ವರದಕ್ಷಿಣೆ ತರುವಂತೆ ಸೊಸೆಯನ್ನು ಮನೆಯಿಂದ ಹೊರಹಾಕಿದ ಗಂಡನ ಮನೆಯವರು: ವೀಡಿಯೋ ವೈರಲ್

Date:

ಉತ್ತರ ಪ್ರದೇಶದ ಜಲಾಲ್‌ಪುರದಲ್ಲಿ ವರದಕ್ಷಿಣೆ ತರುವಂತೆ ಕಿರುಕುಳ ನೀಡಿ ಮಹಿಳೆಯೊಬ್ಬರನ್ನು ಬಲವಂತವಾಗಿ ಪತಿ ಮನೆಯಿಂದ ಹೊರಹಾಕುವ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ಮಹಿಳೆಯನ್ನು ರಂಜನಾ ಯಾದವ್ ಎಂದು ಗುರುತಿಸಲಾಗಿದೆ. ರಂಜನಾಗೆ ಕಳೆದ ಮಾರ್ಚ್‌ನಲ್ಲಿ ಅಂಬೇಡ್ಕರ್ ನಗರದ ನಿವಾಸಿ ರಮೇಶ್ ಕುಮಾರ್ ಯಾದವ್ ಜೊತೆ ವಿವಾಹವಾಗಿತ್ತು. ವರದಿಗಳ ಪ್ರಕಾರ, ವಿವಾಹದ ನಂತರ ಪತಿಯ ಮನೆಗೆ ತೆರಳುವಾಗ ರಂಜನಾ ವರದಕ್ಷಿಣೆಯಾಗಿ ಚಿನ್ನಾಭರಣ, ಫ್ರಿಜ್, ಕೂಲರ್, ಬೆಡ್ ಕೊಂಡೊಯ್ದಿದ್ದರು. ಆದರೆ, ಆಕೆಯ ಪತಿ ಮತ್ತು ಕುಟುಂಬಸ್ಥರು ಹೆಚ್ಚಿನ ವರದಕ್ಷಿಣೆ ತರುವಂತೆ ಪೀಡಿಸಿದರು. ಆಕೆಯ ಬಳಿಯಿದ್ದ ಚಿನ್ನಾಭರಣವನ್ನು ಕಸಿದುಕೊಂಡರು.

ಕೊನೆಗೆ 5 ಲಕ್ಷ ರೂ.ತರುವಂತೆ ಕಿರುಕುಳ ನೀಡಿ ಮನೆಯಿಂದ ಹೊರಹಾಕಿದರು. ಈ ಕುರಿತ ವೀಡಿಯೊ ಕೂಡ ಚಿತ್ರೀಕರಿಸಿ ವೈರಲ್ ಮಾಡಲಾಯಿತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಮುಸ್ಲಿಮರಿಗೆ ಗುತ್ತಿಗೆಯಲ್ಲಿ ಮೀಸಲಾತಿ; ಬಿಜೆಪಿ ವಿರೋಧವೇ ಅಸಾಂವಿಧಾನಿಕ

ವೈರಲ್ ವೀಡಿಯೊದಲ್ಲಿ ಪತಿ ಮನೆಯ ಬಾಗಿಲ ಬಳಿ ನಿಂತುಕೊಂಡಿದ್ದ ರಂಜನಾ ಅವರನ್ನು ಬಲವಂತವಾಗಿ ಹೊರ ಹಾಕುವುದು ಸೆರೆಯಾಗಿದೆ. ಪತಿ ರಮೇಶ್ ಕುಮಾರ್ ಮತ್ತು ಕುಟುಂಬಸ್ಥರಾದ ಶ್ರೀನಾಥ್ ಮತ್ತು ರಕ್ಷಾರಾಮ್ ವರದಕ್ಷಿಣೆ ತರುವಂತೆ ನಿರಂತರವಾಗಿ ಕಿರುಕುಳ ನೀಡಿದರು ಎಂದು ರಂಜನಾ ಆರೋಪಿಸಿದ್ದಾರೆ.

ಈ ಕುರಿತು ಜಲಾಲ್‌ಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಈ ಬಗ್ಗೆ ಹೆಚ್ಚಿನ ತನಿಖೆಯನ್ನು ನಡೆಸಿ ಮುಂದಿನ ಕ್ರಮವನ್ನು ಕೈಗೊಳ್ಳುವುದಾಗಿ ಎಸ್ಎಚ್ಒ ಜೈ ಪ್ರಕಾಶ್ ಮಾಧ್ಯಮಗಳಿಗೆ ತಿಳಿಸಿದರು.

https://twitter.com/bstvlive/status/1901524826705322332
https://kn.wikipedia.org/wiki/%E0%B2%89%E0%B2%A4%E0%B3%8D%E0%B2%A4%E0%B2%B0_%E0%B2%AA%E0%B3%8D%E0%B2%B0%E0%B2%A6%E0%B3%87%E0%B2%B6
WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...