ಶಬರಿಮಲೆಗೆ ಮಹಿಳೆಯರ ಪ್ರವೇಶ: ಸುಪ್ರೀಂಗೆ ಹೊಸ ಪ್ರಮಾಣಪತ್ರ ಸಲ್ಲಿಸುವ ಅಗತ್ಯವಿಲ್ಲ: ಟಿಡಿಬಿ

Date:

ಶಬರಿಮಲೆ ಅಯ್ಯಪ್ಪ ದೇವಸ್ಥಾನಕ್ಕೆ ಎಲ್ಲ ವಯಸ್ಸಿನ ಮಹಿಳೆಯರಿಗೂ ಪ್ರವೇಶ ನೀಡುವ ವಿಚಾರ ಹಲವು ವರ್ಷಗಳಿಂದ ಚರ್ಚೆಯಲ್ಲಿದೆ. ಆದಾಗ್ಯೂ, ಈವರೆಗೆ ಮಹಿಳೆಯರಿಗೆ ದೇವಾಲಯ ಪ್ರವೇಶ ದೊರೆತಿಲ್ಲ. ಈ ನಡುವೆ, ಮಹಿಳೆಯರ ಪ್ರವೇಶದ ಬಗ್ಗೆ ತಿರುವಾಂಕೂರು ದೇವಸ್ವಂ ಮಂಡಳಿಯು (ಟಿಡಿಬಿ) ಅಧ್ಯಕ್ಷ ಪಿ.ಎಸ್. ಪ್ರಶಾಂತ್ ಮಾತನಾಡಿದ್ದು, “ಎಲ್ಲ ವಯಸ್ಸಿನ ಮಹಿಳೆಯರಿಗೆ ದೇವಾಲಯಕ್ಕೆ ಪ್ರವೇಶ ಮತ್ತು ದೇವಸ್ಥಾನದ ಪಾವಿತ್ರ್ಯತೆ ಕುರಿತು ಸುಪ್ರೀಂ ಕೋರ್ಟ್‌ಗೆ ಹೊಸ ಪ್ರಮಾಣಪತ್ರ ಸಲ್ಲಿಸುವ ಅಗತ್ಯವಿಲ್ಲ” ಎಂದು ಹೇಳಿದ್ದಾರೆ. ಮಹಿಳೆಯರಿಗೆ ಪ್ರವೇಶ ನಿರ್ಬಂಧಿಸುವ ಟಿಡಿಬಿಯ ನಿಲುವನ್ನು ಮತ್ತೆ ಸಮರ್ಥಿಸಿಕೊಂಡಿದ್ದಾರೆ.

ಎಲ್ಲ ವಯಸ್ಸಿನ ಮಹಿಳೆಯರಿಗೂ ಅಯ್ಯಪ್ಪ ದೇವಾಲಯಕ್ಕೆ ಪ್ರವೇಶ ನೀಡಬೇಕೆಂದು 2016ರಲ್ಲಿ ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಲಾಗಿತ್ತು. 2018ರಲ್ಲಿ ಅರ್ಜಿ ಆಲಿಸಿದ್ದ ನ್ಯಾಯಾಲಯವು, ‘ಮಹಿಳೆಯರಿಗೆ ಪ್ರವೇಶ ನಿರ್ಬಂಧಿಸುವುದು ಅಸಾಂವಿಧಾನಿಕ’ ಎಂದು ಹೇಳಿತ್ತು. ಬಳಿಕ, ಸಿಪಿಐಎಂ ನೇತೃತ್ವದ ಎಲ್‌ಡಿಎಫ್‌ ಸರ್ಕಾರವು ಇಬ್ಬರು ಮಹಿಳೆಯರಿಗೆ ದೇವಾಲಯ ಪ್ರವೇಶಕ್ಕೆ ಅವಕಾಶ ಮಾಡಿತ್ತು. ಆ ಘಟನೆಯ ಬಳಿಕ, ಕೇರಳದಲ್ಲಿ ಭಾರೀ ಪ್ರತಿಭಟನೆಗಳು-ಗಲಭೆಗಳು ನಡೆದಿದ್ದವು. ಅದೇ ಸಮಯದಲ್ಲಿ, ಮಹಿಳೆಯರಿಗೆ ಪ್ರವೇಶ ನಿರ್ಬಂಧವನ್ನು ಸಮರ್ಥಿಸಿಕೊಂಡು ಕೋರ್ಟ್‌ಗೆ ಟಿಡಿಬಿ ಪ್ರಮಾಣಪತ್ರ ಸಲ್ಲಿಸಿತ್ತು.

ಅಂದಿನಿಂದಲೂ ಸುಪ್ರೀಂ ಕೋರ್ಟ್‌ನಲ್ಲಿ ಪ್ರಕರಣ ವಿಚಾರಣೆಯಲ್ಲಿದೆ. ಈ ನಡುವೆ, ಟಿಡಿಬಿ ತನ್ನ ವಾದ ಮತ್ತು ನಿಲುವನ್ನು ಸಮರ್ಥಿಸಿಕೊಂಡು ಹೊಸ ಪ್ರಮಾಣಪತ್ರ ಸಲ್ಲಿಸಿದೆ ಎನ್ನಲಾಗಿತ್ತು. ಆದರೆ, ಯಾವುದೇ ಹೊಸ ಪ್ರಮಾಣಪತ್ರ ಸಲ್ಲಿಸಲಾಗಿಲ್ಲ ಎಂದು ಪ್ರಶಾಂತ್ ಹೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಅಯ್ಯಪ್ಪ ದೇವಾಲಯಕ್ಕೆ ಮುಟ್ಟಿನ ವಯಸ್ಸಿನ ಮಹಿಳೆಯರಿಗೆ ಪ್ರವೇಶ ನೀಡುವ ವಿಚಾರದಲ್ಲಿ ಹೊಸ ನಿರ್ಧಾರಗಳಿಲ್ಲ. ಯಾವುದೇ ಬದಲಾವಣೆಗಳಿಲ್ಲದೆ ದೇವಾಲಯದಲ್ಲಿ ಎಲ್ಲ ರೀತಿಯ ಆಚರಣೆ ಮತ್ತು ಪದ್ದತಿಗಳನ್ನು ಅನುಸರಿಸಲಾಗುತ್ತಿದೆ. ಮಹಿಳೆಯರಿಗೆ ಪ್ರವೇಶದ ವಿಚಾರದಲ್ಲಿ ಟಿಡಿಬಿ ತನ್ನ ನಿಲುವು-ಪದ್ದತಿಗೆ ಬದ್ಧವಾಗಿದೆ” ಎಂದು ಹೇಳಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...