16 ವರ್ಷಗಳಿಂದ ಗಂಡನ ಮನೆಯಲ್ಲಿ ಗೃಹಬಂಧನದಲ್ಲಿದ್ದ ಮಹಿಳೆ; ರಕ್ಷಣೆ

Date:

ಮಹಿಳೆಯನ್ನು ಆಕೆಯ ಗಂಡನ ಮನೆಯವರೇ 16 ವರ್ಷಗಳಿಂದ ಕೂಡಿಹಾಕಿದ್ದ ಪ್ರಕರಣ ಮಧ್ಯಪ್ರದೇಶದಲ್ಲಿ ಬೆಳಕಿಗೆ ಬಂದಿದೆ. ಮಹಿಳೆಯನ್ನು ಪೊಲೀಸರು ರಕ್ಷಿಸಿದ್ದಾರೆ.

ಮಧ್ಯಪ್ರದೇಶದ ನರಸಿಂಗ್‌ಪುರದಲ್ಲಿ ರಾನು ಸಾಹು ಎಂಬ ಮಹಿಳೆಯನ್ನು ಆಕೆಯ ಗಂಡನ ಮನೆಯವರು ಕೂಡಿಹಾಕಿದ್ದರು. ತಮ್ಮ ಮಗಳನ್ನು ಕೂಡಿಹಾಕಿದ್ದಾರೆಂದು ರಾನು ಅವರ ತಂದೆ ಕಿಶನ್ ಲಾಲ್ ಸಾಹು ಅವರು ಪೊಲೀಸರು ದೂರು ನೀಡಿದ್ದರು. ಪ್ರಕರಣ ದಾಖಲಿಸಿಕೊಂಡಿದ್ದ ಪೊಲೀಸರು ಮಹಿಳೆಯನ್ನು ರಕ್ಷಿಸಿದ್ದಾರೆ.

ರಾನು ಅವರು 2006ರಲ್ಲಿ ಮದುವೆಯಾಗಿದ್ದರು. ಆದರೆ, 2008ರಿಂದ ಅವರನ್ನು ಆಕೆಯ ಗಂಡನ ಮನೆಯವರು ಕೂಡಿ ಹಾಕಿದ್ದರು. ರಾನು ಅವರ ತಂದೆಯೂ ಸೇರಿದಂತೆ ಯಾರನ್ನೂ ಆಕೆ ಭೇಟಿ ಮಾಡಲು ಬಿಟ್ಟಿರಲಿಲ್ಲ. 16 ವರ್ಷಗಳಿಂದ ಆಕೆಯನ್ನು ಮನೆಯಿಂದ ಹೊರಗೆ ಕಾಲಿಡಂತೆ ಮನೆಯಲ್ಲಿ ಬಂಧಿಸಿಡಲಾಗಿತ್ತು ಎಂದು ಪೊಲೀಸರು ತಿಲಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಆಕೆಗೆ ನಿತ್ಯ ಕಿರುಕುಳ ನೀಡುತ್ತಿದ್ದರು. ರಾನುವನ್ನು ಆಕೆಯ ಮಗ ಮತ್ತು ಮಗಳಿಂದಲೂ ದೂರವಿಟ್ಟಿದ್ದಾರೆ. ಯಾರೊಂದಿಗೆ ಮಾತನಾಡಲು ಬಿಟ್ಟಿಲ್ಲ” ಎಂದು ಆಕೆಯ ತಂದೆ ದೂರಿನಲ್ಲಿ ವಿವರಿಸಿದ್ದಾರೆ.

“ಪೊಲೀಸರ ತಂಡವು ಎನ್‌ಜಿಒ ಸಹಾಯದಿಂದ ರಾನುವನ್ನು ರಕ್ಷಿಸಿದೆ. ಆಕೆಯನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಹೆಚ್ಚಿನ ತನಿಖೆ ನಡೆಸಲಾಗುತ್ತಿದೆ” ಎಂದು ಜಹಾಂಗೀರಾಬಾದ್ ಮಹಿಳಾ ಠಾಣಾ ಪೊಲೀಸ್ ಠಾಣೆಯ ಉಸ್ತುವಾರಿ ಶಿಲ್ಪಾ ಕೌರವ್ ತಿಳಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...