ಮಹಿಳೆಯೊಂದಿಗೆ ಬಿಜೆಪಿ ನಾಯಕನ ಅಶ್ಲೀಲ, ಅಸಭ್ಯ ವರ್ತನೆಯ ವಿಡಿಯೋ ವೈರಲ್; ಪಕ್ಷದಿಂದ ವಜಾ

Date:

ವಿವಾಹ ಸಮಾರಂಭದಲ್ಲಿ ಭಾಗಿಯಾಗಿದ್ದ ಬಿಜೆಪಿ ನಾಯಕ ಬಬ್ಬನ್ ಸಿಂಗ್ ರಘುವಂಶಿ ಎಂಬಾತ ಮಹಿಳಾ ಡ್ಯಾನ್ಸರ್‌ ಜೊತೆ ಅಶ್ಲೀಲ ಮತ್ತು ಅಸಭ್ಯವಾಗಿ ನಡೆದುಕೊಂಡಿರುವ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ. ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆದ ಬೆನ್ನಲ್ಲೇ, ರಘುವಂಶಿ ಅವರನ್ನು ಪಕ್ಷದಿಂದ ವಜಾಗೊಳಿಸಲಾಗಿದೆ.

ಉತ್ತರ ಪ್ರದೇಶದ ಬಲಿಯಾ ಜಿಲ್ಲೆಯವರಾದ ಬಬ್ಬನ್ ಸಿಂಗ್ ರಘುವಂಶಿ ‘ರಾಸ್ರಾ ಕಿಸಾನ್ ಕೋ ಅಪರೇಟಿವ್ ಮಿಲ್’ನ ಉಪಾಧ್ಯಕ್ಷರಾಗಿದ್ದಾರೆ. ಅಲ್ಲದೆ, 1993ರಲ್ಲಿ ನಡೆದ ವಿಧಾನಸಭಾ ಚುನಾವಣೆಯಲ್ಲಿ ಬನ್ ಸಿದ್ಧ್ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದರು. ಕ್ಷೇತ್ರದಲ್ಲಿ ಸಕ್ರಿಯವಾಗಿದ್ದು, ಪಕ್ಷದ ಕೆಲಸಗಳಲ್ಲಿ ಮುಂಚೂಣಿಯಲ್ಲಿದ್ದಾರೆ. ಇತ್ತೀಚೆಗೆ, ಬಿಹಾರದ ದುರ್ಗಿಪುರ ಗ್ರಾಮದಲ್ಲಿ ನಡೆದ ವಿವಾಹ ಸಮಾರಂಭದಲ್ಲಿ ಭಾಗಿದ್ದಾಗಿದ್ದ ರಘುವಂಶಿ ಮಹಿಳೆಯೊಂದಿಗೆ ಅಶ್ಲೀಲವಾಗಿ ನಡೆದುಕೊಂಡು, ವಿಕೃತಿ ಮೆರೆದಿದ್ದಾರೆ.

ವಿಡಿಯೋ ವೈರಲ್ ಆದ ಬೆನ್ನಲ್ಲೇ, ರಘುವಂಶಿ ಅವರನ್ನು ಪಕ್ಷದಿಂದ ವಜಾಗೊಳಿಸಿ ರಾಜ್ಯ ಪ್ರಧಾನ ಕಾರ್ಯದರ್ಶಿ ಗೋವಿಂದ ನಾರಾಯಣ ಶುಕ್ಲಾ ಆದೇಶಿಸಿರುವುದಾಗಿ ಬಲಿಯಾ ಬಿಜೆಪಿ ಜಿಲ್ಲಾಧ್ಯಕ್ಷ ಸಂಜಯ್ ಮಿಶ್ರಾ ಹೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ರಘುವಂಶಿ ದುರ್ನಡತೆಯ ಪ್ರಕರಣವನ್ನು ಪಕ್ಷವು ಗಂಭೀರವಾಗಿ ಪರಿಗಣಿಸಿದೆ. ಅವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಲಾಗುವುದು” ಎಂದು ತಿಳಿಸಿದ್ದಾರೆ.

ವೈರಲ್ ಆಗಿರುವ ವಿಡಿಯೋ ನಕಲಿ ಎಂದು ಹೇಳಿರುವ ರಘುವಂಶಿ, “ಪಕ್ಷದ ಕೆಲ ಮುಖಂಡರು ಉದ್ದೇಶಪೂರ್ವಕವಾಗಿ ನನ್ನ ಮಾನಹಾನಿ ಮಾಡುತ್ತಿದ್ದಾರೆ. ಅಕ್ಕಾಗಿ, ಇಂತಹ ವಿವಾದ ಸೃಷ್ಟಿಸುತ್ತಿದ್ದಾರೆ” ಎಂದು ಆರೋಪಿಸಿದ್ದಾರೆ.

“ವೈರಲ್ ಆಗಿರುವ ವಿಡಿಯೋ ನಕಲಿ. ನಾನು ಅಂಥದ್ದೇನೂ ಮಾಡಿಲ್ಲ. ನಾನು ಈಗ ವಯೋವೃದ್ಧ. ನನ್ನ ವರ್ಚಸ್ಸಿಗೆ ಕಳಂಕ ಹಚ್ಚುವ ದುರುದ್ದೇಶದಿಂದ ಸೃಷ್ಟಿಸಿರುವ ಪಿತೂರಿ ಇದು. ಈ ಪಿತೂರಿಯ ಹಿಂದೆ ಶಾಸಕ ಕೇತಕಿ ಸಿಂಗ್ ಅವರ ಕುಟುಂಬವಿದೆ” ಎಂದು ಹೇಳಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...