ಶೌಚಾಲಯದಲ್ಲೇ ಕುಳಿತು ಹೈಕೋರ್ಟ್‌ ಕಲಾಪದಲ್ಲಿ ಭಾಗವಹಿಸಿದ ಯುವಕ: ವಿಡಿಯೋ ವೈರಲ್

Date:

ಯುವಕನೋರ್ವ ಶೌಚಾಲಯದಲ್ಲೇ ಕುಳಿತು ಗುಜರಾತ್ ಹೈಕೋರ್ಟ್‌ನ ವಿಡಿಯೋ(ವರ್ಚುವಲ್) ಕಲಾಪದಲ್ಲಿ ಭಾಗವಹಿಸಿರುವ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ಗುಜರಾತ್ ಹೈಕೋರ್ಟ್‌ನ ನ್ಯಾಯಮೂರ್ತಿ ನಿರ್ಜಾರ್ ಎಸ್ ದೇಸಾಯಿ ಅವರ ಪೀಠವು ಕಳೆದ ಜೂನ್ 20ರಂದು ಪ್ರಕರಣವೊಂದರ ವಿಚಾರಣೆ ನಡೆಸುತ್ತಿದ್ದ ಸಂದರ್ಭದಲ್ಲಿ ಈ ಬೆಳವಣಿಗೆ ನಡೆದಿರುವುದಾಗಿ ಬಾರ್ & ಬೆಂಚ್ ವರದಿ ಮಾಡಿದೆ. ‘ಸಮದ್ ಬ್ಯಾಟರಿ’ ಎಂಬ ಹೆಸರಿನಲ್ಲಿ ಲಾಗಿನ್ ಆಗಿದ್ದ ಯುವಕ, ಕುತ್ತಿಗೆಗೆ ಬ್ಲೂಟೂತ್ ಇಯರ್‌ಫೋನ್ ಧರಿಸಿರುವುದು ವಿಡಿಯೋದಲ್ಲಿ ದಾಖಲಾಗಿದೆ.

ವೈರಲ್ ಆಗಿರುವ ವಿಡಿಯೋದಲ್ಲಿ, ಶೌಚಾಲಯದ ಒಳಗಡೆ ಇದ್ದಾಗಲೇ ಕಲಾಪದ ವಿಡಿಯೋ ಆನ್ ಮಾಡಿಕೊಂಡಿದ್ದು, ಶೌಚ ಕಾರ್ಯ ಮುಗಿಸಿದ ಬಳಿಕ ನೀರನ್ನು ಹಾಕಿ ಸ್ವಚ್ಛಗೊಳಿಸಿಕೊಂಡು ನಂತರ ಹೊರಗೆ ಬರುವುದು ದಾಖಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ನ್ಯಾಯಾಲಯದ ದಾಖಲೆಗಳ ಪ್ರಕಾರ, ವಿಡಿಯೋದಲ್ಲಿರುವ ವ್ಯಕ್ತಿಯು ಕ್ರಿಮಿನಲ್ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ದೂರುದಾರರಾಗಿದ್ದರು. ಎಫ್‌ಐಆರ್ ರದ್ದುಗೊಳಿಸುವಂತೆ ಕೋರಿ ಸಲ್ಲಿಸಲಾದ ಪ್ರಕರಣದಲ್ಲಿ ಪ್ರತಿವಾದಿಯಾಗಿ ಹಾಜರಾಗಿದ್ದರು. ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಎರಡೂ ಕಡೆಯವರು ಸೌಹಾರ್ದಯುತವಾಗಿ ಪ್ರಕರಣವನ್ನು ಇತ್ಯರ್ಥಗೊಳಿಸುವುದಾಗಿ ತಿಳಿಸಿದ ನಂತರ, ನ್ಯಾಯಾಲಯವು ಎಫ್‌ಐಆರ್ ಅನ್ನು ರದ್ದುಗೊಳಿಸಿತ್ತು.

ಇದು ಅನುಚಿತ ವರ್ತನೆ. ಕಲಾಪಕ್ಕೆ ಭಾಗವಹಿಸುವಾಗ ಯಾವ ರೀತಿಯಲ್ಲಿ ವರ್ತಿಸಬೇಕು ಎಂಬ ಸಾಮಾನ್ಯ ಪರಿಜ್ಞಾನ ಇಲ್ಲ. ಹಾಗಾಗಿ, ಇಂತಹ ಬೆಳವಣಿಗೆಗಳಿಗೆ ಕಡಿವಾಣ ಹಾಕಲು ನ್ಯಾಯಾಲಯವು ವಿಡಿಯೋದಲ್ಲಿರುವ ವ್ಯಕ್ತಿಯ ವಿರುದ್ಧ ಕ್ರಮ ಕೈಗೊಳ್ಳಬೇಕು. ಅಲ್ಲದೇ, ಈ ಬಗ್ಗೆ ನ್ಯಾಯಾಲಯಗಳು ಕೂಡ ಕೆಲವೊಂದು ನಿಯಮಗಳನ್ನು ಕೂಡ ರಚಿಸಬೇಕು ಎಂದು ಹಲವರು ಆಗ್ರಹಿಸಿದ್ದಾರೆ.

ಆನ್‌ಲೈನ್ ನ್ಯಾಯಾಲಯದ ವಿಚಾರಣೆಯಲ್ಲಿ ಅನುಚಿತ ವರ್ತನೆಯ ನಿದರ್ಶನ ಇದೇ ಮೊದಲಲ್ಲ. ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ಹಾಜರಾಗುವಾಗ ಸಿಗರೇಟ್ ಸೇದುತ್ತಿದ್ದ ದೂರುದಾರನಿಗೆ ಗುಜರಾತ್ ಹೈಕೋರ್ಟ್ ಕಳೆದ ಏಪ್ರಿಲ್‌ನಲ್ಲಿ ₹50,000 ದಂಡ ವಿಧಿಸಿತ್ತು.

ಅದೇ ರೀತಿ, ಮಾರ್ಚ್‌ನಲ್ಲಿ ದೆಹಲಿ ನ್ಯಾಯಾಲಯವು ವಿಡಿಯೋ ಕಾನ್ಫರೆನ್ಸ್ ಮೂಲಕ ತನ್ನ ಪ್ರಕರಣದಲ್ಲಿ ಹಾಜರಾಗುವಾಗ ಸಿಗರೇಟ್ ಸೇದುತ್ತಿದ್ದ ಕಕ್ಷಿದಾರನೋರ್ವನಿಗೆ ಸಮನ್ಸ್ ನೀಡಿತ್ತು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...