ಮಾವನ ಕೊಂದು ಅರಿಶಿನ ಹಚ್ಚಿ ಗಾಯಗಳನ್ನು ಮುಚ್ಚಿಡಲು ಯತ್ನಿಸಿದ ಮಹಿಳೆ

Date:

ಮಹಿಳೆಯೋರ್ವರು ತನ್ನ 60 ವರ್ಷದ ಮಾವನನ್ನು ಕೊಂದು ಅರಿಶಿನ ಹಚ್ಚಿ ಗಾಯಗಳನ್ನು ಮುಚ್ಚಿಡಲು ಯತ್ನಿಸಿದ ಘಟನೆ ಛತ್ತೀಸ್‌ಗಢದ ಬಲೋದ್ ಜಿಲ್ಲೆಯಲ್ಲಿ ನಡೆದಿದೆ. ಮೃತ ವ್ಯಕ್ತಿಯನ್ನು ಮನೋಹರ್ ನಿರ್ಮಲ್ಕರ್ ಎಂದು ಗುರುತಿಸಲಾಗಿದೆ.

ಆರೋಪಿ ಮಹಿಳೆ ಗೀತಾ ನಿರ್ಮಲ್ಕರ್ ತನ್ನ ಸ್ನೇಹಿತ ಲೇಖ್ರಾಮ್ ನಿಶಾದ್ ಸಹಾಯದಿಂದ ಈ ಕೊಲೆ ಮಾಡಿದ್ದಾಳೆ ಎಂದು ಹೇಳಲಾಗಿದೆ. ತನ್ನ ಮಾವ ನಿದ್ದೆ ಮಾಡುತ್ತಿದ್ದಾಗ ವಿದ್ಯುತ್ ಶಾಕ್ ನೀಡಿ ಹತ್ಯೆ ಮಾಡಿದ್ದಾಳೆ ಎಂದು ಆರೋಪಿಸಲಾಗಿದೆ.

ಇದನ್ನು ಓದಿದ್ದೀರಾ? ಶಿವಮೊಗ್ಗ | ಬೊಮ್ಮನಕಟ್ಟೆಯಲ್ಲಿ ಕುಡಿದ ಅಮಲಿನಲ್ಲಿ ಗಲಾಟೆ : ಕೊಲೆಯಲ್ಲಿ ಅಂತ್ಯ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಮನೋಹರ್ ಕುಡಿದು ಸೈಕಲ್‌ನಿಂದ ಬಿದ್ದು ಸಾವನ್ನಪ್ಪಿದ್ದಾರೆ ಎಂದು ಗೀತಾ ಕುಟುಂಬಸ್ಥರು ಮತ್ತು ಗ್ರಾಮಸ್ಥರಿಗೆ ತಿಳಿಸಿದ್ದಾಳೆ. ಆದರೆ ಅಂತ್ಯಕ್ರಿಯೆ ಸಿದ್ಧತೆ ನಡೆಸುವಾಗ ಗ್ರಾಮಸ್ಥರು ದೇಹದ ಮೇಲೆ ಹಲವು ಗಾಯದ ಗುರುತುಗಳನ್ನು ನೋಡಿ ದೋಂಡಿ ಲೋಹರಾ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಮರಣೋತ್ತರ ಪರೀಕ್ಷೆಯಲ್ಲಿ ವಿದ್ಯುತ್ ಆಘಾತದಿಂದ ಸಾವು ಸಂಭವಿಸಿದೆ ಎಂದು ದೃಢಪಟ್ಟಿದೆ.

ಈ ಬಗ್ಗೆ ಮಾಧ್ಯಮಕ್ಕೆ ಮಾಹಿತಿ ನೀಡಿರುವ ಪೊಲೀಸ್ ವರಿಷ್ಠಾಧಿಕಾರಿ ಯೋಗೇಶ್ ಪಟೇಲ್, “ಕೊಲೆ ನಡೆದಾಗ ಮನೋಹರ್ ಕುಡಿದು ನಿದ್ರಿಸುತ್ತಿದ್ದರು. ಅಂತ್ಯಕ್ರಿಯೆಗೆ ಸಿದ್ಧತೆ ನಡೆಸುತ್ತಿದ್ದಾಗ ಗ್ರಾಮಸ್ಥರು ದೇಹದ ಮೇಲೆ ಗಾಯಗಳನ್ನು ನೋಡಿ ಕೊಲೆ ಶಂಕೆ ವ್ಯಕ್ತಪಡಿಸಿ ಪೊಲೀಸರಿಗೆ ಮಾಹಿತಿ ನೀಡಿದರು. ಮರಣೋತ್ತರ ಪರೀಕ್ಷೆ ವೇಳೆ ಕೊಲೆ ನಡೆದಿರುವುದು ದೃಢಪಟ್ಟಿದೆ” ಎಂದು ತಿಳಿಸಿದ್ದಾರೆ.

ತನಿಖೆಯ ಸಮಯದಲ್ಲಿ, ಪೊಲೀಸರು ಕುಟುಂಬ ಮತ್ತು ಗ್ರಾಮಸ್ಥರನ್ನು ಪ್ರಶ್ನಿಸಿದ್ದು ಮನೋಹರ್ ಮತ್ತು ಅವರ ಸೊಸೆಯ ನಡುವೆ ಆಗಾಗ್ಗೆ ಜಗಳಗವಾಗುತ್ತಿತ್ತು ಎಂದು ತಿಳಿದುಬಂದಿದೆ. ಇನ್ನು ಸೊಸೆ ತನಗೆ ಮಾವ ಹಿಂಸೆ ನೀಡುತ್ತಿದ್ದರು ಎಂದು ಆರೋಪಿಸಿದ್ದಾಳೆ.

“ಆರೋಪಿಗಳು ಮನೋಹರ್ ಮಲಗಿದ್ದಾಗ ದೇಹದ ವಿವಿಧ ಭಾಗಗಳಿಗೆ ವಿದ್ಯುತ್ ಶಾಕ್ ನೀಡಿ ಕೊಂದಿದ್ದಾರೆ. ಬಳಿಕ ಗಾಯಗಳನ್ನು ಮರೆಮಾಡಲು ಅರಿಶಿನ ಮತ್ತು ರೋಸ್ ವಾಟರ್ ಹಚ್ಚಿದ್ದಾರೆ. ಕುಟುಂಬಸ್ಥರು ಮತ್ತು ಗ್ರಾಮದ ಜನರಿಗೆ ಮನೋಹರ್ ಬಿದ್ದು ಸಾವನ್ನಪ್ಪಿದ್ದಾರೆ ಎಂದು ಹೇಳಿದ್ದಾರೆ” ಎಂದು ಘಟನೆಯ ವಿವರ ನೀಡಿದ್ದಾರೆ.

ಇಬ್ಬರೂ ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ಕಳುಹಿಸಲಾಗಿದ್ದು ತನಿಖೆ ಮುಂದುವರೆದಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...