ನೀರಿನ ಸಮಸ್ಯೆ| ದೆಹಲಿ ಜಲ ಮಂಡಳಿ ಕಚೇರಿ ಧ್ವಂಸಗೊಳಿಸಿದ ಬಿಜೆಪಿ ಮಹಿಳಾ ಕಾರ್ಯಕರ್ತರು

Date:

ದೆಹಲಿಯಲ್ಲಿ ತೀವ್ರ ನೀರಿನ ಬಿಕ್ಕಟ್ಟಿನ ನಡುವೆ ಬಿಜೆಪಿಯ ಮಹಿಳಾ ಪ್ರತಿಭಟನಾಕಾರರು ಚತ್ತರ್‌ಪುರದಲ್ಲಿರುವ ದೆಹಲಿ ಜಲ ಮಂಡಳಿ (ಡಿಜೆಬಿ) ಕಚೇರಿಯನ್ನು ಧ್ವಂಸಗೊಳಿಸಿದ್ದಾರೆ. ದೆಹಲಿಯಲ್ಲಿ ತಾಪಮಾಣ ಭಾರೀ ಪ್ರಮಾಣದಲ್ಲಿ ಏರಿಕೆಯಾಗಿದ್ದು ನೀರಿನ ಸಮಸ್ಯೆಯೂ ಕೂಡಾ ಕಾಣಿಸಿಕೊಂಡಿದೆ. ಈ ನಡುವೆ ಭಾನುವಾರ ನೀರು ನಿರ್ವಹಣಾ ಸಂಸ್ಥೆಯ ಮೇಲೆ ಬಿಜೆಪಿ ಕಾರ್ಯಕರ್ತರು ದಾಳಿ ನಡೆಸಿದ್ದಾರೆ.

ನೀರಿನ ಸಮಸ್ಯೆ ಸಂಬಂಧಿ ಎಎಪಿ ಸರ್ಕಾರದ ವಿರುದ್ಧ ಬಿಜೆಪಿ ಪ್ರತಿಭಟನೆ ನಡೆಸಿದ್ದು, ಎಎಪಿ ವಿರುದ್ಧ ವಾಗ್ದಾಳಿ ನಡೆಸಿದ ದೆಹಲಿ ಬಿಜೆಪಿ ಅಧ್ಯಕ್ಷ ವೀರೇಂದ್ರ ಸಚ್‌ದೇವ, ಅರವಿಂದ್ ಕೇಜ್ರಿವಾಲ್ ಮುಖ್ಯಮಂತ್ರಿಯಾದಾಗ ದೆಹಲಿ ಜಲ ಮಂಡಳಿ ಕೋಟ್ಯಂತರ ರೂಪಾಯಿ ಲಾಭದಲ್ಲಿತ್ತು ಎಂದು ಹೇಳಿದ್ದಾರೆ.

ಇದನ್ನು ಓದಿದ್ದೀರಾ?  ದೆಹಲಿ ಜಲ ವಿವಾದ | ನಮ್ಮಲ್ಲಿ ಸಾಕಷ್ಟು ನೀರಿಲ್ಲ; ಸುಪ್ರೀಂಗೆ ಹಿಮಾಚಲ ಸರ್ಕಾರ ಮಾಹಿತಿ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಕೇಜ್ರಿವಾಲ್ ಅವರಿಗೆ ಒಂದು ವರ್ಷಕ್ಕೂ ಹೆಚ್ಚು ಕಾಲ ಡಿಜೆಬಿ ಅಧ್ಯಕ್ಷರಾಗಿ ಅಧಿಕಾರ ನೀಡಲಾಗಿದೆ. ಒಂದು ವರ್ಷಕ್ಕೂ ಹೆಚ್ಚಿನ ಆಡಿಟ್ ವರದಿ ಕಾಣೆಯಾಗಿದೆ. ಡಿಜೆಬಿ ಭಾರಿ ಸಾಲದಲ್ಲಿದೆ ಎಂಬುದು ವಿಚಿತ್ರ. ಎಎಪಿಯ ಎಲ್ಲ ಸಚಿವರು ದೆಹಲಿಯಲ್ಲಿ ನೀರು ಕದಿಯುತ್ತಿದ್ದಾರೆ, ಟ್ಯಾಂಕರ್ ಮಾಫಿಯಾ ಮಾಡುತ್ತಿದ್ದಾರೆ” ಎಂದು ಆರೋಪಿಸಿದರು.

ಇನ್ನು ನೀರಿನ ಪೈಪ್‌ಲೈನ್‌ಗಳನ್ನು ಕಾಪಾಡುವಂತೆ ದೆಹಲಿ ಸಚಿವೆ ಅತಿಶಿ ಪೊಲೀಸರಿಗೆ ಮನವಿ ಮಾಡಿದ್ದಾರೆ. ದೆಹಲಿ ಜಲ ಸಚಿವೆ ಅತಿಶಿ ಭಾನುವಾರ ಪೊಲೀಸ್ ಕಮಿಷನರ್ ಸಂಜಯ್ ಅರೋರಾ ಅವರಿಗೆ ಪತ್ರ ಬರೆದಿದ್ದಾರೆ. ಮುಂದಿನ 15 ದಿನಗಳವರೆಗೆ ಪ್ರಮುಖ ಪೈಪ್‌ಲೈನ್‌ಗಳಲ್ಲಿ ಗಸ್ತು ತಿರುಗುವಂತೆ, ರಕ್ಷಣಾ ಸಿಬ್ಬಂದಿಗಳನ್ನು ನಿಯೋಜಿಸುವಂತೆ ವಿನಂತಿಸಿದ್ದಾರೆ.

“ಯಮುನಾದಲ್ಲಿ ನೀರಿನ ಕೊರತೆಯಿಂದಾಗಿ, ನೀರಿನ ಉತ್ಪಾದನೆಯು ಸುಮಾರು 70 ಎಂಜಿಡಿಯಷ್ಟು ಕುಸಿದಿದೆ. ದೆಹಲಿಯ ಅನೇಕ ಭಾಗಗಳು ನೀರಿನ ಕೊರತೆಯನ್ನು ಅನುಭವಿಸುತ್ತಿವೆ. ಈ ಪರಿಸ್ಥಿತಿಯಲ್ಲಿ, ಪ್ರತಿ ಹನಿ ನೀರು ಅಮೂಲ್ಯವಾಗುತ್ತದೆ” ಎಂದು ಪತ್ರದಲ್ಲಿ ತಿಳಿಸಲಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...