ಟ್ಯಾಕ್ಸಿ ಚಾಲಕನಿಂದ ಅತ್ಯಾಚಾರಕ್ಕೆ ಯತ್ನ: ರಾತ್ರಿಯಿಡೀ ಉತ್ತರಾಖಂಡದ ಕಾಡಿನಲ್ಲಿ ಅಡಗಿ ಕೂತ ಮಹಿಳೆ

Date:

ತನ್ನ ಟ್ಯಾಕ್ಸಿ ಚಾಲಕ ತನ್ನ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದಾಗ ದೆಹಲಿಯ ಮಹಿಳೆ ತಪ್ಪಿಸಿಕೊಂಡು, ಮೊಬೈಲ್ ಫೋನ್ ಕೂಡಾ ಇಲ್ಲದೆ ರಾತ್ರಿಯಿಡೀ ಉತ್ತರಾಖಂಡದ ಕಾಡಿನಲ್ಲಿ ಅಡಗಿ ಕೂತ ಘಟನೆ ಬೆಳಕಿಗೆ ಬಂದಿದೆ.

31 ವರ್ಷದ ಮಹಿಳೆ ಪ್ರವಾಸ ಹೊರಟಿದ್ದು ದೆಹಲಿಯಿಂದ ಡೆಹ್ರಾಡೂನ್ ಮೂಲಕ ಕಥ್ಗೋಡಮ್‌ಗೆ ಆಗಮಿಸಿ ನೈನಿತಾಲ್‌ಗೆ ಟ್ಯಾಕ್ಸಿಯನ್ನು ಬಾಡಿಗೆಗೆ ಪಡೆದಿದ್ದರು. ದಾರಿ ಮಧ್ಯೆ ಬೆಳಗಿನ ಜಾವ 1:30 ಆಸುಪಾಸಿನಲ್ಲಿ ಟ್ಯಾಕ್ಸಿ ಚಾಲಕ ವಾಹನವನ್ನು ನಿರ್ಜನ ರಸ್ತೆಯ ಕಡೆಗೆ ತಿರುಗಿಸಿದ್ದಾನೆ. ಮಹಿಳೆ ಆಕ್ಷೇಪ ವ್ಯಕ್ತಪಡಿಸಿದಾಗ, ಚಾಲಕ ವಾಹನವನ್ನು ನಿಲ್ಲಿಸಿ ಅವಳ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ್ದಾನೆ. ಆಕೆಯ ಮೊಬೈಲ್ ಫೋನ್ ಅನ್ನು ಕೂಡಾ ಕಸಿದುಕೊಂಡಿದ್ದಾನೆ ಎಂದು ಪೊಲೀಸರು ಹೇಳಿದ್ದಾರೆ.

ಇದನ್ನು ಓದಿದ್ದೀರಾ? ಗಾಯಕನಿಂದ ಅತ್ಯಾಚಾರ ಆರೋಪ: ಯೋಗಿ ಆದಿತ್ಯನಾಥ್ ಮನೆ ಮುಂದೆ ಆತ್ಮಹತ್ಯೆಗೆ ಯತ್ನಿಸಿದ ಮಹಿಳೆ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ವೇಳೆ ತಪ್ಪಿಸಿಕೊಂಡ ಮಹಿಳೆ ಕಾಡಿನ ಕಡೆಗೆ ಓಡಿ ರಾತ್ರಿಯಿಡೀ ಕಾಡಿನಲ್ಲಿ ಅಡಗಿಕೊಂಡಿದ್ದಾಳೆ. ಮರುದಿನ ಬೆಳಿಗ್ಗೆ ಹೇಗೋ ಪಟ್ವಾ ದಂಗಾರ್ ಗ್ರಾಮವನ್ನು ತಲುಪಿ ಸ್ಥಳೀಯರ ಸಹಾಯದಿಂದ ಪೊಲೀಸರಿಗೆ ದೂರು ನೀಡಿದ್ದಾಳೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಪೊಲೀಸರು ಕೂಡಲೇ ಕ್ರಮಕೈಗೊಂಡಿದ್ದು, ಸಾಕ್ಷ್ಯಗಳನ್ನು ಸಂಗ್ರಹಿಸಿ ಸಂತ್ರಸ್ತೆಯ ವೈದ್ಯಕೀಯ ಪರೀಕ್ಷೆ ಮಾಡಿಸಿದ್ದಾರೆ. ಮಹಿಳೆಯ ದೂರಿನ ಆಧಾರದ ಮೇಲೆ, ಅತ್ಯಾಚಾರ, ದರೋಡೆ ಮತ್ತು ಅಪಹರಣ ಪ್ರಕರಣ ದಾಖಲಿಸಲಾಗಿದೆ. ಸಿಸಿಟಿವಿ ಕ್ಯಾಮೆರಾಗಳು, ಟ್ಯಾಕ್ಸಿಯ ಸಂಖ್ಯೆ ಮತ್ತು ಅದರ ಜಿಪಿಎಸ್ ವ್ಯವಸ್ಥೆಯನ್ನು ಬಳಸಿಕೊಂಡು, ಪೈನ್ಸ್ ಭವಾಲಿ ರಸ್ತೆಯ ದೀಪಕ್ ಸಿಂಗ್ ಬೋರಾ (39) ಎಂದು ಗುರುತಿಸಲಾದ ಆರೋಪಿ ಚಾಲಕನನ್ನು ಪೊಲೀಸರು ಬಂಧಿಸಿದ್ದಾರೆ.

ಈ ಬಗ್ಗೆ ಮಾಧ್ಯಮಕ್ಕೆ ಪ್ರತಿಕ್ರಿಯಿಸಿರುವ ನೈನಿತಾಲ್ ಹಿರಿಯ ಪೊಲೀಸ್ ವರಿಷ್ಠಾಧಿಕಾರಿ (ಎಸ್‌ಎಸ್‌ಪಿ) ಮಂಜುನಾಥ್ ಟಿಸಿ, “ನೈನಿತಾಲ್‌ನಲ್ಲಿ ಪ್ರವಾಸಿಗರು ಮತ್ತು ಸಾರ್ವಜನಿಕರ ಸುರಕ್ಷತೆಯು ಪ್ರಮುಖ ಆದ್ಯತೆಯಾಗಿದೆ. ಈ ರೀತಿ ಅಪರಾಧ ಎಸಗುವವರ ವಿರುದ್ದ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು” ಎಂದು ತಿಳಿಸಿದ್ದಾರೆ.

ಇನ್ನು ಟ್ಯಾಕ್ಸಿ ಮಾಲೀಕರಿಗೆ ಪೊಲೀಸ್ ವರಿಷ್ಠಾಧಿಕಾರಿ ಎಚ್ಚರಿಕೆ ನೀಡಿದ್ದು, “ವಾಹನಗಳನ್ನು ಚಾಲಕರಿಗೆ ಹಸ್ತಾಂತರಿಸುವ ಮೊದಲು ಅವರ ದಾಖಲೆಗಳನ್ನು ಪರಿಶೀಲಿಸಬೇಕು. ಈ ಆದೇಶಗಳನ್ನು ಪಾಲಿಸದಿದ್ದರೆ ಅವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ” ಎಂದು ಸೂಚಿಸಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಎಐಎಡಿಎಂಕೆ 178, ಬಿಜೆಪಿ 27 ಕ್ಷೇತ್ರಗಳಲ್ಲಿ ಸ್ಪರ್ಧೆ

ಈ ಬಾರಿಯ ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ ಗೆದ್ದು ಅಧಿಕಾರಕ್ಕೇರಲೇ ಬೇಕೆಂದು ಪಣ...

ಮಧ್ಯಪ್ರಾಚ್ಯ ಸಂಘರ್ಷ | ಕದನ ವಿರಾಮ ಎಂದ ಟ್ರಂಪ್; ಮಾತುಕತೆ ನಡೆದಿಲ್ಲವೆಂದ ಇರಾನ್

ಮಧ್ಯಪ್ರಾಚ್ಯದಲ್ಲಿ ಉಲ್ಬಣಗೊಳ್ಳುತ್ತಿರುವ ಸಂಘರ್ಷವನ್ನು ಕೊನೆಗಾಣಿಸಲು ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್ ನಾನಾ...

ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಬ್ಯಾಲೆಟ್ ಪೇಪರ್ ಬಳಕೆ; ವಿಧಾನಸಭೆಯಲ್ಲಿ ಮಸೂದೆ ಅಂಗೀಕಾರ

ರಾಜ್ಯದ ಸ್ಥಳೀಯ ಸಂಸ್ಥೆಗಳ ಚುನಾವಣಾ ಪ್ರಕ್ರಿಯೆಯಲ್ಲಿ ಬದಲಾವಣೆ ತರಲು ರಾಜ್ಯ ಸರ್ಕಾರ...

ಪ್ರಧಾನಿ ಮೋದಿ ಅಮೆರಿಕಕ್ಕೆ 100% ಶರಣಾಗಿದ್ದಾರೆ: ರಾಹುಲ್ ಗಾಂಧಿ

ಪಶ್ಚಿಮ ಏಷ್ಯಾದಲ್ಲಿನ ಯುದ್ಧದ ಪರಿಸ್ಥಿತಿ ಮತ್ತು ದೇಶದ ಆರ್ಥಿಕ ನೀತಿಗಳ ಕುರಿತು...