ಮಾದಕ ದ್ರವ್ಯ ನೀಡಿ ಯುವತಿಯ ಮೇಲೆ ಸಾಮೂಹಿಕ ಅತ್ಯಾಚಾರ: ಗುಜರಾತ್‌ನ ಬಿಜೆಪಿ ನಾಯಕ ಬಂಧನ

Date:

23 ವರ್ಷದ ಯುವತಿಯೊಬ್ಬಳಿಗೆ ಪಾನೀಯದಲ್ಲಿ ಮಾದಕ ದ್ರವ್ಯ ಬೆರೆಸಿ ಕುಡಿಸಿ, ಅರೆ ಪ್ರಜ್ಞಾವಸ್ಥೆಯಲ್ಲಿದ್ದ ಆಕೆಯನ್ನು ಹೋಟೆಲ್ ಒಂದಕ್ಕೆ ಕರೆದೊಯ್ದು, ಆಕೆಯ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿರುವ ಆಘಾತಕಾರಿ ಘಟನೆ ಗುಜರಾತ್‌ನ ಸೂರತ್ ನಗರದಲ್ಲಿ ನಡೆದಿದೆ.

ಈ ಸಂಬಂಧ, ಸೂರತ್ ನಗರ ವಾರ್ಡ್‌ನ ಬಿಜೆಪಿಯ ಪ್ರಧಾನ ಕಾರ್ಯದರ್ಶಿ ಆದಿತ್ಯ ಉಪಾಧ್ಯಾಯ ಹಾಗೂ ಆತನ ಸಹಚರ ಗೌರವ್ ಸಿಂಗ್ ನನ್ನು ಪೊಲೀಸರು ಬಂಧಿಸಿದ್ದಾರೆ. ತನಗೆ ಪ್ರಜ್ಞೆ ಮರಳಿದ ಕೂಡಲೇ ಪೊಲೀಸರನ್ನು ಸಂಪರ್ಕಿಸಿರುವ ಸಂತ್ರಸ್ತ ಯುವತಿಯು, ಈ ಸಂಬಂಧ ಅಧಿಕೃತ ದೂರು ದಾಖಲಿಸಿದ್ದಾಳೆ. ಇದರ ಬೆನ್ನಿಗೇ ಕ್ಷಿಪ್ರ ಕ್ರಮ ಕೈಗೊಂಡಿರುವ ಪೊಲೀಸರು, ಆರೋಪಿಗಳಾದ ಆದಿತ್ಯ ಉಪಾಧ್ಯಾಯ ಹಾಗೂ ಆತನ ಸಹಚರ ಗೌರವ್ ಸಿಂಗ್‌ನನ್ನು ಬಂಧಿಸಿದ್ದಾರೆ.

ಈ ಘಟನೆ ಬೆಳಕಿಗೆ ಬರುತ್ತಿದ್ದಂತೆಯೇ ತೀವ್ರ ಆಕ್ರೋಶ ವ್ಯಕ್ತವಾಗಿದ್ದು, ಆದಿತ್ಯ ಉಪಾಧ್ಯಾಯನನ್ನು ತಕ್ಷಣವೇ ಆತನ ಹುದ್ದೆಯಿಂದ ಬಿಜೆಪಿ ಅಮಾನತುಗೊಳಿಸಿದೆ. ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಸೂರತ್ ನಗರದ 5ನೇ ವಲಯದ ಉಪ ಪೊಲೀಸ್ ಆಯುಕ್ತ ರಾಕೇಶ್ ಬಾರೋತ್, “ಇಬ್ಬರು ಆರೋಪಿಗಳ ವಿರುದ್ಧ ಜಹಾಂಗೀರ್ ಪುರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಈ ದೂರನ್ನು ಆಧರಿಸಿ, ನಾವೀಗ ಸಾಮೂಹಿಕ ಅತ್ಯಾಚಾರದ ಪ್ರಕರಣವನ್ನು ದಾಖಲಿಸಿಕೊಂಡಿದ್ದೇವೆ” ಎಂದು ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ಇದು ‘ಬಲಿಷ್ಠರು’ ಬೆತ್ತಲಾಗುವ ಕಾಲ

“ನನ್ನನ್ನು ಸಮುದ್ರ ತೀರವೊಂದಕ್ಕೆ ಕರೆದೊಯ್ದು, ನನಗೆ ತಂಪು ಪಾನೀಯ ನೀಡಲಾಯಿತು. ಇದಾಗ ನಂತರ, ನಂತರ ಇಬ್ಬರು ಆರೋಪಿಗಳು ನನ್ನನ್ನು ಹೋಟೆಲ್ ಒಂದಕ್ಕೆ ಕರೆದೊಯ್ದು,ನನ್ನ ಮೇಲೆ ಅತ್ಯಾಚಾರವೆಸಗಿದರು ಎಂದು ದೂರುದಾರೆಯು ತನ್ನ ದೂರಿನಲ್ಲಿ ಉಲ್ಲೇಖಿಸಿದ್ದಾಳೆ” ಎಂದೂ ಅವರು ಹೇಳಿದ್ದಾರೆ.

ಈ ಸಂಬಂಧ ಬಂಧಿತರಾಗಿರುವ ಆರೋಪಿಗಳನ್ನು ಆದಿತ್ಯ ಉಪಾಧ್ಯಾಯ ಹಾಗೂ ಗೌರವ್ ಸಿಂಗ್ ಎಂದು ಗುರುತಿಸಲಾಗಿದ್ದು, ತನಿಖೆ ಪ್ರಗತಿಯಲ್ಲಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...