ಗಾಯಕನಿಂದ ಅತ್ಯಾಚಾರ ಆರೋಪ: ಯೋಗಿ ಆದಿತ್ಯನಾಥ್ ಮನೆ ಮುಂದೆ ಆತ್ಮಹತ್ಯೆಗೆ ಯತ್ನಿಸಿದ ಮಹಿಳೆ

Date:

ಹರಿಯಾಣ ಜಾನಪದ ಗಾಯಕ ಉತ್ತರ್ ಕುಮಾರ್ ಎರಡು ತಿಂಗಳ ಹಿಂದೆ ಅತ್ಯಾಚಾರದ ಆರೋಪ ಹೊರಿಸಿದ್ದ ನೋಯ್ಡಾದ ಮಹಿಳೆಯೊಬ್ಬರು, ಲಕ್ನೋದಲ್ಲಿರುವ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರ ನಿವಾಸದ ಬಳಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ.

ಪ್ರಕರಣದ ಬಗ್ಗೆ ಪೊಲೀಸರು ಸರಿಯಾಗಿ ತನಿಖೆ ನಡೆಸುತ್ತಿಲ್ಲ ಎಂದು ಮಹಿಳೆ ಆರೋಪಿಸಿದ್ದಾರೆ. ಅಧಿಕಾರಿಗಳ ಪ್ರಕಾರ, ಮುಖ್ಯಮಂತ್ರಿ ನಿವಾಸದ ಹೊರಗೆ ನಿಯೋಜಿಸಲಾದ ಭದ್ರತಾ ಸಿಬ್ಬಂದಿ ಮಹಿಳೆಯನ್ನು ತಡೆದಿದ್ದಾರೆ. ಗೌತಮಪಲ್ಲಿ ಪೊಲೀಸರಿಗೆ ಆಕೆಯನ್ನು ಹಸ್ತಾಂತರಿಸಲಾಗಿದ್ದು, ಘಟನೆಯ ಬಗ್ಗೆ ಅತ್ಯಾಚಾರ ಪ್ರಕರಣ ದಾಖಲಾಗಿರುವ ಗಾಜಿಯಾಬಾದ್ ಪೊಲೀಸರಿಗೆ ಮಾಹಿತಿ ನೀಡಲಾಗಿದೆ.

ಇದನ್ನು ಓದಿದ್ದೀರಾ? ಪ್ರಧಾನಿ ಮೋದಿ, ಅಮಿತ್ ಶಾ, ಯೋಗಿ ಆದಿತ್ಯನಾಥ್ ಅವರ ರಾಜ್ಯ ಪ್ರವಾಸ ನಿಗದಿ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಜೂನ್ 24ರಂದು ಗಾಜಿಯಾಬಾದ್‌ನ ಶಾಲಿಮಾರ್ ಗಾರ್ಡನ್ ಪೊಲೀಸ್ ಠಾಣೆಯಲ್ಲಿ ಮಹಿಳೆ ಉತ್ತರ್ ಕುಮಾರ್ ವಿರುದ್ಧ ಲೈಂಗಿಕ ದೌರ್ಜನ್ಯದ ಆರೋಪ ಹೊರಿಸಿ ದೂರು ದಾಖಲಿಸಿದ್ದರು. ಆರಂಭದಲ್ಲಿ ಪೊಲೀಸರು ದೂರು ದಾಖಲಿಸಿಲ್ಲ, ಹೈಕೋರ್ಟ್ ನಿರ್ದೇಶನದ ಬಳಿಕ ಸುಮಾರು 25 ದಿನಗಳ ನಂತರ ಪ್ರಕರಣ ದಾಖಲಿಸಲಾಗಿದೆ. ಆದರೂ ಪ್ರಕರಣದ ತನಿಖೆ ನಡೆಯುತ್ತಿಲ್ಲ ಎಂದು ಮಹಿಳೆ ಆರೋಪಿಸಿದ್ದಾರೆ.

ಆರೋಪಿ ಇರುವ ಸ್ಥಳದ ಬಗ್ಗೆ ಪೊಲೀಸರಿಗೆ ಪದೇ ಪದೇ ತಿಳಿಸಿದ್ದೇನೆ. ಆದರೂ ಪೊಲೀಸರು ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಮಹಿಳೆ ದೂರಿದ್ದಾರೆ. ಹಾಗೆಯೇ ವಿಳಂಬದಿಂದ ಬೇಸತ್ತ ಮಹಿಳೆ ಲಕ್ನೋಗೆ ಪ್ರಯಾಣಿಸಿ ಪ್ರತಿಭಟನೆಯ ಒಂದು ರೂಪವಾಗಿ ಆತ್ಮಾಹುತಿಗೆ ಯತ್ನಿಸಿದ್ದಾರೆ ಎನ್ನಲಾಗಿದೆ.

ಘಟನೆಗೂ ಮುನ್ನ, ಮಹಿಳೆ ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿದ್ದು, ಅಧಿಕಾರಿಗಳು ಕ್ರಮ ಕೈಗೊಳ್ಳಲು ವಿಫಲವಾದರೆ ಮುಖ್ಯಮಂತ್ರಿ ನಿವಾಸದ ಹೊರಗೆ ಕಠಿಣ ಹೆಜ್ಜೆ ಇಡಬೇಕಾಗುತ್ತದೆ ಎಂದು ಎಚ್ಚರಿಸಿದ್ದರು.

ಮಹಿಳೆಯನ್ನು ವಿಚಾರಣೆಗಾಗಿ ವಶಕ್ಕೆ ತೆಗೆದುಕೊಳ್ಳಲಾಗಿದ್ದು, ಹೇಳಿಕೆಯನ್ನು ದಾಖಲಿಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಅದರೆ ಅತ್ಯಾಚಾರ ಪ್ರಕರಣದ ತನಿಖೆ ಅಥವಾ ಆರೋಪಿ ವಿರುದ್ಧದ ಕ್ರಮದ ಬಗ್ಗೆ ರಾಜ್ಯ ಪೊಲೀಸರು ಇನ್ನೂ ಅಧಿಕೃತವಾಗಿ ಹೇಳಿಕೆಯನ್ನು ನೀಡಿಲ್ಲ.

ನೆನಪಿಡಿ: ಸಮಸ್ಯೆಗಳಿಗೆ ಆತ್ಮಹತ್ಯೆ ಪರಿಹಾರವಲ್ಲ… ಆತ್ಮಹತ್ಯೆಗಳ ಕುರಿತು ಚರ್ಚಿಸುವುದು ಕೂಡ ಕೆಲವರಿಗೆ ಪ್ರಚೋದನೆ ನೀಡಬಹುದು. ಸಮಸ್ಯೆಗಳ ಬಗ್ಗೆ ಆಪ್ತರೊಂದಿಗೆ ಹಂಚಿಕೊಳ್ಳುವುದರಿಂದ, ಸಮಾಲೋಚನೆ ನಡೆಸುವುದರಿಂದ ಆತ್ಮಸ್ಥೈರ್ಯ ಹೆಚ್ಚುತ್ತದೆ. ಆತ್ಮಹತ್ಯೆಗಳನ್ನು ತಡೆಯಬಹುದು. ತುರ್ತು ಪರಿಸ್ಥಿತಿಯಿದ್ದರೆ ಕರೆ ಮೂಲಕ ವೈದ್ಯರನ್ನು ಸಂಪರ್ಕಿಸಿ. ಬೆಂಗಳೂರು ಸಹಾಯವಾಣಿ 080-25497777, ನಿಮಾನ್ಸ್ ಸಹಾಯವಾಣಿ 080-46110007, ಆರೋಗ್ಯ ಸಹಾಯವಾಣಿ 104.
WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...