ಉತ್ತರ ಪ್ರದೇಶ | ಗೆಳೆತನ ಮಾಡಲಿಲ್ಲವೆಂದು ಮಹಿಳೆಯನ್ನು ಜೀವಂತವಾಗಿ ಸುಟ್ಟ ದುರುಳರು

Date:

ಮಹಿಳೆ ಗೆಳೆತನಕ್ಕೆ ಒಪ್ಪಲಿಲ್ಲ ಎಂಬ ಕಾರಣಕ್ಕೆ ಯುವಕ ಮತ್ತು ಆತನ ಸ್ನೇಹಿತರು ಮಹಿಳೆಯನ್ನು ಜೀವಂತವಾಗಿ ಸುಟ್ಟು ಹಾಕಿದ ಘಟನೆ ಉತ್ತರ ಪ್ರದೇಶದ ಫರೂಕಾಬಾದ್ ಜಿಲ್ಲೆಯಲ್ಲಿ ನಡೆದಿದೆ.

33 ವರ್ಷದ ಮಹಿಳೆಯನ್ನು ಜೈತ್‌ಪುರ ಗ್ರಾಮದ ನಿವಾಸಿ ದೀಪಕ್ ಎಂಬಾತ ಹಲವು ತಿಂಗಳುಗಳಿಂದ ಹಿಂಬಾಳಿಸುತ್ತಿದ್ದ, ತನ್ನೊಂದಿಗೆ ಸ್ನೇಹ ಬೆಳೆಸಿಕೊಳ್ಳುವಂತೆ ಒತ್ತಾಯಿಸುತ್ತಿದ್ದ ಎಂದು ಹೇಳಾಗಿದೆ. ಶನಿವಾರ ಔಷಧಿ ಖರೀದಿಸಿ ಮಹಿಳೆ ಮನೆಗೆ ಹಿಂದಿರುಗುತ್ತಿದ್ದಾಗ ದೀಪಕ್ ಮತ್ತು ಆತನ ಐವರು ಸ್ನೇಹಿತರು ಸೇರಿ ಮಹಿಳೆ ಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ್ದಾರೆ ಎಂದು ಆರೋಪಿಸಲಾಗಿದೆ.

ಇದನ್ನು ಓದಿದ್ದೀರಾ? ಮಹಿಳೆಯರ ಮೇಲಿನ ಹಿಂಸೆ; ಸಮಾಜಕ್ಕೆ ಕನ್ನಡಿ ಹಿಡಿದ ಭೀಕರ ಸಂಗತಿಗಳಿವು… (ಭಾಗ-1)

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ತೀವ್ರ ಸುಟ್ಟಗಾಯಗಳನ್ನು ಹೊಂದಿದ್ದ ಮಹಿಳೆಯನ್ನು ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಲ್ಲಿಂದ ಆಕೆಯನ್ನು ಇಟಾವಾ ಜಿಲ್ಲೆಯ ಸೈಫೈನಲ್ಲಿರುವ ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಭಾನುವಾರ ತಡರಾತ್ರಿ ಮಹಿಳೆ ಚಿಕಿತ್ಸೆಗೆ ಸ್ಪಂದಿಸದೆ ಸಾವನ್ನಪ್ಪಿದ್ದಾರೆ. ಈ ಸಂಬಂಧ ದೀಪಕ್ ಮತ್ತು ಇತರ ಐವರ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದ್ದು, ಶೋಧ ಕಾರ್ಯಾಚರಣೆ ನಡೆಸಲಾಗುತ್ತಿದೆ.

ಸಂತ್ರಸ್ತೆ ಮಹಿಳೆ ವಿವಾಹಿತಳಾಗಿದ್ದು, ಆಕೆಯ ಪತಿ ದೆಹಲಿಯ ಕಾರ್ಖಾನೆಯಲ್ಲಿ ಕೆಲಸ ಮಾಡುತ್ತಿದ್ದಾನೆ. ಆಕೆಗೆ ಇಬ್ಬರು ಮಕ್ಕಳಿದ್ದರು. ನಾಲ್ವರೂ ಫತೇಘರ್‌ನಲ್ಲಿ ಬಾಡಿಗೆ ಮನೆಯಲ್ಲಿ ವಾಸಿಸುತ್ತಿದ್ದರು. “ದೀಪಕ್ ಕಳೆದ ಕೆಲವು ತಿಂಗಳುಗಳಿಂದ ನನ್ನ ಮಗಳನ್ನು ಹಿಂಬಾಲಿಸುತ್ತಿದ್ದ, ತನ್ನೊಂದಿಗೆ ಸ್ನೇಹ ಬೆಳೆಸಿಕೊಳ್ಳುವಂತೆ ಒತ್ತಡ ಹೇರುತ್ತಿದ್ದ. ಆದರೆ ಅನಿತಾ ಅದನ್ನು ಒಪ್ಪಿರಲಿಲ್ಲ” ಎಂದು ಸಂತ್ರಸ್ತೆಯ ತಂದೆ ಹೇಳಿದ್ದಾರೆ.

ಸದ್ಯ ಪೊಲೀಸರು ಈ ಬಗ್ಗೆ ತನಿಖೆ ನಡೆಸುತ್ತಿದ್ದು ಅಪರಾಧಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...