ವಾರಕ್ಕೆ 70 ಗಂಟೆ ದುಡಿಮೆ | ನಾನು ಸತ್ತರೂ ನನ್ನ ಅಭಿಪ್ರಾಯ ಬದಲಿಸಿಕೊಳ್ಳಲ್ಲ: ನಾರಾಯಣ ಮೂರ್ತಿ

Date:

ವಾರಕ್ಕೆ 70 ಗಂಟೆ ದುಡಿಯಬೇಕು ಎಂದು ಕೆಲಸದ ಅವಧಿ ಬಗ್ಗೆ ಈ ಹಿಂದೆ ಹೇಳಿಕೆ ನೀಡಿ ವಿವಾದಕ್ಕೆ ಗುರಿಯಾಗಿದ್ದ ಇನ್ಫೋಸಿಸ್‌ ಸಂಸ್ಥಾಪಕ ನಾರಾಯಣ ಮೂರ್ತಿ ಅವರು ಈಗ ಮತ್ತೆ ತಮ್ಮ ಹಳೆಯ ಹೇಳಿಕೆಯನ್ನು ಪುನರುಚ್ಚರಿಸಿ, ಸತ್ತರೂ ನನ್ನ ಅಭಿಪ್ರಾಯವನ್ನು ಬದಲಿಸಿಕೊಳ್ಳಲ್ಲ ಎಂದಿದ್ದಾರೆ.

ನವದೆಹಲಿಯಲ್ಲಿ ನಡೆದ ಸಿಎನ್‌ಬಿಸಿ ಗ್ಲೋಬಲ್ ಲೀಡರ್‌ಶಿಪ್ ಶೃಂಗಸಭೆಯಲ್ಲಿ ಶೆರೀನ್ ಭಾನ್ ಜತೆ ಸಂವಾದದ ವೇಳೆ ವಾರದಲ್ಲಿ ಆರು ದಿನ ಕೆಲಸದ ಕುರಿತಾದ ಅಭಿಪ್ರಾಯವನ್ನು ಸಮರ್ಥಿಸಿಕೊಂಡರು.

“ಉದ್ಯೋಗದ ಅವಧಿ ವಿಸ್ತರಣೆ ಕುರಿತು ನನ್ನ ನಿಲುವು ಬದಲಾಗುವುದಿಲ್ಲ. ಪ್ರತಿಭಾವಂತರು ದಿನಕ್ಕೆ ಕನಿಷ್ಠ 10 ತಾಸು ಕೆಲಸ ಮಾಡಲೇಬೇಕು. ಅಂದಾಗ ನಮ್ಮ ದೇಶ ಸಾಕಷ್ಟು ಅಭಿವೃದ್ಧಿ ಹೊಂದಲು ಸಾಧ್ಯ” ಎಂದು ಹೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ನನ್ನ ಹೇಳಿಕೆಯಿಂದ ನೋವಾಗಿದ್ದರೆ ದಯವಿಟ್ಟು ಕ್ಷಮಿಸಿ. ಕೆಲಸದ ಅವಧಿ ವಿಚಾರದಲ್ಲಿ ನಾನು ಸತ್ತರೂ ನನ್ನ ದೃಷ್ಟಿಕೋನವನ್ನು ಬದಲಾಯಿಸಿಕೊಳ್ಳುವುದಿಲ್ಲ. ಕಠಿಣ ಪರಿಶ್ರಮವೇ ದೇಶದ ಅಭಿವೃದ್ಧಿಗೆ ಮೂಲಾಧಾರ” ಎಂದು ಅಭಿಪ್ರಯಾಪಟ್ಟಿದ್ದಾರೆ.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಬಿಜೆಪಿಯ ಧ್ವಂಸ ಸಂಸ್ಕೃತಿಗೆ ಸುಪ್ರೀಂ ಸುತ್ತಿಗೆ ಏಟು

“ಪ್ರಧಾನಿ ಮೋದಿ ಅವರು ವಾರಕ್ಕೆ 100 ಗಂಟೆವರೆಗೆ ಕೆಲಸ ಮಾಡುತ್ತಾರೆ. ಅವರಿಗೆ ಈ ದೇಶದ ಯುವಕರು ಮೆಚ್ಚುಗೆ ಸೂಚಿಸಬೇಕಾದರೆ ಅವರಂತೆಯೇ ವಾರಕ್ಕೆ ಕನಿಷ್ಠ 70 ತಾಸಾದರೂ ಕೆಲಸ ಮಾಡಬೇಕು. ನಾನು ನನ್ನ ವೃತ್ತಿ ಜೀವನದ ಆರಂಭದಲ್ಲಿ ದಿನಕ್ಕೆ 14 ಗಂಟೆ ಕೆಲಸ ಮಾಡುತ್ತಿದ್ದೆ. ಬೆಳಿಗ್ಗೆ 6.30 ಕ್ಕೆ ಕಚೇರಿಯಲ್ಲಿ ಹಾಜರಿರುತ್ತಿದ್ದೆ. ರಾತ್ರಿ 8-30 ಕ್ಕೆ ಮನೆಗೆ ಹೊರಡುತ್ತಿದ್ದೆ. ಸಮರ್ಪಣೆಯಿಂದ ಕೆಲಸ ಮಾಡುತ್ತಿದ್ದೆ. ಕಠಿಣ ಪರಿಶ್ರಮವು ನಮ್ಮ ಸಂಸ್ಕೃತಿಯಲ್ಲೇ ಇದೆ” ಎಂದು ಪ್ರತಿಪಾದಿಸಿದ್ದಾರೆ.

ಜರ್ಮನಿ, ಜಪಾನ್ ದೇಶದವರು ಕಠಿಣ ಪರಿಶ್ರಮದಿಂದಲೇ ದೇಶ ಕಟ್ಟಿದ್ದಾರೆ. ಅದಕ್ಕೆ ಪರ್ಯಾಯ ಯಾವುದೂ ಇಲ್ಲ. 1986 ರಲ್ಲಿ ನನಗೆ ದೊಡ್ಡ ಶಾಕ್ ಆಗಿತ್ತು. ಆಗ ಭಾರತದಲ್ಲಿ ಐಟಿ ಹಾಗೂ ಇತರ ಕೆಲ ವಲಯಗಳಲ್ಲಿ ವಾರದ ಆರು ದಿನ ಬದಲು 5 ದಿನ ಕೆಲಸ ಮಾಡುವ ನೀತಿ ತರಲಾಯಿತು. ಇದರಿಂದ ನಾನು ವಿಚಲಿತನಾಗಿದ್ದೆ” ಎಂದು ಹೇಳಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಪುದುಚೆರಿ ಚುನಾವಣೆ | ‘ಇಂಡಿಯಾ’ ಗೊಂದಲ ನಿವಾರಣೆ: ಕಾಂಗ್ರೆಸ್ 16, ಡಿಎಂಕೆ 14 ಕ್ಷೇತ್ರಗಳಲ್ಲಿ ಸ್ಪರ್ಧೆ

ಪುದುಚೆರಿಯ 'ಇಂಡಿಯಾ' ಮೈತ್ರಿಕೂಟದ ಪ್ರಮುಖ ಪಕ್ಷಗಳಾದ ಡಿಎಂಕೆ ಮತ್ತು ಕಾಂಗ್ರೆಸ್‌ ಪಕ್ಷಗಳ...

ತಮಿಳುನಾಡು ಚುನಾವಣೆ | ಎಐಎಡಿಎಂಕೆ 178, ಬಿಜೆಪಿ 27 ಕ್ಷೇತ್ರಗಳಲ್ಲಿ ಸ್ಪರ್ಧೆ

ಈ ಬಾರಿಯ ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ ಗೆದ್ದು ಅಧಿಕಾರಕ್ಕೇರಲೇ ಬೇಕೆಂದು ಪಣ...

ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಬ್ಯಾಲೆಟ್ ಪೇಪರ್ ಬಳಕೆ; ವಿಧಾನಸಭೆಯಲ್ಲಿ ಮಸೂದೆ ಅಂಗೀಕಾರ

ರಾಜ್ಯದ ಸ್ಥಳೀಯ ಸಂಸ್ಥೆಗಳ ಚುನಾವಣಾ ಪ್ರಕ್ರಿಯೆಯಲ್ಲಿ ಬದಲಾವಣೆ ತರಲು ರಾಜ್ಯ ಸರ್ಕಾರ...

ಪ್ರಧಾನಿ ಮೋದಿ ಅಮೆರಿಕಕ್ಕೆ 100% ಶರಣಾಗಿದ್ದಾರೆ: ರಾಹುಲ್ ಗಾಂಧಿ

ಪಶ್ಚಿಮ ಏಷ್ಯಾದಲ್ಲಿನ ಯುದ್ಧದ ಪರಿಸ್ಥಿತಿ ಮತ್ತು ದೇಶದ ಆರ್ಥಿಕ ನೀತಿಗಳ ಕುರಿತು...