ವಿವಾಹೇತರ ಸಂಬಂಧಕ್ಕೆ ಒಪ್ಪದ ಮಹಿಳೆಯ ಶಿರಚ್ಛೇದ; ಸೋದರ ಮಾವನೇ ಎಸಗಿದ ಹತ್ಯೆ

Date:

ವಿವಾಹೇತರ ಸಂಬಂಧಕ್ಕೆ ಒಪ್ಪದ ಮಹಿಳೆಯನ್ನು ಆಕೆಯ ಸೋದರ ಮಾವನೇ ಹತ್ಯೆಗೈದು, ಆಕೆಯ ಶಿರಚ್ಛೇದ ಮಾಡಿ, ದೇಹವನ್ನು ಮೂರು ತುಂಡುಗಳಾಗಿ ಕತ್ತರಿಸಿ ಕಸದ ಬುಟ್ಟಿಯಲ್ಲಿ ಎಸೆದಿರುವ ಆಘಾತಕಾರಿ ಘಟನೆ ಪಶ್ಚಿಮ ಬಂಗಾಳದ ಕೋಲ್ಕತ್ತಾದಲ್ಲಿ ನಡೆದಿದೆ.

ಪ್ರಕರಣದ ಸಂಬಂಧ ಮಹಿಳೆಯ ಸೋದರ ಮಾವ ಅತಿಯುರ್ ರೆಹಮಾನ್ ಲಸ್ಕರ್ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ವಿಚರಣೆ ವೇಳೆ, ತಾನೇ ಕೃತ್ಯ ಎಸಗಿರುವುದಾಗಿ ಲಸ್ಕರ್ ಒಪ್ಪಿಕೊಂಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

30 ವರ್ಷದ ಮಹಿಳೆಗೆ ವಿವಾಹವಾಗಿತ್ತು. ಎರಡು ವರ್ಷಗಳ ಹಿಂದೆ ಆಕೆ ತನ್ನ ಪತಿಯಿಂದ ದೂರವಾಗಿದ್ದರು. ಪ್ರತ್ಯೇಕವಾಗಿ ವಾಸಿಸುತ್ತಿದ್ದ ಮಹಿಳೆ, ಮನೆ ಸಹಾಯಕಿಯಾಗಿ ಕೆಲಸ ಮಾಡುತ್ತಾ ಬದುಕು ಸಾಗಿಸುತ್ತಿದ್ದರು. ಆಕೆಯನ್ನು ವಿವಾಹೇತರ ಸಂಬಂಧಕ್ಕಾಗಿ ಲಸ್ಕರ್ ಒತ್ತಾಯಿಸುತ್ತಿದ್ದ. ಆತನ ವರ್ತನೆಯಿಂದ ಬೇಸತ್ತಿದ್ದ ಮಹಿಳೆ, ಆತನಿಂದ ದೂರ ಉಳಿದಿದ್ದರು ಎಂದು ಪೊಲೀಸರು ಹೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ತನ್ನನ್ನು ಪದೇ-ಪದೇ ತಿರಸ್ಕರಿಸಿದ್ದಕ್ಕಾಗಿ ಕುಪಿತಗೊಂಡಿದ್ದ ಲಸ್ಕರ್ ಆಕೆಯನ್ನು ಕತ್ತು ಹಿಸುಕಿ ಕೊಂದಿದ್ದಾನೆ. ಬಳಿಕ, ಶಿರಚ್ಛೇದ ಮಾಡಿದ್ದಾನೆ. ಮೃತದೇಹವನ್ನು ಮೂರು ತುಂಡುಗಳಾಗಿ ಕತ್ತರಿಸಿ, ಬ್ಯಾಗ್‌ನಲ್ಲಿ ತುಂಬಿ ಕಸದ ತೊಟ್ಟಿಗೆ ಎಸೆದಿದ್ದಾನೆ” ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

“ಮಹಿಳೆಯ ತಲೆ ಪತ್ತೆಯಾಗಿದ್ದರಿಂದ ಕೊಲೆ ಪ್ರಕರಣ ಬೆಳಕಿಗೆ ಬಂದಿತು. ಬಳಿಕ, ಸ್ನಿಫರ್ ಡಾಗ್‌ಗಳನ್ನು ಬಳಸಿ, ಮೃಹದೇಹ ಇತರ ಭಾಗಗಳನ್ನು ಪತ್ತೆ ಮಾಡಲಾಗಿದೆ. ಪ್ರದೇಶದಲ್ಲಿದ್ದ ಸಿಸಿಟಿವಿ ದೃಶ್ಯಾವಳಿಯನ್ನು ಪರಿಶೀಲಿಸಿ, ಆರೋಪಿಯನ್ನು ಪತ್ತೆ ಮಾಡಿದ್ದೇವೆ. ಬಂಧಿಸಿದ್ದೇವೆ” ಎಂದು ಪೊಲೀಸ್ ಉಪ ಕಮಿಷನರ್ ಬಿದಿಶಾ ಕಲಿತಾ ತಿಳಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...