ಪತಿಯ ರಕ್ಷಣೆಗಾಗಿ ಕರಡಿಯೊಂದಿಗೆ ಸೆಣೆಸಾಡಿದ ಮಹಿಳೆ

Date:

ಕರಡಿಗಳು ತನ್ನ ಗಂಡನ ಮೇಲೆ ದಾಳಿ ಮಾಡಿದ್ದು, ಆತನನ್ನ ರಕ್ಷಿಸಲು ಮಹಿಳೆಯೊಬ್ಬರು ತನ್ನ ಜೀವದ ಹಂಗುತೊರೆದು, ಕರಡಿಗಳೊಂದಿಗೆ ಸೆಣೆಸಾಡಿರುವ ಘಟನೆ ಒಡಿಶಾದ ಮಯೂರ್ಭಂಜ್ ಜಿಲ್ಲೆಯಲ್ಲಿ ನಡೆದಿದೆ.

ಮಯೂರ್ಭಂಜ್ ಜಿಲ್ಲೆಯ ಮಿಲು ಗ್ರಾಮದಲ್ಲಿ ಘಟನೆ ನಡೆದಿದೆ. ಗ್ರಾಮದ ಮಾಲ್ಡೆ ಸೊರೆನ್ ಮತ್ತು ಲಿಲಿ ಸೊರೆನ್ ಅವರು ಎಲೆಗಳನ್ನು ಆರಿಸಲು ಕಾಡಿಗೆ ತೆರಳಿದ್ದರು. ಈ ವೇಳೆ, ಆರು ಕರಡಿಗಳು ಅವರ ಮೇಲೆ ದಾಳಿ ನಡೆಸಿವೆ ಎಂದು ಕಾರಂಜಿಯಾ ಅರಣ್ಯದ ರೇಂಜರ್ ಪ್ರಸಾಂತ್ ಕುಮಾರ್ ಸ್ವೈನ್ ಹೇಳಿದ್ದಾರೆ.

ಕರಡಿಗಳ ದಾಳಿಗೆ ಮಾಲ್ಡೆ ಸೊರೆನ್ ಸಿಕ್ಕಿಕೊಂಡಿದ್ದಾರೆ. ಆ ಸಮಯದಲ್ಲಿ, ಲಿಲಿ ಸೊರೆನ್ ಅವರು ತಪ್ಪಿಸಿಕೊಂಡು ಓಡಿಹೋಗುವ ಬದಲು, ತನ್ನ ಪತಿಯ ರಕ್ಷಣಗೆ ಧಾವಿಸಿದ್ದಾರೆ. ಕೊಡಲಿ ಹಿಡಿದು ಕರಡಿಗಳೊಂದಿಗೆ ಹೋರಾಡಿದ್ದಾರೆ. ಈ ವೇಳೆ, ಕರಡಿಯೊಂದಕ್ಕೆ ಪೆಟ್ಟುಬಿದ್ದಿದ್ದು, ಕರಡಿಗಳು ಮರಳಿ ಓಡಿಹೋಗಿವೆ ಎಂದು ವರದಿಯಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಆ ವೇಳೆಗೆ, ಲಿಲಿ ಅವರಿಗೂ ತೀವ್ರ ಗಾಯಗಳಾಗಿದ್ದವು. ಅವರನ್ನು ಕಿಯೋಂಜಾರ್ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.

ಜಾರ್ಖಂಡ್‌ನ ಹಜಾರಿಬಾಗ್ ಜಿಲ್ಲೆಯಲ್ಲಿ ಕುಟುಂಬವೊಂದರನಾಲ್ವರು ಸದಸ್ಯರು ಸೇರಿದಂತೆ ಆರು ಜನರನ್ನು ಕಾಡಾನೆಗಳ ಹಿಂಡು ತುಳಿದು ಕೊಂದ ಕೆಲವು ದಿನಗಳ ಬಳಿಕ ಈ ಘಟನೆ ನಡೆದಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...