ಆತಂಕದ ಘಟನೆ | ಕುಡಿಯಲು ಹಣ ಕೊಟ್ಟಿಲ್ಲವೆಂದು ವಿದ್ಯುತ್ ತಂತಿ ಮೇಲೆ ಮಲಗಿದ ಯುವಕ

Date:

ಮದ್ಯ ವ್ಯಸನಕ್ಕೆ ತುತ್ತಾಗಿದ್ದ ಯುವಕನೊಬ್ಬ ಮದ್ಯಪಾನ ಮಾಡಲು ತನ್ನ ತಾಯಿ ಹಣ ಕೊಡಲಿಲ್ಲವೆಂದು ಮನೆಯ ಬಳಿಯಿದ್ದ ವಿದ್ಯುತ್‌ ಕಂಬ ಹತ್ತಿ, ಹೈಟೆನ್ಷನ್‌ ವಿದ್ಯುತ್‌ ವೈರ್‌ ಮೇಲೆ ಮಲಗಿರುವ ಆತಂಕಕಾರಿ ಘಟನೆ ಆಂಧ್ರ ಪ್ರದೇಶದ ಪಾರ್ವತಿಪುರಂ ಮಾನ್ಯಂ ಜಿಲ್ಲೆಯಲ್ಲಿ ನಡೆದಿದೆ.

ಮಾನ್ಯಂ ಜಿಲ್ಲೆಯ ಎಂ ಸಿಂಗಾಪುರಂ ಗ್ರಾಮದ ಯುವಕ ಯಜ್ಜಲ ವೆಂಕಣ್ಣ ಎಂಬಾತ ಇಂತಹ ದುಸ್ಸಾಹಸ ಮಾಡಿದ್ದಾನೆ. ಸದ್ಯ, ಆ ಸಮಯದಲ್ಲಿ ವಿದ್ಯುತ್‌ ಇಲ್ಲದಿದ್ದ ಕಾರಣ, ಆತನಿಗೆ ಯಾವುದೇ ಅಪಾಯವಾಗಿಲ್ಲ. ಆತನನ್ನು ಗ್ರಾಮಸ್ಥರು ಬೈದು ಕೆಳಗಿಳಿಸಿದ್ದಾರೆ. ಘಟನೆ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ದಿನನಿತ್ಯ ಮದ್ಯಪಾನ ಮಾಡುತ್ತಿದ್ದ ವೆಂಕಣ್ಣ ಮನೆಯಲ್ಲಿ ತಾಯಿಯೊಂದಿಗೆ ಜಗಳವಾಡುತ್ತಿದ್ದ. ಹೊಸ ವರ್ಷದ ಹಿನ್ನೆಲೆ ಮದ್ಯಪಾನ ಮಾಡಲು ತನ್ನ ತಾಯಿಯ ಬಳಿ ವೆಂಕಣ್ಣ ಹಣ ಕೇಳಿದ್ದಾನೆ. ಆಕೆ ಹಣ ಕೊಡಲು ನಿರಾಕರಿಸಿದ್ದು, ತಾಯಿಯೊಂದಿಗೆ ಜಗಳವಾಡಿದ ವೆಂಕಣ್ಣ ವಿದ್ಯುತ್ ಕಂಬ ಹತ್ತಿ, ವಿದ್ಯುತ್‌ ತಂತಿಗಳ ಮೇಲೆ ಮಲಗಿದ್ದಾನೆ ಎಂದು ಹೇಳಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಆತನ ಪುಂಡಾಟವನ್ನು ನೋಡಿದ ಗ್ರಾಮಸ್ಥರು ತಾವೇ ಮದ್ಯಪಾನಕ್ಕೆ ಹಣ ಕೊಡುವುದಾಗಿ ಹೇಳಿ, ಆತನನ್ನು ಕಳೆಗಿಳಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...