ಮಹಿಳಾ ಪೊಲೀಸ್‌ ಜೊತೆ ಡಿಎಸ್‌ಪಿ ದುಂಡಾವರ್ತನೆ; ನೆಟ್ಟಿಗರ ಆಕ್ರೋಶ

Date:

ಮಹಿಳಾ ಪೊಲೀಸ್‌ ಅಧಿಕಾರಿಯೊಂದಿಗೆ ಜಿಲ್ಲಾ ಉಪ ಪೊಲೀಸ್‌ ವರಿಷ್ಠಾಧಿಕಾರಿ (ಡಿಎಸ್‌ಪಿ) ಅನುಚಿತವಾಗಿ ವರ್ತಿಸಿರುವ ಘಟನೆ ರಾಜಸ್ಥಾನದ ಚುರು ಜಿಲ್ಲೆಯಲ್ಲಿ ನಡೆದಿದೆ. ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಡಿಎಸ್‌ಪಿ ವಿರುದ್ಧ ನೆಟ್ಟಿಗರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಚುರು ನಗರದಲ್ಲಿ ಜಿಲ್ಲಾ ಕಾಂಗ್ರೆಸ್‌ ಸಮಿತಿ ನಡೆಸಿದ ಪ್ರತಿಭಟನೆ ವೇಳೆ, ಮಹಿಳಾ ಅಧಿಕಾರಿ ಮೇಲೆ ಡಿಎಸ್‌ಪಿ ಸುನಿಲ್ ಜಜಾರಿಯಾ ಅವರು ದುಂಡಾವರ್ತನೆ ಪ್ರದರ್ಶಿಸಿದ್ದಾರೆ.

ಚುರು ಸಂಸದ ರಾಹುಲ್ ಕಸ್ವಾನ್ ನೇತೃತ್ವದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ರಾಜ್ಯ ಬಿಜೆಪಿ ಸರ್ಕಾರದ ನೀತಿಗಳ ವಿರುದ್ಧ ಪ್ರತಿಭಟನೆ ನಡೆಸಿದ್ದಾರೆ. ಪ್ರತಿಭಟನಾಕಾರರು ಜಿಲ್ಲಾಧಿಕಾರಿ ಕಚೇರಿ ಪ್ರವೇಶಿಸದಂತೆ ತಡೆಯುವ ಸಮಯದಲ್ಲಿ ಘಟನೆ ನಡೆದಿದೆ. ಡಿಎಸ್‌ಪಿ ಜಜಾರಿಯಾ ಅವರು ಪೊಲೀಸರಿಗೆ ಸೂಚನೆ ನೀಡಿದ್ದಾರೆ. ಇದೇ ವೇಳೆ, ಮಹಿಳಾ ಪೊಲೀಸ್ ಅಧಿಕಾರಿಯ ಬೆನ್ನಿಗೆ ಹೊಡೆದಿದ್ದಾರೆ ಎಂದು ಆರೋಪಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ವೈರಲ್ ಆಗಿರುವ ವಿಡಿಯೋದಲ್ಲಿ; ಮುಂದೆ ಸಾಗುತ್ತದ್ದ ಮಹಿಳಾ ಪೊಲೀಸ್‌ ಅಧಿಕಾರಿಯ ಬೆನ್ನಿಗೆ ಹಿಂದಿನಿಂದ ಡಿಎಸ್‌ಪಿ ಸುನಿಲ್ ಜಜಾರಿಯಾ ಅವರು ಹೊಡೆಯುತ್ತಿರುವುದು ಮತ್ತು ನಿಂದಿಸುತ್ತಿರುವುದು ಕಂಡುಬಂದಿದೆ.

ಆದರೆ, ತಾವು ಮಹಿಳಾ ಪೊಲೀಸ್‌ ಅಧಿಕಾರಿಗೆ ಹೊಡೆದಿಲ್ಲವೆಂದು ಡಿಎಸ್‌ಪಿ ಜಜಾರಿಯಾ ಹೇಳಿಕೊಂಡಿದ್ದಾರೆ. ಮಾತ್ರವಲ್ಲದೆ, ವಿಡಿಯೋವನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡ ಪತ್ರಕರ್ತೆಯ ವಿರುದ್ಧ ವಿಡಿಯೋದಲ್ಲಿ ಹಲ್ಲೆಗೊಳಗಾದ ಮಹಿಳಾ ಪೊಲೀಸ್‌ ಅಧಿಕಾರಿಯೇ ಪ್ರಕರಣ ದಾಖಲಿಸಿದ್ದಾರೆ.

“ಡಿಎಸ್‌ಪಿ ಸರ್ ನನಗೆ ಅವರಿಗೆ ಹೊಡೆದಿಲ್ಲ. ಅವರು ಹಿಂದಿನಿಂದ ನನ್ನನ್ನು ಕರೆದರು ಅಷ್ಟೇ. ವೀಡಿಯೊವನ್ನು ವೈರಲ್ ಆಗಿದ್ದರಿಂದ ನನ್ನ ಪ್ರತಿಷ್ಠೆಗೆ ಧಕ್ಕೆಯಾಗಿದೆ. ಡಿಎಸ್‌ಪಿ ನನ್ನೊಂದಿಗೆ ಕೆಟ್ಟದಾಗಿ ವರ್ತಿಸಿಲ್ಲ” ಎಂದು ಮಹಿಳಾ ಅಧಿಕಾರಿ ಹೇಳಿದ್ದಾರೆ.

ಆದಾಗ್ಯೂ, ಘಟನೆ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಭಾರೀ ಆಕ್ರೋಶ ವ್ಯಕ್ತವಾಗಿದೆ. ಘಟನೆಯನ್ನು ಕಾಂಗ್ರೆಸ್‌ ಕಾರ್ಯಕರ್ತರು ಮತ್ತು ನೆಟ್ಟಿಗರು ತೀವ್ರವಾಗಿ ಖಂಡಿಸಿದ್ದಾರೆ. ಡಿಎಎಸ್‌ಪಿ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದ್ದಾರೆ. ಘಟನೆಯನ್ನು ‘ಸಮವಸ್ತ್ರದ ದುರುಪಯೋಗ’ ಎಂದು ಕಾಂಗ್ರೆಸ್‌ ಕರೆದಿದೆ.

“ಮಹಿಳೆಯರ ಗೌರವ ಮತ್ತು ಘಟನೆಯ ವಿಚಾರದಲ್ಲಿ ಬಿಜೆಪಿ ಬರೀ ಮಾತಿಗಷ್ಟೇ ಸೀಮಿತವಾಗಿದೆ. ಬಿಜೆಪಿ ಸರ್ಕಾರದಲ್ಲಿ, ಪೊಲೀಸ್ ಅಧಿಕಾರಿಗಳೇ ಗೂಂಡಾಗಿರಿ ಮಾಡಿದ್ದಾರೆ. ಇದು ಮಹಿಳೆಯರಿಗೆ ಮಾಡಿದ ಅವಮಾನ. ಡಿಎಸ್‌ಪಿ ಸುನಿಲ್ ಜಜಾರಿಯಾ ವಿರುದ್ಧ ತಕ್ಷಣ ಕ್ರಮ ಕೈಗೊಳ್ಳಬೇಕು” ಎಂದು ಕಾಂಗ್ರೆಸ್‌ ಆಗ್ರಹಿಸಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...