ಗುಜರಾತ್ | ಹಾಸ್ಟೆಲ್‌ನಲ್ಲಿ ನಮಾಝ್ ಮಾಡುತ್ತಿದ್ದ ವಿದೇಶಿ ವಿದ್ಯಾರ್ಥಿಗಳಿಗೆ ಹಲ್ಲೆ: ಇಬ್ಬರ ಬಂಧನ

Date:

ಗುಜರಾತ್ ವಿಶ್ವವಿದ್ಯಾನಿಲಯದ ಹಾಸ್ಟೆಲ್‌ನಲ್ಲಿ ರಾತ್ರಿಯ ನಮಾಝ್ ಮಾಡುವಾಗ ಹಲವಾರು ವಿದೇಶಿ ವಿದ್ಯಾರ್ಥಿಗಳನ್ನು ಥಳಿಸಿ, ಹಲ್ಲೆ ನಡೆಸಿದ ಆರೋಪಿಗಳನ್ನು ಅಹಮದಾಬಾದ್ ಅಪರಾಧ ವಿಭಾಗದ ಪೊಲೀಸರು ಭಾನುವಾರ ಸಂಜೆ ಬಂಧಿಸಿದ್ದಾರೆ.

ಅಹಮದಾಬಾದ್ ಪೊಲೀಸರು ಈ ಬಗ್ಗೆ ಎಕ್ಸ್‌ನಲ್ಲಿ ಮಾಹಿತಿ ಹಂಚಿಕೊಂಡಿದ್ದು, ವಿದ್ಯಾರ್ಥಿಗಳ ಮೇಲೆ ದಾಳಿ ಮಾಡಿದ ಮತ್ತು ಹಾಸ್ಟೆಲ್ ಕೊಠಡಿಗಳನ್ನು ಧ್ವಂಸ ಮಾಡಿದ ಆರೋಪದ ಮೇಲೆ ಅಪರಾಧ ವಿಭಾಗವು ಇಬ್ಬರನ್ನು ಬಂಧಿಸಿದೆ ಎಂದು ಮಾಹಿತಿ ನೀಡಿದ್ದಾರೆ.

ಬಂಧಿತರನ್ನು ಹಿತೇಶ್ ರಖುಭಾಯಿ ಮೇವಾಡ ಹಾಗೂ ಭಾರತ ದಾಮೋದರಭಾಯ್ ಪಟೇಲ್ ಎಂದು ಗುರುತಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಅಹಮದಾಬಾದ್ ಸಿಟಿ ಕ್ರೈಂ ಬ್ರಾಂಚ್ ಗುಜರಾತ್ ವಿಶ್ವವಿದ್ಯಾಲಯದ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಶನಿವಾರ ರಾತ್ರಿ ಗುಜರಾತ್ ವಿಶ್ವವಿದ್ಯಾಲಯದ ಕ್ಯಾಂಪಸ್‌ನಲ್ಲಿ 16/03/2024 ರಂದು ನಡೆದ ಘಟನೆಯ ಆರೋಪಿಗಳನ್ನು ಬಂಧಿಸಿದೆ” ಎಂದು ಆರೋಪಿಯ ಫೋಟೋಗಳನ್ನು ಹಂಚಿಕೊಂಡಿದೆ.

ಏನಿದು ಘಟನೆ?

ಶನಿವಾರ ತಡರಾತ್ರಿ ಗುಜರಾತ್ ವಿಶ್ವವಿದ್ಯಾನಿಲಯದಲ್ಲಿ ಓದುತ್ತಿರುವ ಐವರು ವಿದೇಶಿ ವಿದ್ಯಾರ್ಥಿಗಳು ತಾವು ತಂಗಿದ್ದ ಕೊಠಡಿಯಲ್ಲಿ ನಮಾಝ್ ಮಾಡುತ್ತಿದ್ದಾಗ ಅವರ ಮೇಲೆ ದಾಳಿ ನಡೆಸಲಾಗಿತ್ತು. 20ಕ್ಕಿಂತ ಹೆಚ್ಚಿನ ಜನರ ಗುಂಪು ಆವರಣಕ್ಕೆ ನುಗ್ಗಿ ಜೈಶ್ರೀರಾಮ್ ಘೋಷಣೆಗಳನ್ನು ಕೂಗಿದ್ದರಿಂದ ಎರಡು ಗುಂಪುಗಳ ನಡುವೆ ವಾಗ್ವಾದಕ್ಕೂ ಕಾರಣವಾಗಿತ್ತು.

ಉಜ್ಬೇಕಿಸ್ತಾನ್, ಅಫ್ಘಾನಿಸ್ತಾನ್, ತಜಕಿಸ್ತಾನ್, ದಕ್ಷಿಣ ಆಫ್ರಿಕಾ ಮತ್ತು ಶ್ರೀಲಂಕಾದ ಐವರು ವಿದ್ಯಾರ್ಥಿಗಳು ಘಟನೆಯಲ್ಲಿ ಗಾಯಗೊಂಡಿದ್ದರು. ವಿದ್ಯಾರ್ಥಿಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಈ ವಿಷಯವನ್ನು ತಿಳಿಯುತ್ತಿದ್ದಂತೆ ಪೊಲೀಸರು 20-25 ವ್ಯಕ್ತಿಗಳ ವಿರುದ್ಧ ಎಫ್‌ಐಆರ್ ದಾಖಲಿಸಿ, ಘಟನೆಯ ತನಿಖೆಗಾಗಿ ಒಂಬತ್ತು ತಂಡಗಳನ್ನು ರಚಿಸಿದ್ದರು.

ಇದನ್ನು ಓದಿದ್ದೀರಾ? ಗುಜರಾತ್ | ಹಾಸ್ಟೆಲ್‌ನಲ್ಲಿ ನಮಾಝ್ ಮಾಡುತ್ತಿದ್ದ ವಿದೇಶಿ ವಿದ್ಯಾರ್ಥಿಗಳ ಮೇಲೆ ಗುಂಪಿನಿಂದ ಹಲ್ಲೆ; ನೋಡುತ್ತಾ ನಿಂತ ಪೊಲೀಸರು!

ಏತನ್ಮಧ್ಯೆ, ವಿದೇಶಾಂಗ ವ್ಯವಹಾರಗಳ ಸಚಿವಾಲಯವು ಈ ವಿಷಯವನ್ನು ಕೈಗೆತ್ತಿಕೊಂಡಿದೆ ಮತ್ತು ಗುಜರಾತ್ ಸರ್ಕಾರವು ಹಿಂಸಾಚಾರದ ದುಷ್ಕರ್ಮಿಗಳ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳುತ್ತಿದೆ ಎಂದು ವಕ್ತಾರ ರಣಧೀರ್ ಜೈಸ್ವಾಲ್ ಘಟನೆಯ ಕುರಿತು ಹೇಳಿಕೆ ನೀಡಿದ್ದರು.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...