ಪ್ರೇಮ ವಿವಾಹ | ಯುವಕನ ತಾಯಿಯನ್ನು ಅರೆಬೆತ್ತಲೆ ಮೆರವಣಿಗೆ ಮಾಡಿ ವಿಕೃತಿ ಮೆರೆದ ಯುವತಿಯ ಕುಟುಂಬ

Date:

ಯುವಕ-ಯುವತಿ ವಿವಾಹವಾಗಿದ್ದಕ್ಕೆ, ಯುವತಿಯ ಕುಟುಂಬದವರು ಯುವಕನ ತಾಯಿಯನ್ನು ಥಳಿಸಿ, ಅರೆಬೆತ್ತಲೆ ಮೆರವಣಿಗೆ ಮಾಡಿ ವಿಕೃತಿ ಮೆರೆದಿರುವ ಘಟನೆ ಪಂಜಾಬ್‌ನ ತರ್ನ್‌ ತರನ್‌ನಲ್ಲಿ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಸಂತ್ರಸ್ತ ಮಹಿಳೆಯ ಮಗ ಮತ್ತು ಆರೋಪಿಗಳ ಕುಟುಂಬದ ಯುವತಿ ಪ್ರೀತಿಸಿದ್ದರು. ಮಾರ್ಚ್‌ 31ರಂದು ಊರು ತೊರೆದು ಹೋಗಿ ವಿವಾಹವಾಗಿದ್ದರು. ಆದರೆ, ಅವರ ಪ್ರೀತಿ ಮತ್ತು ಮದುವೆಗೆ ಯುವತಿಯ ಪೋಷಕರು ಒಪ್ಪಿರಲಿಲ್ಲ.

ತಮ್ಮ ಇಚ್ಛೆಗೆ ವಿರುದ್ಧವಾಗಿ ಯುವಕ-ಯುವತಿ ವಿವಾಹವಾಗಿದ್ದಾರೆ ಎಂಬ ಕಾರಣಕ್ಕೆ, ಯುವತಿಯ ಪೊಲೀಸರು ಯುವಕನ ತಾಯಿಯ ಮೇಲೆ ಹಲ್ಲೆ ನಡೆಸಿದ್ದಾರೆ. ಆಕೆಯನ್ನು ಅರೆಬೆತ್ತಲೆಗೊಳಿಸಿ, ಮೆರವಣಿಗೆ ಮಾಡಿ, ಅಮಾನವೀಯತೆ ಮರೆದಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಸಂತ್ರಸ್ತೆ ನೀಡಿರುವ ದೂರಿನ ಪ್ರಕಾರ, ಆಕೆ ತನ್ನ ಮನೆಯಲ್ಲಿ ಒಬ್ಬಳೇ ಇದ್ದಾಗ ಯುವತಿಯ ಕುಟುಂಬದವರು ಮನೆಗೆ ನುಗ್ಗಿ ಹಲ್ಲೆ ನಡೆಸಿದ್ದಾರೆ. ಆಕೆಯ ಬಟ್ಟೆ ಹರಿದು ಹಾಕಿದ್ದಾರೆ. ಅವರು ಅವಳನ್ನು ಅರೆಬೆತ್ತಲೆ ಸ್ಥಿತಿಯಲ್ಲಿ ಗ್ರಾಮದಲ್ಲಿ ಬೀದಿಗಳಲ್ಲಿ ಎಳೆದೊಯ್ದಿದ್ದಾರೆ.

ಘಟನೆ ಸಂಬಂಧ ಐವರ ವಿರುದ್ಧ ಪ್ರಕರಣ ದಾಖಲಾಗಿದೆ. ಮೂವರು ಆರೋಪಿಗಳನ್ನು ಕುಲ್ವಿಂದರ್ ಕೌರ್ ಮಣಿ, ಶರಣಜಿತ್ ಸಿಂಗ್ ಶಾನಿ ಮತ್ತು ಗುರ್ಚರಣ್ ಸಿಂಗ್ ಎಂದು ಗುರುತಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ದೂರಿನ ಆಧಾರದ ಮೇಲೆ, ಏಪ್ರಿಲ್ 3ರಂದು ಐಪಿಸಿ ಸೆಕ್ಷನ್ 354, 354ಬಿ. 354ಡಿ, 323 ಹಾಗೂ 149 ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಪ್ರಕರಣದಲ್ಲಿ ಇದುವರೆಗೆ ಯಾರನ್ನೂ ಬಂಧಿಸಲಾಗಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...