ಆರು ವಕೀಲರನ್ನು ಬದಲಾಯಿಸಿದ್ದಕ್ಕೆ ಮಹಿಳೆಗೆ ಜೈಲು ಶಿಕ್ಷೆ: ತೀರ್ಪು ‘ಆಘಾತಕಾರಿ’ ಎಂದ ಸುಪ್ರೀಂ ಕೋರ್ಟ್‌

Date:

ಚೆಕ್ ಬೌನ್ಸ್ ಪ್ರಕರಣದಲ್ಲಿ ಮೇಲ್ಮನವಿ ಸಲ್ಲಿಸುವಾಗ ಆರು ಬಾರಿ ವಕೀಲರನ್ನು ಬದಲಾಯಿಸಿದ್ದಕ್ಕಾಗಿ ಕೆಳ ನ್ಯಾಯಾಲಯವೊಂದು ಮಹಿಳೆಗೆ ಜೈಲು ಶಿಕ್ಷೆ ವಿಧಿಸಿದೆ. ಈ ತೀರ್ಪು ಪ್ರಶ್ನಿಸಿ ಸಲ್ಲಿಸಲಾದ ಅರ್ಜಿ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ ಮಹಿಳೆಯನ್ನು ಬಿಡುಗಡೆ ಮಾಡುವಂತೆ ಆದೇಶಿಸಿ, ಕೆಳ ನ್ಯಾಯಾಲಯ ನೀಡಿರುವ ತೀರ್ಪು, “ಭಯಾನಕ ಮತ್ತು ಆಘಾತಕಾರಿ” ಎಂದು ಹೇಳಿದೆ.

ಈ ಪ್ರಕರಣವು ಮಹಿಳೆಯ ತಾಯಿ ನೀಡಿದ ಚೆಕ್‌ಗಳಿಗೆ ಸಂಬಂಧಿಸಿದ್ದಾಗಿದ್ದು, 7 ಲಕ್ಷ ಮತ್ತು 5.02 ಲಕ್ಷ ರೂ. ಮೌಲ್ಯದ ಚೆಕ್‌ಗಳು ಬೌನ್ಸ್ ಆಗಿದೆ. ಈ ಪ್ರಕರಣದಲ್ಲಿ ವಿಚಾರಣಾ ನ್ಯಾಯಾಲಯವು ತಾಯಿ ಮತ್ತು ಮಗಳಿಬ್ಬರನ್ನೂ ಅಪರಾಧಿಗಳು ಎಂದು ತೀರ್ಪು ನೀಡಿ ಶಿಕ್ಷೆ ವಿಧಿಸಿದೆ. ಅದಾದ ಬಳಿಕ ಮಹಿಳೆ ಫರಿದಾಬಾದ್‌ನ ಸೆಷನ್ಸ್ ನ್ಯಾಯಾಲಯದಲ್ಲಿ ಮೇಲ್ಮನವಿ ಸಲ್ಲಿಸಿದ್ದು, ಈ ಅರ್ಜಿ ವಿಚಾರಣೆ ಎಂಟು ವರ್ಷಗಳಿಂದ ಬಾಕಿ ಉಳಿದಿದೆ ಎಂದು ಪೀಠ ಗಮನಿಸಿದೆ.

ಇದನ್ನು ಓದಿದ್ದೀರಾ? ನಟ ದರ್ಶನ್‌ಗೆ ಜಾಮೀನು ಪ್ರಶ್ನಿಸಿ ಸುಪ್ರೀಂ ಕೋರ್ಟ್‌ನಲ್ಲಿ ಮೇಲ್ಮನವಿ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ನಡುವೆ ಸೆಷನ್ಸ್ ನ್ಯಾಯಾಲಯವು ಮಹಿಳೆಯ ಜಾಮೀನು ರದ್ದುಗೊಳಿಸಿ ಕಸ್ಟಡಿಗೆ ಆದೇಶಿಸಿತ್ತು. ತಾಯಿ ಮತ್ತು ಮಗಳು ಈ ನಿರ್ಧಾರವನ್ನು ಪ್ರಶ್ನಿಸಿ ಹೈಕೋರ್ಟ್ ಮತ್ತು ನಂತರ ಸುಪ್ರೀಂ ಕೋರ್ಟ್‌ ಮೆಟ್ಟಿಲೇರಿದ್ದಾರೆ.

ಈ ಅರ್ಜಿ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿಗಳಾದ ಅರವಿಂದ್ ಕುಮಾರ್ ಮತ್ತು ಎನ್ ವಿ ಅಂಜಾರಿಯಾ ಅವರನ್ನೊಳಗೊಂಡ ಪೀಠವು, ತಾಯಿ ಈಗ ನಿಧನರಾಗಿದ್ದು ಆದರೆ ಮೇಲ್ಮನವಿ ನ್ಯಾಯಾಲಯವು ಅವರ ಮರಣ ಪ್ರಮಾಣಪತ್ರವನ್ನು ಸ್ವೀಕರಿಸಿಲ್ಲ ಎಂಬುದನ್ನು ಗಮನಿಸಿದೆ. ಈ ಪ್ರಮಾಣಪತ್ರ ಕಾನೂನುಬದ್ಧವಾಗಿದೆಯೇ ಎಂಬುದನ್ನು ಪರಿಶೀಲಿಸಲು ಸೆಷನ್ಸ್ ನ್ಯಾಯಾಲಯವು ಸಂಬಂಧಪಟ್ಟ ಸ್ಟೇಷನ್ ಹೌಸ್ ಅಧಿಕಾರಿಗೆ ನಿರ್ದೇಶನ ನೀಡಿದೆ.

“ವಕೀಲರು ನ್ಯಾಯಾಲಯಕ್ಕೆ ಸಹಾಯ ಮಾಡದಿದ್ದರೆ, ಅಮಿಕಸ್ ಕ್ಯೂರಿಯನ್ನು ನೇಮಿಸಬಹುದು ಅಥವಾ ಆರೋಪಿಗೆ ಪರ್ಯಾಯ ವಕೀಲರನ್ನು ವ್ಯವಸ್ಥೆ ಮಾಡಬಹುದು. ಇದು ಸೂಕ್ತವಾದ ಕ್ರಮ. ಆದರೆ ಅವರನ್ನು ಜೈಲಿಗೆ ಹಾಕುವುದು ಅಲ್ಲ” ಎಂದು ಪೀಠ ಹೇಳಿದೆ.

ಸದ್ಯ ನ್ಯಾಯಾಲಯವು ಮಹಿಳೆಯನ್ನು 1 ಲಕ್ಷ ರೂ. ವೈಯಕ್ತಿಕ ಬಾಂಡ್ ಮೇಲೆ ಬಿಡುಗಡೆ ಮಾಡಲು ಆದೇಶಿಸಿದೆ. “ಪ್ರತಿ ವಿಚಾರಣೆಯ ದಿನಾಂಕದಂದು, ವಿಶೇಷವಾಗಿ ಈಗಾಗಲೇ ವಿಧಿಸಲಾದ ಶಿಕ್ಷೆಯನ್ನು ಅಮಾನತುಗೊಳಿಸಿದ ನಂತರ, ಮೇಲ್ಮನವಿ ನ್ಯಾಯಾಲಯವು ಮೇಲ್ಮನವಿದಾರರು ಹಾಜರಿರಬೇಕು ಎಂದು ಒತ್ತಾಯಿಸುವುದು ಭಯಾನಕ ಮತ್ತು ಆಘಾತಕಾರಿ” ಎಂದು ಪೀಠ ಅಭಿಪ್ರಾಯಿಸಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...