿದೆ?

ಈ ಕ್ರಮವು ದೇಶದ ಎಕ್ಸ್‌ರೆಯಾಗಿದೆ ಹಾಗೂ ಸರಿಯಾದ ಮೀಸಲಾತಿ, ಹಕ್ಕುಗಳು ಹಾಗೂ ಹಂಚಿಕೆಯನ್ನು ಪ್ರತಿಯೊಬ್ಬರಿಗೂ ಒದಗಿಸುತ್ತದೆ ಎಂದು ರಾಹುಲ್ ಹೇಳಿದರು.

“ಇದು ಬಡವರಿಗೆ ಸರಿಯಾದ ಯೋಜನೆಗಳನ್ನು ಜಾರಿಗೊಳಿಸುವುದಕ್ಕೆ ಸಹಾಯ ಮಾಡುವುದು ಮಾತ್ರವಲ್ಲದೆ, ಶಿಕ್ಷಣ, ಗಳಿಕೆ, ‍ವೈದ್ಯಕೀಯ ಸೇವೆಯಿಂದ ವಂಚಿತರಾದವರನ್ನು ಮೇಲೆತ್ತುತ್ತದೆ. ಜೊತೆಗೆ ಅಭಿವೃದ್ಧಿಯ ಮುಖ್ಯವಾಹಿನಿಗೆ ಸಂಪರ್ಕಿಸುತ್ತದೆ” ಎಂದರು.

“ಅಲ್ಲಿಯವರೆಗೂ ಎದ್ದೇಳಿ, ಜಾತಿ ಸಮೀಕ್ಷೆ ನಿಮ್ಮ ಹಕ್ಕು ಎಂದು ನಿಮ್ಮ ಧ್ವನಿಯನ್ನು ತೋರ್ಪಡಿಸಿ . ಇದು ನಿಮ್ಮನ್ನು ಕತ್ತಲ ಸಂಕಷ್ಟದಿಂದ ಬೆಳಕಿನಡೆಗೆ ಕರೆದೊಯ್ಯುತ್ತದೆ” ಎಂದು ರಾಹುಲ್ ಗಾಂಧಿ ತಿಳಿಸಿದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...