ದೆಹಲಿಯ ಸಾಕೇತ್‌ ಕೋರ್ಟ್‌ನಲ್ಲಿ ಮಹಿಳೆ, ವಕೀಲರ ಮೇಲೆ ಗುಂಡಿನ ದಾಳಿ

Date:

ಅಮಾನತ್ತುಗೊಂಡಿದ್ದ ವಕೀಲನಿಂದ ಗುಂಡಿನ ದಾಳಿ

ಹಳೆಯ ವೈಷಮ್ಯದ ಹಿನ್ನೆಲೆ ದಾಳಿ ನಡೆಸಿರುವ ಶಂಕೆ

ದೆಹಲಿಯ ಸಾಕೇತ್‌ ಕೋರ್ಟ್‌ನಲ್ಲಿ ಮಹಿಳೆ ಮತ್ತು ಪ್ರಕರಣವೊಂದರಲ್ಲಿ ಆಕೆಯ ಪರ ವಾದ ಮಂಡಿಸುತ್ತಿದ್ದ ವಕೀಲರ ಮೇಲೆ ದುಷ್ಕರ್ಮಿಯೊಬ್ಬ ಗುಂಡಿನ ದಾಳಿ ನಡೆಸಿದ್ದಾನೆ. ನ್ಯಾಯಾಲಯದ ಒಳಾಂಗಣದಲ್ಲಿಯೇ ಈ ಘಟನೆ ನಡೆದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಗುಂಡಿನ ದಾಳಿಗೆ ಒಳಗಾದ ಮಹಿಳೆಯನ್ನು ದೆಹಲಿಯ ನಿವಾಸಿ ರಾಧಾ ಎಂದು ಗುರುತಿಸಲಾಗಿದೆ. ಪ್ರಕರಣವೊಂದಕ್ಕೆ ಸಂಬಂಧಿಸಿ ಶುಕ್ರವಾರ ಬೆಳಗ್ಗೆ 11 ಗಂಟೆ ಸುಮಾರಿಗೆ ರಾಧಾ ಸಾಕೇತ್‌ ಕೋರ್ಟ್‌ಗೆ ಬಂದಿದ್ದಾರೆ. ರಾಧಾ ಅವರೊಂದಿಗೆ ಹಳೆಯ ವೈಷಮ್ಯ ಹೊಂದಿದ್ದ, ಇತ್ತೀಚೆಗೆ ಸೇವೆಯಿಂದ ಅಮಾನತ್ತುಗೊಂಡಿದ್ದ ವಕೀಲನೊಬ್ಬ ಇದೇ ವೇಳೆ ಕೋರ್ಟ್‌ ಆವರಣ ಪ್ರವೇಶಿಸಿ ದಾಳಿ ನಡೆಸಿದ್ದಾನೆ ಎನ್ನಲಾಗಿದೆ.

ಆರೋಪಿ ನಾಲ್ಕು ಸುತ್ತು ಗುಂಡು ಹಾರಿಸಿದ್ದು, ರಾಧಾ ಅವರ ಹೊಟ್ಟೆಯ ಭಾಗಕ್ಕೆ ಒಂದು ಗುಂಡು ತಗುಲಿದೆ. ಅವರ ಪರ ವಾದ ಮಂಡಿಸುತ್ತಿದ್ದ ವಕೀಲರ ಕುತ್ತಿಗೆ ಭಾಗಕ್ಕೆ ಮತ್ತೊಂದು ಗುಂಡು ತಾಗಿದೆ. ದಾಳಿಯ ಬಳಿಕ ಆರೋಪಿ ಸ್ಥಳದಿಂದ ಕಾಲ್ಕಿತ್ತಿದ್ದಾನೆ. ಸ್ಥಳದಲ್ಲಿದ್ದವರು ಇಬ್ಬರೂ ಗಾಯಾಳುಗಳನ್ನು ಕೂಡಲೇ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ತೀವ್ರ ನಿಗಾ ಘಟಕದಲ್ಲಿರಿಸಿ ಚಿಕಿತ್ಸೆ ನೀಡಲಾಗುತ್ತಿದ್ದು, ಇಬ್ಬರ ಸ್ಥಿತಿಯೂ ಗಂಭೀರವಾಗಿದೆ ಎಂದು ವರದಿಯಾಗಿದೆ. ಆರೋಪಿಯ ಪತ್ತೆಗಾಗಿ ವಿಶೇಷ ತಂಡವನ್ನು ರಚಿಸಲಾಗಿದೆ ಎಂದು ದೆಹಲಿಯ ದಕ್ಷಿಣ ಭಾಗದ ಪೊಲೀಸ್‌ ಉಪ ಆಯುಕ್ತ ಚಂದನ್‌ ಚೌಧರಿ ತಿಳಿಸಿದ್ದಾರೆ.

ಗುಂಡೇಟು ತಿಂದ ರಾಧಾ ಅವರನ್ನು ಕೋರ್ಟ್‌ನಿಂದ ಆಸ್ಪತ್ರೆಗೆ ಕೊಂಡೊಯ್ಯುವ ದೃಶ್ಯ ಸ್ಥಳದಲ್ಲಿದ್ದ ಹಲವರ ಮೊಬೈಲ್‌ ಕ್ಯಾಮೆರಾಗಳಲ್ಲಿ ಸೆರೆಯಾಗಿದೆ. ಸಾಮಾಜಿಕ ಜಾಲತಾಣಗಳಲ್ಲಿ ಈ ಸಂದರ್ಭದ ವಿಡಿಯೋಗಳು ವೈರಲ್‌ ಆಗಿದ್ದು, “ದೆಹಲಿ ಜನಸಾಮಾನ್ಯರು ಬದುಕುಲು ಸುರಕ್ಷಿತ ಸ್ಥಳವೇ?” ಎಂದು ನೆಟ್ಟಿಗರು ಆತಂಕ ವ್ಯಕ್ತಪಡಿಸುತ್ತಿದ್ದಾರೆ.

ಈ ಸುದ್ದಿ ಓದಿದ್ದೀರಾ? ಅಪಹರಣ, ಹಲ್ಲೆ ಆರೋಪ : ಹನಿಸಿಂಗ್‌ ವಿರುದ್ಧ ದೂರು ದಾಖಲು

ಕೆಲ ದಿನಗಳ ಹಿಂದೆ ಇದೇ ದೆಹಲಿಯ ʼರೋಹಿಣಿ ಕೋರ್ಟ್‌ʼನಲ್ಲಿ ನಡೆದಿದ್ದ ಗುಂಡಿನ ದಾಳಿ ಮತ್ತು ಗ್ಯಾಂಗ್‌ಸ್ಟರ್‌ ಹತ್ಯೆಯನ್ನು ಉಲ್ಲೇಖಿಸಿ, ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ಕೇಂದ್ರ ಮತ್ತು ದೆಹಲಿ ಸರ್ಕಾರಗಳು ವಿಫಲವಾಗಿವೆ ಎಂದು ನೆಟ್ಟಿಗರು ಛೀಮಾರಿ ಹಾಕುತ್ತಿದ್ದಾರೆ.

f1fabf4f0e4ab96da4f5d26f3bc2b89e
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...