ಮಹಾರಾಷ್ಟ್ರ | ನಕಲಿ ಪಾಸ್‌ಪೋರ್ಟ್‌ ಬಳಸಿ ಪಾಕಿಸ್ತಾನಕ್ಕೆ ಪ್ರಯಾಣ; ಮಹಿಳೆ ವಿರುದ್ಧ ಪ್ರಕರಣ ದಾಖಲು

Date:

ಮಹಾರಾಷ್ಟ್ರದಲ್ಲಿ 23 ವರ್ಷದ ಮಹಿಳೆಯೋರ್ವಳು ನಕಲಿ ಪಾಸ್‌ಪೋರ್ಟ್ ಮತ್ತು ವೀಸಾದೊಂದಿಗೆ ಪಾಕಿಸ್ತಾನಕ್ಕೆ ಪ್ರಯಾಣ ಬೆಳೆಸಿದ ಆರೋಪವನ್ನು ಎದುರಿಸುತ್ತಿದ್ದು, ಯುವತಿ ವಿರುದ್ಧ ಪ್ರಕರಣ ದಾಖಲಾಗಿದೆ.

ಥಾಣೆ ಮೂಲದ ನಗ್ಮಾ ನೂರ್ ಮಕ್ಸೂದ್ ಅಲಿ ಅಲಿಯಾಸ್ ಸನಮ್ ಖಾನ್ ಎಂದು ಗುರುತಿಸಲಾದ ಯುವತಿ ತನ್ನ ಹೆಸರನ್ನು ಬದಲಾಯಿಸಿಕೊಂಡು ಆಧಾರ್ ಕಾರ್ಡ್, ಪ್ಯಾನ್ ಕಾರ್ಡ್ ಮತ್ತು ತನ್ನ ಮಗಳ ಜನನ ಪ್ರಮಾಣಪತ್ರವನ್ನು ಥಾಣೆಯ ಲೋಕಮಾನ್ಯ ನಗರದಿಂದ ಪಡೆದಿದ್ದಾಳೆ ಎಂದು ಸುದ್ದಿ ಸಂಸ್ಥೆ ಪಿಟಿಐ ವರದಿ ಮಾಡಿದೆ.

ಪಾಸ್‌ಪೋರ್ಟ್ ಅರ್ಜಿಯೊಂದಿಗೆ ಈ ನಕಲಿ ದಾಖಲೆಗಳನ್ನು ಸಲ್ಲಿಸಿದ್ದು ದಾಖಲೆಗಳ ಆಧಾರದ ಮೇಲೆ ಆಕೆ ನಕಲಿ ಪಾಸ್‌ಪೋರ್ಟ್ ಪಡೆದಿದ್ದಾಳೆ. ಈ ಪಾಸ್‌ಪೋರ್ಟ್ ಬಳಸಿಕೊಂಡು ಪಾಕಿಸ್ತಾನಕ್ಕೆ ಪ್ರಯಾಣಿಸಿದ್ದಾಳೆ ಎಂದು ಪೊಲೀಸರು ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನು ಓದಿದ್ದೀರಾ?   ನದಿಗೆ ಹಾರಿದ್ದ ಜಮ್ಮು ಯುವಕನ ಮೃತದೇಹ ಪಾಕಿಸ್ತಾನದಲ್ಲಿ ಪತ್ತೆ

ಮಹಿಳೆ ನಕಲಿ ದಾಖಲೆ ಬಳಸಿಕೊಂಡು ಪಾಕಿಸ್ತಾನಕ್ಕೆ ಪ್ರಯಾಣಿಸಿದ ಘಟನೆ 2023ರ ಮೇ ತಿಂಗಳಿನಿಂದ ಈ ವರ್ಷದ ಮೇ ನಡುವೆ ನಡೆದಿದೆ. ಆದರೆ ಇದೀಗ ಮಹಿಳೆ ವಿರುದ್ಧ ಪ್ರಕರಣ ದಾಖಲಾಗಿದೆ.

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಅಪರಿಚಿತ ವ್ಯಕ್ತಿಯ ವಿರುದ್ಧವೂ ಪ್ರಕರಣ ದಾಖಲಿಸಿದ್ದಾರೆ. ಇಬ್ಬರ ವಿರುದ್ದವೂ ಭಾರತೀಯ ಪಾಸ್‌ಪೋರ್ಟ್ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದ್ದು, ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

?s=150&d=mp&r=g
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...