ಮಹಿಳಾ ಮೀಸಲಾತಿ ಮಸೂದೆ; ತ್ವರಿತ ಅನುಷ್ಠಾನಕ್ಕೆ ವಿಪಕ್ಷಗಳ ಅಭಿಪ್ರಾಯ ಕೇಳಿದ ಕೇಂದ್ರ: ಮೂಲಗಳು

Date:

ಲೋಕಸಭೆ ಮತ್ತು ರಾಜ್ಯ ವಿಧಾನಸಭೆಗಳಲ್ಲಿ ಮಹಿಳೆಯರಿಗೆ 33% ಮೀಸಲಾತಿ ನೀಡುವ ಮಸೂದೆಯ ಅನುಷ್ಠಾನವನ್ನು ವೇಗಗೊಳಿಸಲು ಕೇಂದ್ರ ಸರ್ಕಾರ ಮುಂದಾಗಿದೆ. ಈ ತಿದ್ದುಪಡಿ ಮಸೂದೆಯ ಕುರಿತು ವಿಪಕ್ಷಗಳಿಂದ ಸರ್ಕಾರವು ಅಭಿಪ್ರಾಯ ಕೇಳುತ್ತಿದೆ ಎಂದು ಮೂಲಗಳನ್ನು ಉಲ್ಲೇಖಿಸಿ ‘ದಿ ನ್ಯೂ ಇಂಡಿಯನ್ ಎಕ್ಸ್‌ಪ್ರೆಸ್‌’ ವರದಿ ಮಾಡಿದೆ.

ಸಂವಿಧಾನಕ್ಕೆ 106ನೇ ತಿದ್ದುಪಡಿಯೊಂದಿಗೆ 2023ರ ಸೆಪ್ಟೆಂಬರ್‌ನಲ್ಲಿ ‘ನಾರಿ ಶಕ್ತಿ ವಂದನ್ ಅಧಿನಿಯಮ್-2023’ಅನ್ನು ಸಂಸತ್ತಿನ ವಿಶೇಷ ಅಧಿವೇಶನದಲ್ಲಿ ಅಂಗೀಕರಿಸಲಾಗಿತ್ತು. ಈ ಹೊಸ ಕಾಯ್ದೆಯನ್ನು 2027ರ ಜನಗಣತಿ ಮತ್ತು ಕ್ಷೇತ್ರ ಮರುವಿಂಗಡಣೆ ಆಧಾರದ ಮೇಲೆ 2029ರ ಲೋಕಸಭಾ ಚುನಾವಣೆ ವೇಳೆಗೆ ಅನುಷ್ಠಾನಕ್ಕೆ ತರುವುದಾಗಿ ಸರ್ಕಾರ ಹೇಳಿಕೊಂಡಿತ್ತು. ಆದರೆ, ಮೀಸಲಾತಿಯ ಅನುಷ್ಠಾನವು ಜನಗಣತಿ ಮತ್ತು ಕ್ಷೇತ್ರ ಪುನರ್ವಿಂಗಡಣೆ ಪ್ರಕ್ರಿಯೆಯ ಪೂರ್ಣಗೊಳಿಸುವಿಕೆಯ ಮೇಲೆ ಅವಲಂಬಿತವಾಗಿದೆ, ಇದು ಮೀಸಲಾತಿಯ ನಿಜವಾದ ಅನುಷ್ಠಾನವನ್ನು ವಿಳಂಬಗೊಳಿಸುತ್ತದೆ ಎಂದು ವಾದಿಸಿದ್ದವು.

ಮೂಲಗಳ ಪ್ರಕಾರ, ಮಹಿಳಾ ಮೀಸಲಾತಿಯನ್ನು ಈ ಹಿಂದೆ ಯೋಜಿಸಿದ್ದಕ್ಕಿಂತ ಬೇಗ ಜಾರಿಗೆ ತರಲು ಕಾಯ್ದೆಗಳಿಗೆ ತಿದ್ದುಪಡಿಗಳನ್ನು ಮಾಡಬಹುದೇ ಎಂದು ಚರ್ಚಿಸಲು ಕೇಂದ್ರ ಸರ್ಕಾರವು ಅನೌಪಚಾರಿಕವಾಗಿ ವಿರೋಧ ಪಕ್ಷದ ನಾಯಕರನ್ನು ಸಂಪರ್ಕಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕಾನೂನಿನ ಪ್ರಕಾರ, ಲೋಕಸಭೆ ಮತ್ತು ವಿಧಾನಸಭೆಗಳಲ್ಲಿ ಮಹಿಳೆಯರಿಗೆ ಮುಂದೆ ನೀಡಲಾಗುವ 33% ಮೀಸಲಾತಿಯು 15 ವರ್ಷಗಳವರೆಗೆ ಜಾರಿಯಲ್ಲಿರುತ್ತದೆ. ನಂತರ, ಈ ಕಾಯ್ದೆಯನ್ನು ವಿಸ್ತರಿಸಬೇಕೆ ಎಂಬುದನ್ನು ಸಂಸತ್ತು ನಿರ್ಧರಿಸಬಹುದು.

ಈ ಲೇಖನ ಓದಿದ್ದೀರಾ?: ʼಕಾಂಕ್ರೀಟ್‌ʼ ಮಾಡುವ ಗಾಯಕ್ಕೆ ಜಪಾನಿ ʼಮಿಯಾವಾಕಿʼಯೇ ಮದ್ದು!

“ಮಹಿಳಾ ಕೋಟಾವನ್ನು ಕ್ಷೇತ್ರ ಪುನರ್ವಿಂಗಡಣೆಗೆ ಏಕೆ ತಳುಕು ಹಾಕಬೇಕು? ಮಹಿಳಾ ಮೀಸಲಾತಿಯನ್ನು ಕ್ಷೇತ್ರ ಪುನರ್ವಿಂಗಡಣೆ ಮತ್ತು ಜನಗಣತಿಯ ಮೇಲೆ ಅವಲಂಬಿತಗೊಳಿಸಿರುವುದರಿಂದ ಅದು ಸ್ಥಗಿತಗೊಳ್ಳುತ್ತದೆ ಮತ್ತು ವಿಳಂಬವಾಗುತ್ತದೆ. ಕಾನೂನನ್ನು ತಿದ್ದುಪಡಿ ಮಾಡುವ ಮೂಲಕ ಸರ್ಕಾರವು ಮಹಿಳಾ ಮೀಸಲಾತಿ ನಿಬಂಧನೆಯನ್ನು ಕ್ಷೇತ್ರ ಪುನರ್ವಿಂಗಡಣೆಯ ಅವಶ್ಯಕತೆಯಿಂದ ಬೇರ್ಪಡಿಸಬಹುದು. ಈ ನಿಟ್ಟಿನಲ್ಲಿ ವಿಪಕ್ಷಗಳು ಸರ್ಕಾರವನ್ನು ಒತ್ತಾಯಿಸಬೇಕು” ಎಂದು ಖ್ಯಾತ ಅರ್ಥಶಾಸ್ತ್ರಜ್ಞ ಮತ್ತು ಮಾಜಿ ಮುಖ್ಯ ಸಂಖ್ಯಾಶಾಸ್ತ್ರಜ್ಞ ಪ್ರಣಬ್ ಸೇನ್ ಹೇಳಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...