ಅತ್ಯಾಚಾರಗೈದು ಮಹಿಳೆಯನ್ನು ಎಸೆದು ಹೋದ ವಿಕೃತ ಕಾಮುಕರು

Date:

ವಿಕೃತ ಕಾಮುಕರು 34 ವರ್ಷದ ಮಹಿಳೆಯ ಮೇಲೆ ಅತ್ಯಾಚಾರವೆಸಗಿ, ಆಕೆಯನ್ನು ರಸ್ತೆ ಬದಿಯಲ್ಲಿ ಎಸೆದು ಹೋಗಿರುವ ಅಮಾನುಷ ಘಟನೆ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ನಡೆದಿದೆ. ಅರೆಪ್ರಜ್ಞಾವಸ್ಥೆಯಲ್ಲಿದ್ದ ಸಂತ್ರಸ್ತೆಯನ್ನು ದಾರಿಹೋಕರು ಗಮನಿಸಿ, ಪೊಲೀಸರಿಗೆ ಮಾಹಿತಿ ನೀಡಿದ್ದು, ಮಹಿಳೆಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಸಂತ್ರಸ್ತೆಯನ್ನು ಕಾಮುಕರು ಸರಾಯ್ ಕಾಲೇ ಖಾನ್ ಪ್ರದೇಶದಲ್ಲಿ ಎಸೆದು ಹೋಗಿದ್ದರು. ಮುಂಜಾನೆ 3.30ರ ಸುಮಾರಿಗೆ ಘಟನೆ ಕುರಿತು ಪೊಲೀಸರಿಗೆ ಮಾಹಿತಿ ಲಭ್ಯವಾಗಿದ್ದು, ತಕ್ಷಣವೇ ಪೊಲೀಸರ ತಂಡವೊಂದು ಘಟನಾ ಸ್ಥಳಕ್ಕೆ ಧಾವಿಸಿದ್ದು, ಸಂತ್ರಸ್ತೆಯನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಿದೆ ಎಂದು ಪೊಲೀಸ್ ಅಧಿಕಾರಿ ವಿವರಿಸಿದ್ದಾರೆ.

ಪ್ರಾಥಮಿಕ ತನಿಖೆ ಪ್ರಕಾರ, ಮಹಿಳೆಯನ್ನು ಅಪಹರಿಸಿ, ಆಕೆಯ ಮೇಲೆ ಬೇರೊಂದು ಸ್ಥಳದಲ್ಲಿ ಅತ್ಯಾಚಾರ ಎಸಗಲಾಗಿದೆ. ಬಳಿಕ, ಆಕೆಯನ್ನು ಸರಾಯ್ ಕಾಲೇ ಖಾನ್ ಪ್ರದೇಶದಲ್ಲಿ ಆರೋಪಿಗಳು ಎಸೆದುಹೋಗಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಅತ್ಯಾಚಾರಕ್ಕೆ ಒಳಗಾದ ಮಹಿಳೆ ಒಡಿಶಾ ನಿವಾಸಿಯಾಗಿದ್ದು, ಒಂದು ವರ್ಷದ ಹಿಂದೆ ದೆಹಲಿಗೆ ಬಂದು ನೆಲೆಸಿದ್ದರು. “ಸಂತ್ರಸ್ತ ಮಹಿಳೆ ದೆಹಲಿಯ ಕಟ್ವಾರಿಯಾ ಸರಾಯ್‌ನಲ್ಲಿ ಮತ್ತೊಬ್ಬ ಮಹಿಳೆಯೊಂದಿಗೆ ವಾಸುಸುತ್ತಿದ್ದರು. ಆದರೆ, ಕೆಲ ದಿನಗಳ ಹಿಂದೆ ಸಹನಿವಾಸಿ ಆಕೆಯನ್ನು ಮನೆಯಿಂದ ಹೊರಹಾಕಿದ್ದರು. ಪರಿಣಾಮ, ಕಳೆದ ಆಗಸ್ಟ್‌ನಿಂದ ಸಂತ್ರಸ್ತೆ ಬೀದಿಗಳಲ್ಲಿ ವಾಸಿಸುತ್ತಿದ್ದರು” ಎಂದು ಪೊಲೀಸರು ತಿಳಿಸಿದ್ದಾರೆ.

“ನಾವು ಘಟನೆಯ ಬಗ್ಗೆ ಸಂತ್ರಸ್ತೆಯ ಪೋಷಕರಿಗೆ ತಿಳಿಸಿದ್ದೇವೆ ಮತ್ತು ಪ್ರಸ್ತುತ ಅವರನ್ನು ನಿಗಾದಲ್ಲಿ ಇರಿಸಲಾಗಿದೆ” ಎಂದು ಅವರು ಹೇಳಿದ್ದಾರೆ.

ಆರೋಪಿಗಳ ಪತ್ತೆಗೆ ಪ್ರಯತ್ನ ಮುಂದುವರಿದಿದ್ದು, ಅದಕ್ಕಾಗಿ ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಸಿಸಿಟಿವಿ ದೃಶ್ಯಾವಳಿ ಮತ್ತು ಇತರ ತಾಂತ್ರಿಕ ಕಣ್ಗಾವಲು ಆಧರಿಸಿ ಆರೋಪಿಗಳನ್ನು ಗುರುತಿಸುವ ಪ್ರಯತ್ನಗಳು ನಡೆಯುತ್ತಿವೆ ಎಂದು ಪೊಲೀಸರು ತಿಳಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...