ಅಶ್ಲೀಲ ವಿಡಿಯೋ ಕಳಿಸಿದ ಕಾಮುಕ ಬಸ್‌ ಚಾಲಕ: ಪತ್ತೆಹಚ್ಚಿ ಕಪಾಳಕ್ಕೆ ಬಾರಿಸಿದ ಮಹಿಳೆ

Date:

ಖಾಸಗಿ ಬಸ್ ಚಾಲಕನೊಬ್ಬ ಟಿಕೆಟ್ ಬುಕಿಂಗ್ ದಾಖಲೆಯಿಂದ ಫೋನ್‌ ನಂಬರ್‌ ಕದ್ದು, ಮಹಿಳೆಗೆ ಅಶ್ಲೀಲ ವಿಡಿಯೋ ಕಳಿಸುವ ಮೂಲಕ ವಿಕೃತಿ ಮೆರೆದಿದ್ದಾನೆ ಎಂದು ಆರೋಪಿಸಲಾಗಿದೆ. ಅಶೀಲ ವಿಡಿಯೋಗಳನ್ನು ಕಳಿಸುತ್ತಿದ್ದ ಕಾಮುಕ ಚಾಲಕನನ್ನು ಪತ್ತೆಹಚ್ಚಿದ ಮಹಿಳೆ ಆತನಿಗೆ ಸಾರ್ವಜನಿಕವಾಗಿ ಕಪಾಳಕ್ಕೆ ಬಾರಿಸಿದ್ದಾರೆ. ಘಟನೆ ಮಹಾರಾಷ್ಟ್ರದ ಸಿಂಧುದುರ್ಗ ಜಿಲ್ಲೆಯಲ್ಲಿ ನಡೆದಿದೆ.

ಕಂಕವ್ಲಿ ಮತ್ತು ಮುಂಬೈ ನಡುವೆ ಆಗ್ಗಾಗ್ಗೆ ಪ್ರಯಾಣಿಸುತ್ತಿದ್ದ ಮಹಿಳೆ, ತಮ್ಮ ಬಸ್‌ ಬುಕಿಂಗ್‌ಗಾಗಿ ಕಂಕವ್ಲಿಯಲ್ಲಿರುವ ಖಾಸಗಿ ಟ್ರಾವೆಲ್ಸ್‌ ಕಂಪನಿಯ ಕಚೇರಿಯನ್ನು ಸಂಪರ್ಕಿಸುತ್ತಿದ್ದರು. ಕೆಲವು ತಿಂಗಳ ಹಿಂದೆ, ಅದೇ ಕಂಪನಿಯಿಂದ ತಮ್ಮ ಬಸ್‌ ಟಿಕೆಟ್‌ ಬುಕ್‌ ಮಾಡಿಕೊಂಡಿದ್ದರು.

ಆ ನಂತರ, ಆಕೆಯ ಮೊಬೈಲ್‌ಗೆ ಫೋನ್‌ ನಂಬರ್‌ವೊಂದರಿಂದ ಅಶ್ಲೀಲ ವಿಡಿಯೋಗಳು ಬರಲಾರಂಭಿಸಿದ್ದವು. ಖಾಸಗಿ ಬಸ್‌ನ ಚಾಲಕ ಟಿಕೆಟ್‌ ಬುಕಿಂಗ್ ದಾಖಲೆಯಿಂದ ಆಕೆಯ ದೂರವಾಣಿ ಸಂಖ್ಯೆಯನ್ನು ಕದ್ದು, ಆಕೆಗೆ ಲೈಂಗಿಕ ಕಿರುಕುಳ ನೀಡಲಾರಂಭಿಸಿದ್ದ ಎಂದು ವರದಿಯಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ನಿರಂತರವಾಗಿ, ಅಶ್ಲೀಲ ವಿಡಿಯೋಗಳನ್ನು ಕಳಿಸುತ್ತಿದ್ದ ಆತನನ್ನು ಪತ್ತೆ ಹೆಚ್ಚಲು ಮುಂದಾದ ಮಹಿಳೆ, ಕಂಕವ್ಲಿ ಬಸ್ ನಿಲ್ದಾಣದ ಬಳಿಯಿರುವ ಕಂಪನಿಯ ಬುಕಿಂಗ್ ಕಚೇರಿಗೆ ತೆರಳಿದ್ದು, ಆರೋಪಿ ಚಾಲಕನನ್ನು ಪತ್ತೆ ಹಚ್ಚಿದ್ದಾರೆ. ಸಾರ್ವಜನಿಕವಾಗಿ ಆತನ ಕಪಾಳಕ್ಕೆ ಹಲವು ಬಾರಿ ಬಾರಿಸಿದ್ದಾರೆ.

ಈ ಘಟನೆಯ ವೀಡಿಯೊದಲ್ಲಿ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಆದಾಗ್ಯೂ, ಪೊಲೀಸ್ ಠಾಣೆಯಲ್ಲಿ ಅಧಿಕೃತವಾಗಿ ಈವರೆಗೆ ದೂರು ದಾಖಲಾಗಿಲ್ಲ ಎಂದು ವರದಿಯಾಗಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...