ರಸಗೊಬ್ಬರಕ್ಕಾಗಿ ಎರಡು ದಿನಗಳಿಂದ ಸರತಿ ಸಾಲಿನಲ್ಲಿ ನಿಂತಿದ್ದ ಮಹಿಳೆ ಸಾವು

Date:

ಮಧ್ಯಪ್ರದೇಶದಲ್ಲಿ ರಸಗೊಬ್ಬರ ಬಿಕ್ಕಟ್ಟು ದುರಂತ ತಿರುವು ಪಡೆದುಕೊಂಡಿದೆ. ಗುನಾ ಜಿಲ್ಲೆಯಲ್ಲಿ ರಸಗೊಬ್ಬರ ಪಡೆಯಲು ರಸಗೊಬ್ಬರ ವಿತರಣಾ ಕೇಂದ್ರದ ಎದುರು ಸತತ ಎರಡು ದಿನಗಳ ಕಾಲ ಸರತಿ ಸಾಲಿನಲ್ಲಿ ನಿಂತಿದ್ದ ರೈತ ಮಹಿಳೆಯೊಬ್ಬರು ಸಾವನ್ನಪ್ಪಿದ್ದಾರೆ.

ಮೃತ ಮಹಿಳೆಯನ್ನು ಭ್ರೂಯಾ ಬಾಯಿ ಎಂದು ಹೆಸರಿಸಲಾಗಿದೆ. ಅವರು ಮಂಗಳವಾರದಿಂದ ರಸಗೊಬ್ಬರಕ್ಕಾಗಿ ಕಾಯುತ್ತಿದ್ದರು. ಬಿಸಿಲು-ಗಾಳಿಯಲ್ಲಿ ಕಾಯುತ್ತದ್ದ ಮಹಿಳೆ ದಾರುಣ ಅಂತ್ಯಕಂಡಿದ್ದಾರೆ. ಘಟನೆಯು ಆಕ್ರೋಶಕ್ಕೆ ಕಾರಣವಾಗಿದೆ. ಆಡಳಿತಾತ್ಮಕ ವ್ಯವಸ್ಥೆಗಳಲ್ಲಿನ ಗಂಭೀರ ಲೋಪಗಳನ್ನು ಮುನ್ನಲೆಗೆ ತಂದಿದ್ದು, ಯೂರಿಯಾ ವಿತರಣೆಯಲ್ಲಿನ ನಿರ್ವಹಣೆಯ ಬಗ್ಗೆ ಗಂಭೀರ ಪ್ರಶ್ನೆಗಳನ್ನು ಹುಟ್ಟುಹಾಕಿದೆ.

ಭ್ರೂಯಾ ಬಾಯಿ ಅವರ ಕುಟುಂಬದ ಪ್ರಕಾರ, ಭ್ರೂಯಾ ಬಾಯಿ ಅವರು ಯೂರಿಯಾ ಖರೀದಿಸಲು ಬಾಗೇರಿಯಲ್ಲಿರುವ ಗೋದಾಮಿಗೆ ಮಂಗಳವಾರ ತೆರಳಿದ್ದರು. ಆದರೆ, ಹೆಚ್ಚು ಜನರಿದ್ದರಿಂದ ರಾತ್ರಿವರೆಗೆ ಸರತಿಯಲ್ಲಿ ನಿಂತರೂ, ಗೊಬ್ಬರ ಪಡೆಯಲು ಸಾಧ್ಯವಾಗಲಿಲ್ಲ. ಹೀಗಾಗಿ, ಬುಧವಾರ ಮುಂಜಾನೆಯೇ ಮತ್ತೆ ಸರತಿ ಸಾಲಿನಲ್ಲಿ ನಿಂತರು. ಆದರೆ, ಅವರು ಕಾಯಲಬೇಕಾಯಿತು. ನಿರಂತರ ಕೊರೆಯುವ ಚಳಿಯಲ್ಲಿಯೂ ಅವರು ರಾತ್ರಿಯಿಡೀ ಗೋದಾಮಿನ ಹೊರಗೆ ಕಾಯುತ್ತಿದ್ದರು. ಚಳಿಯಿಂದಾಗಿ, ಅವರ ಆರೋಗ್ಯ ತೀವ್ರವಾಗಿ ಹದಗೆಟ್ಟಿತ್ತು. ಅವರು ವಾಂತಿ ಮಾಡಿಕೊಂಡು ಕುಸಿದು ಬಿದ್ದರು. ತಕ್ಷಣವೇ ಆ್ಯಂಬುಲೆನ್ಸ್‌ಗೆ ಕರೆ ಮಾಡಿದರೂ, ಯಾವುದೇ ಸೇವೆ ಲಭ್ಯವಾಗಲಿಲ್ಲ ಎಂದು ಆರೋಪಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಅಂತಿಮವಾಗಿ, ಮಹಿಳೆಯನ್ನು ಓರ್ವ ರೈತ ತನ್ನ ಖಾಸಗಿ ವಾಹನದಲ್ಲಿ ಆಸ್ಪತ್ರೆಗೆ ಕರೆದೊಯ್ದರು. ಪ್ರಥಮ ಚಿಕಿತ್ಸೆಯ ಬಳಿಕ, ಆಕೆಯನ್ನು ವೈದ್ಯರು ಗುಣಾ ಜಿಲ್ಲಾ ಆಸ್ಪತ್ರೆಗೆ ಕಳಿಸಿದರು. ಆದರೆ, ಅವರು ಜಿಲ್ಲಾಸ್ಪತ್ರೆ ತಲುಪುವ ವೇಳೆಗೆ ಮೃತಪಟ್ಟಿದ್ದರು.

“ರಸಗೊಬ್ಬರ ವಿತರಣೆಗೆ ಸರಿಯಾದ ನಿರ್ವಹಣ ಕ್ರಮ ಮತ್ತು ವ್ಯವಸ್ಥೆಯನ್ನು ತಂದಿದ್ದರೆ, ಇಂತಹ ಪರಿಸ್ಥಿತಿ ಉದ್ಭವಿಸುತ್ತಿರಲಿಲ್ಲ. ಬಾಯಿ ಅವರು ಕುಸಿದು ಬಿದ್ದಾಗ, ಆ್ಯಂಬುಲೆನ್ಸ್‌ ಸೇವೆಯೂ ನಮಗೆ ದೊರೆಯಲಿಲ್ಲ. ನಮ್ಮ ಸ್ವಂತ ಹಣದಿಂದ ಅವರನ್ನು ಆಸ್ಪತ್ರೆಗೆ ಕರೆದುಕೊಂಡು ಹೋದೆವು. ಸರ್ಕಾರದಿಂದ ನಮಗೆ ಯಾವುದೇ ನೆರವು ಸಿಗಲಿಲ್ಲ” ಎಂದು ಕುಟುಂಬಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಬಾಯಿ ಅವರನ್ನು ಆರೋಗ್ಯ ಕೇಂದ್ರಕ್ಕೆ ಕರೆದೊಯ್ದ ರೈತ ರಸಗೊಬ್ಬರ ವಿತರಣಾ ಕೇಂದ್ರದ ವ್ಯವಸ್ಥೆಗಳ ವಿರುದ್ಧ ಕಿಡಿಕಾರಿದ್ದಾರೆ. “ಗೋದಾಮಿನಲ್ಲಿ ಯಾವುದೇ ವ್ಯವಸ್ಥೆ (ಕುಡಿಯುವ ನೀರು ಸೇರಿ) ಇಲ್ಲ. ಜನರು ದಿನಗಟ್ಟಲೆ ಸರದಿಯಲ್ಲಿ ನಿಂತಿದ್ದಾರೆ. ಯಾವುದೇ ಮೂಲ ಸೌಕರ್ಯಗಳೂ ಅಲ್ಲಿ ದೊರೆಯುತ್ತಿಲ್ಲ. ಮೂರು ದಿನಗಳಿಂದ ಸರತಿಯಲ್ಲಿ ಕಾಯುತ್ತಿದ್ದೇವೆ. ಆದರೆ, ಈವರೆಗೆ ರಸಗೊಬ್ಬರ ಪಡೆಯಲು ಸಾಧ್ಯವಾಗಿಲ್ಲ” ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಕೇಂದ್ರ ಸಚಿವ ಜ್ಯೋತಿರಾದಿತ್ಯ ಸಿಂಧಿಯಾ ಅವರು ಅಧಿಕೃತ ಕಾರ್ಯಕ್ರಮಗಳಿಗಾಗಿ ಜಿಲ್ಲೆಗೆ ಭೇಟಿ ನೀಡಿದ ದಿನವೇ ಈ ಘಟನೆ ಸಂಭವಿಸಿದೆ. ಘಟನೆಗೆ ಸಿಂಧಿಯಾ ಸಂತಾಪ ಸೂಚಿಸಿದ್ದಾರೆ. ವಿಪಕ್ಷಗಳು ಆಡಳಿತಾರೂಢ ಬಿಜೆಪಿಯನ್ನು ತರಾಟೆಗೆ ತೆಗೆದುಕೊಂಡಿವೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...