ಮಸೂದೆಗಳಿಗೆ ಅಂಕಿತ ಹಾಕಲು ರಾಜ್ಯಪಾಲರಿಗೆ ಕಾಲಮಿತಿ ನಿಗದಿಗೊಳಿಸುವವರೆಗೂ ವಿರಮಿಸುವುದಿಲ್ಲ: ಎಂ ಕೆ ಸ್ಟಾಲಿನ್

Date:

ಮಸೂದೆಗಳಿಗೆ ಅಂಕಿತ ಹಾಕಲು ರಾಜ್ಯಪಾಲರಿಗೆ ಕಾಲಮಿತಿ ನಿಗದಿಗೊಳಿಸುವವರೆಗೂ ನಾನು ವಿರಮಿಸುವುದಿಲ್ಲ ಎಂದು ಶುಕ್ರವಾರ ಘೋಷಿಸಿರುವ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್, “ರಾಜ್ಯ ವಿಧಾನಸಭೆಗಳು ಅಂಗೀಕರಿಸಿದ ಮಸೂದೆಗಳಿಗೆ ಅಂಕಿತ ಹಾಕಲು ರಾಜ್ಯಪಾಲರಿಗೆ ಕಾಲಮಿತಿ ನಿಗದಿಗೊಳಿಸಲು ಸಂವಿಧಾನದ ವಿಧಿ 200ಕ್ಕೆ ತಿದ್ದುಪಡಿ ತರಬೇಕು” ಎಂದು ಆಗ್ರಹಿಸಿದ್ದಾರೆ.

ಈ ಕುರಿತು ಪ್ರಕಟಣೆ ಬಿಡುಗಡೆ ಮಾಡಿರುವ ಎಂ ಕೆ ಸ್ಟಾಲಿನ್, “ರಾಷ್ಟ್ರಪತಿಗಳಿಗೆ ಶಿಫಾರಸು ಮಾಡುವ ಕುರಿತು ಸುಪ್ರೀಂ ಕೋರ್ಟ್ ವ್ಯಕ್ತಪಡಿಸಿರುವ ಅಭಿಪ್ರಾಯದಿಂದ, ತಮಿಳುನಾಡು ರಾಜ್ಯಪಾಲ ಆರ್ ಎನ್ ರವಿ ತಡೆಹಿಡಿದಿದ್ದ ಹತ್ತು ಮಸೂದೆಗಳ ಕುರಿತು ಎಪ್ರಿಲ್ 8, 2025ರಂದು ಸುಪ್ರೀಂ ಕೋರ್ಟ್ ನೀಡಿದ್ದ ತೀರ್ಪಿನ ಮೇಲೆ ಯಾವುದೇ ಪರಿಣಾಮವಾಗುವುದಿಲ್ಲ. ಆ ಮಸೂದೆಗಳಿಗೆ ಈಗಾಗಲೇ ರಾಜ್ಯಪಾಲರು ಅಂಕಿತ ಹಾಕಿದ್ದಾರೆ” ಎಂದೂ ಹೇಳಿದ್ದಾರೆ.

ರಾಜ್ಯದ ಹಕ್ಕುಗಳು ಹಾಗೂ ನೈಜ ಒಕ್ಕೂಟ ವ್ಯವಸ್ಥೆಯ ಪರವಾಗಿನ ಡಿಎಂಕೆ ಹೋರಾಟ ಮುಂದುವರಿಯಲಿದೆ ಎಂದು ಸ್ಟಾಲಿನ್, “ರಾಜಭವನವು ಮಸೂದೆಗಳನ್ನು ಕೊಲ್ಲಬಹುದು ಅಥವಾ ಹೂತು ಹಾಕಬಹುದು ಎಂಬ ರಾಜ್ಯಪಾಲ ರವಿಯವರ ‘ಪರಮಾಧಿಕಾರ’ ನಡೆಯನ್ನು ಗುರುವಾರದ ಸುಪ್ರೀಂ ಕೋರ್ಟ್ ತೀರ್ಪು ತಿರಸ್ಕರಿಸಿದೆ ಎಂದೂ ಅವರು ಅಭಿಪ್ರಾಯ ಪಟ್ಟಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ಕಬ್ಬಿನ ನಂತರ ಮೆಕ್ಕೆಜೋಳ, ಬೀದಿಗೆ ಬಂದ ರೈತರ ಬದುಕು

“ನಾವು ನಮ್ಮ ಕಾನೂನು ಹೋರಾಟದ ಮೂಲಕ, ಶಾಸನಗಳ ಮೂಲಕ ಜನರ ಇಚ್ಛೆಯನ್ನು ಪ್ರತಿಫಲಿಸುವ ಮಸೂದೆಗಳ ಕುರಿತು ಉದ್ದೇಶಪೂರ್ವಕವಾಗಿ ನಿಷ್ಕ್ರಿಯತೆ ಪ್ರದರ್ಶಿಸುವ, ದೇಶಾದ್ಯಂತ ಚುನಾಯಿತ ಸರ್ಕಾರದೊಂದಿಗೆ ವ್ಯತಿರಿಕ್ತವಾಗಿ ವರ್ತಿಸುತ್ತಿರುವ ತಮಿಳುನಾಡು ರಾಜ್ಯಪಾಲರೂ ಸೇರಿದಂತೆ ಎಲ್ಲ ರಾಜ್ಯಪಾಲರೂ ಕಾನೂನುಬದ್ಧವಾಗಿ ಕೆಲಸ ಮಾಡುವಂತೆ ಮಾಡಿದ್ದೇವೆ” ಎಂದು ಅವರು ಹೇಳಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...