ಮೂವರು ಮಕ್ಕಳೊಂದಿಗೆ ನಾಲೆಗೆ ಹಾರಿದ ಮಹಿಳೆ; ನಾಲ್ವರೂ ಸಾವು

Date:

ಕೌಟುಂಬಿಕ ಕಲಹದಿಂದ ಬೇಸತ್ತಿದ್ದ ಮಹಿಳೆಯೊಬ್ಬರು ತನ್ನ ಮೂವರು ಮಕ್ಕಳನ್ನು ಬೆನ್ನಿಗೆ ಸೀರಿಯಲ್ಲಿ ಕಟ್ಟಿಕೊಂಡು, ನಾಲೆಗೆ ಹಾರಿ ಆತ್ಯಹತ್ಯೆ ಮಾಡಿಕೊಂಡಿರುವ ಘಟನೆ ಉತ್ತರ ಪ್ರದೇಶದ ಬಂಡಾ ಜಿಲ್ಲೆಯಲ್ಲಿ ನಡೆದಿದೆ. ಘಟನೆಯಲ್ಲಿ ಮಹಿಳೆ ಮತ್ತು ಮೂವರು ಮಕ್ಕಳು ಮೃತಪಟ್ಟಿದ್ದಾರೆ.

ತನ್ನ ಪತಿ ಜೊತೆಗಿನ ನಿರಂತರ ಕಲಹದಿಂದ ಬೇಸತ್ತು, ಮಹಿಳೆಯು ತನ್ನ ಮಕ್ಕಳೊಂದಿಗೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ. ಮೃತರನ್ನು ಬಂಡಾ ಜಿಲ್ಲೆಯ ರಿಸೌರಾ ಗ್ರಾಮದ ಅಖಿಲೇಶ್ ಆರ್ಖ್ ಅವರ ಪತ್ನಿ ರೀನಾ (30) ಮತ್ತು ಮೂವರು ಮಕ್ಕಳಾದ ಹಿಮಾಂಶು (9), ಅನ್ಷಿ (5) ಹಾಗೂ ಪ್ರಿನ್ಸ್ (3) ಎಂದು ಗುರುತಿಸಲಾಗಿದೆ.

ಸ್ಥಳಕ್ಕೆ ಪೊಲೀಸರು ಮತ್ತು ಅಗ್ನಿಶಾಮಕ ಸಿಬ್ಬಂದಿ ಧಾವಿಸಿದ್ದು, ಮೃತದೇಹಗಳನ್ನು ನಾಲೆಯಿಂದ ಹೊರತೆಗೆದಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಘಟನೆ ಬಗ್ಗೆ ಪ್ರತಿಕ್ರಿಯೆ ನೀಡಿರುವ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಶಿವರಾಜ್, “ಮಹಿಳೆಯ ಕುಟುಂಬದ ಸದಸ್ಯರು ರೀನಾ ಮತ್ತು ಮಕ್ಕಳಿಗಾಗಿ ಹುಟುಕಾಟ ನಡೆಸುತ್ತಿದ್ದಾಗ, ರೀನಾ ಅವರ ಬಳೆಗಳು ಹಾಗೂ ಮಕ್ಕಳ ಬಟ್ಟೆಗಳು ನಾಲೆಯ ಬಳಿ ಪತ್ತೆಯಾಗಿದ್ದವು. ಆಕೆ ನಾಲೆಗೆ ಹಾರಿರಬಹುದು ಎಂಬ ಶಂಕೆಯ ಮೇಲೆ, ನಾಲೆಯಲ್ಲಿ ಹುಟುಕಾಟ ನಡಲಾಗಿದ್ದು, ನಾಲ್ವರು ಮೃತದೇಹಗಳು ಪತ್ತೆಯಾಗಿವೆ” ಎಂದು ತಿಳಿಸಿದ್ದಾರೆ.

ಘಟನೆಗೆ ಸಂಬಂಧಿಸಿದಂತೆ ಮೃತ ರೀನಾ ಅವರ ಪತಿಯನ್ನು ವಿಚಾರಣೆಗೆ ಓಳಪಡಿಸಲಾಗಿದೆ. ತನಿಖೆ ನಡೆಯುತ್ತಿದೆ ಎಂದು ಹೇಳಿದ್ದಾರೆ.

ನೆನಪಿಡಿ: ಸಮಸ್ಯೆಗಳಿಗೆ ಆತ್ಮಹತ್ಯೆ ಪರಿಹಾರವಲ್ಲ… ಆತ್ಮಹತ್ಯೆಗಳ ಕುರಿತು ಚರ್ಚಿಸುವುದು ಕೂಡ ಕೆಲವರಿಗೆ ಪ್ರಚೋದನೆ ನೀಡಬಹುದು. ಸಮಸ್ಯೆಗಳ ಬಗ್ಗೆ ಆಪ್ತರೊಂದಿಗೆ ಹಂಚಿಕೊಳ್ಳುವುದರಿಂದ, ಸಮಾಲೋಚನೆ ನಡೆಸುವುದರಿಂದ ಆತ್ಮಸ್ಥೈರ್ಯ ಹೆಚ್ಚುತ್ತದೆ. ಆತ್ಮಹತ್ಯೆಗಳನ್ನು ತಡೆಯಬಹುದು. ತುರ್ತು ಪರಿಸ್ಥಿತಿಯಿದ್ದರೆ ಕರೆ ಮೂಲಕ ವೈದ್ಯರನ್ನು ಸಂಪರ್ಕಿಸಿ. ಬೆಂಗಳೂರು ಸಹಾಯವಾಣಿ 080-25497777, ನಿಮಾನ್ಸ್ ಸಹಾಯವಾಣಿ 080-46110007, ಆರೋಗ್ಯ ಸಹಾಯವಾಣಿ 104.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...