ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ರ‍್ಯಾಪರ್ ವೇಡನ್ ವಿರುದ್ಧ 2ನೇ ಎಫ್‌ಐಆರ್

Date:

ವೇಡನ್ ಎಂದೇ ಖ್ಯಾತರಾಗಿರುವ ಮಲಯಾಳಂನ ಜನಪ್ರಿಯ ರ‍್ಯಾಪರ್ ಹಿರಂದಾಸ್ ಮುರಳಿ ವಿರುದ್ಧ ಮಹಿಳೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಅಡಿಯಲ್ಲಿ ಪ್ರಕರಣ ದಾಖಲಾಗಿದೆ. ಲೈಂಗಿಕ ದೌರ್ಜನ್ಯಕ್ಕೆ ಸಂಬಂಧಿಸಿದಂತೆ ವೇಡನ್ ವಿರುದ್ಧ ದಾಖಲಿಸಲಾಗಿರುವ ಎರಡನೇ ಪ್ರಕರಣ ಇದಾಗಿದೆ. ಮೊದಲ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಕೇರಳ ಹೈಕೋರ್ಟ್ ‘ಮಧ್ಯಂತರ ಜಾಮೀನು’ ನೀಡಿದೆ.

2ನೇ ಪ್ರಕರಣ: ಭಾರತೀಯ ದಂಡ ಸಂಹಿತೆಯ (ಐಪಿಸಿ) ಸೆಕ್ಷನ್ 354ರ ಅಡಿಯಲ್ಲಿ ಎಫ್‌ಐಆರ್ ಮಾಡಲಾಗಿದ್ದು, ಈ ಸೆಕ್ಷನ್ ಮಹಿಳೆಯ ಮೇಲೆ ಹಲ್ಲೆ ಅಥವಾ ಕ್ರಿಮಿನಲ್ ಬಲಪ್ರಯೋಗಕ್ಕೆ ಸಂಬಂಧಿಸಿದೆ.

ಆರೋಪಿಸಲಾಗಿರುವ ಘಟನೆಯು 2020ರಲ್ಲಿ ನಡೆದದ್ದು ಎಂದು ವರದಿಗಳಾಗಿವೆ. ದೂರುದಾರೆಯು ರಾಜ್ಯದ ಹೊರಗೆ ಇರುವುದರಿಂದ ಹೇಳಿಕೆಯನ್ನು ಇನ್ನೂ ದಾಖಲಿಸಿಲ್ಲ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ದೂರುದಾರೆಯು ಮೊದಲಿಗೆ ಮುಖ್ಯಮಂತ್ರಿ ಕಚೇರಿಯನ್ನು ಸಂಪರ್ಕಿಸಿದ್ದಾರೆ. ನಂತರ ದೂರನ್ನು ಕೊಚ್ಚಿ ನಗರ ಪೊಲೀಸ್ ಆಯುಕ್ತರಿಗೆ ರವಾನಿಸಲಾಗಿದೆ ಎಂದು ವರದಿಯಾಗಿದೆ. ಆಗಸ್ಟ್ 21ರಂದು ಪ್ರಕರಣ ದಾಖಲಿಸಲಾಗಿದೆ.

ಇದನ್ನೂ ಓದಿರಿ: ಪಾಟ್ನಾದಲ್ಲಿ ಮಕ್ಕಳ ಹತ್ಯೆ; ಪ್ರತಿಭಟನೆಗೆ ಹೆದರಿ ಆರೋಗ್ಯ ಸಚಿವ ಪರಾರಿ

ಮೊದಲ ಪ್ರಕರಣ: ಯುವ ಮಹಿಳಾ ವೈದ್ಯೆಯೊಬ್ಬರು ನೀಡಿದ ದೂರಿನ ಆಧಾರದ ಮೇಲೆ ಕೋಝಿಕ್ಕೋಡ್‌ನ ತ್ರಿಕ್ಕಕ್ಕರ ಪೊಲೀಸರು ವೇಡನ್ ವಿರುದ್ಧ ಅತ್ಯಾಚಾರ ಆರೋಪದ ಅಡಿ ಪ್ರಕರಣ ದಾಖಲಿಸಿದ್ದರು. ಜುಲೈ 31ರಿಂದಲೂ ವೇಡನ್ ತಲೆಮರೆಸಿಕೊಂಡಿದ್ದರು. “ವೇಡನ್ 2021ರಲ್ಲಿ ನನ್ನ ಮೇಲೆ ಅತ್ಯಾಚಾರ ಮಾಡಿದ್ದಾರೆ ಮತ್ತು ಆಗಸ್ಟ್ 2021ರಿಂದ ಮಾರ್ಚ್ 2023ರ ನಡುವೆ ಮದುವೆಯ ನೆಪದಲ್ಲಿ ನನ್ನ ಮೇಲೆ ಹಲವು ಬಾರಿ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ” ಎಂದು ಮಹಿಳೆ ಆರೋಪಿಸಿದ್ದಾರೆ.

ಮಧ್ಯಂತರ ಜಾಮೀನು

ವೈದ್ಯೆಯ ಪ್ರಕರಣಕ್ಕೆ ಸಂಬಂಧಿಸಿದಂತೆ ವೇಡನ್ ಅವರ ನಿರೀಕ್ಷಣಾ ಜಾಮೀನು ಅರ್ಜಿಯ ವಿಚಾರಣೆಯನ್ನು ಕೇರಳ ಹೈಕೋರ್ಟ್ ಆಗಸ್ಟ್ 19ರಂದು ಕೈಗೆತ್ತಿಕೊಂಡಿತ್ತು. ಪೊಲೀಸರು ವೇಡನ್ ಅವರನ್ನು ಬಂಧಿಸದಂತೆ ಮಧ್ಯಂತರ ಆದೇಶವನ್ನೂ ಹೊರಡಿಸಿತ್ತು. ಜಾಮೀನು ಅರ್ಜಿಯನ್ನು ಪರಿಗಣಿಸುವವರೆಗೆ ಅವರನ್ನು ಬಂಧಿಸಬಾರದು ಎಂದು ನ್ಯಾಯಾಲಯ ಹೇಳಿತ್ತು. ಅವರ ನಿರೀಕ್ಷಣಾ ಜಾಮೀನು ಅರ್ಜಿಯ ವಿಚಾರಣೆಯನ್ನು ಇಂದು ಮತ್ತೆ ಕೈಗೆತ್ತಿಕೊಂಡ ಕೋರ್ಟ್, ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ.

ನ್ಯಾಯಮೂರ್ತಿ ಬೆಚು ಕುರಿಯನ್ ಥಾಮಸ್ ಅವರ ಪೀಠವು, ‘ವೇಡನ್ ವಿರುದ್ಧದ ಆರೋಪಗಳು ಗಂಭೀರ ಸ್ವರೂಪದ್ದಾಗಿದ್ದರೂ, ಅವರನ್ನು ಕಸ್ಟಡಿ ವಿಚಾರಣೆಗೆ ಒಳಪಡಿಸುವ ಅಗತ್ಯವಿಲ್ಲ’ ಎಂದು ಅಭಿಪ್ರಾಯಪಟ್ಟಿದೆ.

ವೇಡನ್ ತಮ್ಮ ಜಾಮೀನು ಅರ್ಜಿಯಲ್ಲಿ ಕೆಲವು ಸಂಗತಿಗಳನ್ನು ಪ್ರಸ್ತಾಪಿಸಿದ್ದಾರೆ. “ನನ್ನನ್ನು ಇಂತಹ ಪ್ರಕರಣದಲ್ಲಿ ಸಿಲುಕಿಸುವುದಾಗಿ ಬೆದರಿಕೆ ಕರೆಗಳು ಬರುತ್ತಿದ್ದವು. ಇದು ತನ್ನ ಖ್ಯಾತಿಗೆ ಧಕ್ಕೆ ತರುವ ಮತ್ತು ಸುಳ್ಳು ದೂರುಗಳನ್ನು ದಾಖಲಿಸುವ ಮೂಲಕ ಹಣ ಸುಲಿಗೆ ಮಾಡಲು ಸಂಚು ರೂಪಿಸಿದ ವ್ಯಕ್ತಿಗಳಿಂದ ಮಾಡಿದ ಪಿತೂರಿಯಾಗಿದೆ” ಎಂದಿದ್ದಾರೆ.

ಇದನ್ನೂ ಓದಿರಿ: ಯೋಗಿ ರಾಜ್ಯದಲ್ಲಿ ವರದಕ್ಷಿಣೆ ದೌರ್ಜನ್ಯ | ಒಂದೇ ವಾರದಲ್ಲಿ ಇಬ್ಬರು ಮಹಿಳೆಯರಿಗೆ ಬೆಂಕಿ ಹಚ್ಚಿ ಕ್ರೌರ್ಯ

“ಆ ಮಹಿಳೆ ನನ್ನನ್ನು ಅಭಿಮಾನಿಯಾಗಿ ಸಂಪರ್ಕಿಸಿದ್ದಳು. ನಮ್ಮ ಸಂಬಂಧವು ಒಪ್ಪಿಗೆಯಿಂದ ಕೂಡಿತ್ತು. ಹೊಂದಾಣಿಕೆಯ ಕೊರತೆಯಿಂದಾಗಿ ಆಕೆ ದೂರವಾದಳು. ನಂತರ ನನ್ನ ವಿರುದ್ಧ ದೂರು ದಾಖಲಿಸಿದ್ದಾರೆ” ಎಂದು ವೇಡನ್ ಆರೋಪಿಸಿದ್ದಾರೆ.

ಯುವ ವೈದ್ಯೆಯು ವೇಡನ್ ಅವರ ಜಾತಿಗೆ ಸಂಬಂಧಪಟ್ಟವರಾಗಿದ್ದಾರೆ. ಇಬ್ಬರ ನಡುವೆ ಮೊದಲಿನಿಂದಲೂ ದೈಹಿಕ ಸಂಬಂಧವಿತ್ತು ಎಂಬ ಸಂಗತಿ ವಿಚಾರಣೆಯಲ್ಲಿ ಪ್ರಮುಖ ಪಾತ್ರ ವಹಿಸಿದೆ. ‘ಇದು ಸಮ್ಮತಿಯ ಸಂಬಂಧವೇ?’ ಎಂಬುದನ್ನು ಕೋರ್ಟ್ ಗಂಭೀರವಾಗಿ ಪರಿಗಣಿಸಿದೆ. “ಮತ್ತೊಬ್ಬ ಮಹಿಳೆಯ ದೂರಿನ ಆಧಾರದ ಮೇಲೆ ವೇಡನ್ ವಿರುದ್ಧ ಹೊಸ ಪ್ರಕರಣ ದಾಖಲಿಸಲಾಗಿದೆ ಎಂಬುದು ಪ್ರಸ್ತುತ ಪ್ರಕರಣದಲ್ಲಿ ಪರಿಗಣಿಸಬೇಕಾದ ವಿಷಯವಲ್ಲ” ಎಂದು ಕೋರ್ಟ್ ಸ್ಪಷ್ಟಪಡಿಸಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...