ದೆಹಲಿಯ ರೂಪ್ ನಗರದಲ್ಲಿ ಕಬ್ಬಿಣದ ಸೇತುವೆ ಕುಸಿತ: ಚರಂಡಿಗೆ ಬಿದ್ದು ಮಹಿಳೆ ಸಾವು

Date:

ಉತ್ತರ ದೆಹಲಿಯ ರೂಪ್ ನಗರದಲ್ಲಿ ಮಂಗಳವಾರ ಬೆಳಿಗ್ಗೆ ಕಬ್ಬಿಣದ ಸೇತುವೆಯೊಂದು ಕುಸಿದ ಪರಿಣಾಮ, ಮಹಿಳೆಯೊಬ್ಬರು ಚರಂಡಿಗೆ ಬಿದ್ದು ಮೃತಪಟ್ಟಿದ್ದಾರೆ.

​ಸೇತುವೆ ಕುಸಿದುಬಿದ್ದ ಸಂದರ್ಭದಲ್ಲಿ ಬೇರೆ ಯಾರಾದರೂ ಚರಂಡಿಗೆ ಬಿದ್ದಿದ್ದಾರೆಯೇ ಅಥವಾ ಕೊಚ್ಚಿಹೋಗಿದ್ದಾರೆಯೇ ಎಂಬುದನ್ನು ಪತ್ತೆಹಚ್ಚಲು ‘ಬೋಟ್ ಕ್ಲಬ್’ನ ರಕ್ಷಣಾ ತಂಡಗಳು ಕಾರ್ಯಾಚರಣೆ ನಡೆಸುತ್ತಿವೆ ಎಂದು ಹಿಂದೂಸ್ತಾನ್‌ ಟೈಮ್ಸ್‌ ವರದಿ ಮಾಡಿದೆ.

ಈ ವರ್ಷ ರಾಷ್ಟ್ರ ರಾಜಧಾನಿಯಾದ್ಯಂತ ಗುಂಡಿಗಳಿಗೆ ಬಿದ್ದು ಸಂಭವಿಸುತ್ತಿರುವ ಸರಣಿ ಸಾವುಗಳ ಬೆನ್ನಲ್ಲೇ ಈ ಘಟನೆಯೂ ನಡೆದಿದೆ. ಹಲವಾರು ಪ್ರದೇಶಗಳಲ್ಲಿ ನಡೆಯುವ ರಸ್ತೆ ಕಾಮಗಾರಿಗಳ ವೇಳೆ ಗುತ್ತಿಗೆ ನಿಯಮಗಳು ಮತ್ತು ಸಂಚಾರ ಪೊಲೀಸರ ಷರತ್ತುಗಳ ಅಡಿಯಲ್ಲಿ ಅಳವಡಿಸಬೇಕಾದ ಮೂಲಭೂತ ಸುರಕ್ಷತಾ ಕ್ರಮಗಳ ಸಂಪೂರ್ಣ ಕೊರತೆ ಇರುವುದು ಈ ಘಟನೆಗಳಿಂದ ಸ್ಪಷ್ಟವಾಗುತ್ತಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನು ಓದಿದ್ದೀರಾ? ಪೆಟ್ರೋಲ್-ಡೀಸೆಲ್ ಧಾರಾಳ; ಭಾರತದಲ್ಲಿ ಅಡುಗೆ ಅನಿಲಕ್ಕೆ ಹಾಹಾಕಾರ ಎದ್ದಿರುವುದೇಕೆ? ​

ಇದೇ ಫೆಬ್ರುವರಿ 5ರ ಮುಂಜಾನೆ ಪಶ್ಚಿಮ ದೆಹಲಿಯ ಜನಕಪುರಿಯಲ್ಲಿ ಕಮಲ್ ಧ್ಯಾನಿ (25) ಎಂಬ ಬ್ಯಾಂಕ್ ಟೆಲಿಕಾಲರ್ ಸಾವನ್ನಪ್ಪಿದ್ದರು. ಸರಿಯಾದ ಬೀದಿ ದೀಪದ ವ್ಯವಸ್ಥೆ ಇಲ್ಲದ ರಸ್ತೆಯಲ್ಲಿ ಯಾವುದೇ ಸುರಕ್ಷತಾ ಮುಚ್ಚಳ ಅಥವಾ ಸೂಚನಾ ಫಲಕವಿಲ್ಲದೆ ತೆರೆದಿದ್ದ 4 ರಿಂದ 5 ಮೀಟರ್ ಆಳದ ಗುಂಡಿಗೆ ಬಿದ್ದು ಅವರು ಮೃತಪಟ್ಟಿದ್ದರು. ಜನಕಪುರಿಯಲ್ಲಿ ದೆಹಲಿ ಜಲ ಮಂಡಳಿ ಯೋಜನೆಗಾಗಿ ಈ ಗುಂಡಿ ತೋಡಿದ್ದ ಗುತ್ತಿಗೆದಾರನನ್ನು ದೆಹಲಿ ಪೊಲೀಸರು ಈಗಾಗಲೇ ಬಂಧಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಎಐಎಡಿಎಂಕೆ 178, ಬಿಜೆಪಿ 27 ಕ್ಷೇತ್ರಗಳಲ್ಲಿ ಸ್ಪರ್ಧೆ

ಈ ಬಾರಿಯ ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ ಗೆದ್ದು ಅಧಿಕಾರಕ್ಕೇರಲೇ ಬೇಕೆಂದು ಪಣ...

ಮಧ್ಯಪ್ರಾಚ್ಯ ಸಂಘರ್ಷ | ಕದನ ವಿರಾಮ ಎಂದ ಟ್ರಂಪ್; ಮಾತುಕತೆ ನಡೆದಿಲ್ಲವೆಂದ ಇರಾನ್

ಮಧ್ಯಪ್ರಾಚ್ಯದಲ್ಲಿ ಉಲ್ಬಣಗೊಳ್ಳುತ್ತಿರುವ ಸಂಘರ್ಷವನ್ನು ಕೊನೆಗಾಣಿಸಲು ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್ ನಾನಾ...

ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಬ್ಯಾಲೆಟ್ ಪೇಪರ್ ಬಳಕೆ; ವಿಧಾನಸಭೆಯಲ್ಲಿ ಮಸೂದೆ ಅಂಗೀಕಾರ

ರಾಜ್ಯದ ಸ್ಥಳೀಯ ಸಂಸ್ಥೆಗಳ ಚುನಾವಣಾ ಪ್ರಕ್ರಿಯೆಯಲ್ಲಿ ಬದಲಾವಣೆ ತರಲು ರಾಜ್ಯ ಸರ್ಕಾರ...

ಪ್ರಧಾನಿ ಮೋದಿ ಅಮೆರಿಕಕ್ಕೆ 100% ಶರಣಾಗಿದ್ದಾರೆ: ರಾಹುಲ್ ಗಾಂಧಿ

ಪಶ್ಚಿಮ ಏಷ್ಯಾದಲ್ಲಿನ ಯುದ್ಧದ ಪರಿಸ್ಥಿತಿ ಮತ್ತು ದೇಶದ ಆರ್ಥಿಕ ನೀತಿಗಳ ಕುರಿತು...