ಕೇವಲ 180 ಮೀಟರ್​​ ಪ್ರಯಾಣಕ್ಕೆ ‘ಓಲಾ ಬೈಕ್’ ಬುಕ್ ಮಾಡಿದ ಯುವತಿ; ವಿಡಿಯೋ ವೈರಲ್

Date:

ತಂತ್ರಜ್ಞಾನ ಯುಗದಲ್ಲಿ ಎಲ್ಲವೂ ಇರುವಲ್ಲಿಗೆ ಅಥವಾ ಮನೆ ಬಾಗಿಲಿಗೆ ದೊರೆಯುವ ವ್ಯವಸ್ಥೆ ಹೆಚ್ಚುತ್ತಿದೆ. ಜನರು ತಮ್ಮ ಓಡಾಟವನ್ನು ಕಡಿಮೆ ಮಾಡಲು ಆರಂಭವಿಸಿದ್ದಾರೆ. ಆನಾರೋಗ್ಯಗಳು ಕಾಡಲಾರಂಭಿಸುತ್ತಿವೆ. ಹಿಗಾಗಿ, ಪ್ರತಿಯೊಬ್ಬರು ಕನಿಷ್ಠ ದೈಹಿಕ ಶ್ರಮ ವ್ಯಯಿಸಬೇಕು, ವ್ಯಾಯಾಮ ಮಾಡಬೇಕು ಎಂದು ವೈದ್ಯರು ಸಲಹೆ ನೀಡುತ್ತಿದ್ದಾರೆ. ಇದೆಲ್ಲದರ ನಡುವೆ, ಯುವತಿಯೊಬ್ಬರು ಕೇವಲ 180 ಮೀಟರ್‌ಗಳ ಪ್ರಯಾಣವನ್ನು ನಡಿಗೆಯಲ್ಲಿ ಹೋಗದೆ, ‘ಓಲಾ ಬೈಕ್‌’ ಬುಕ್‌ ಮಾಡಿಕೊಂಡು ಹೋಗಿರುವ ಘಟನೆ ಬೆಳಕಿಗೆ ಬಂದಿದೆ. ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

180 ಮೀಟರ್‌ ದೂರ ಎಂಬುದು ಅರಾಮದಾಯ ನಡಿಗೆಯ ಅಂತರ. ಇಷ್ಟು ಕಡಿಮೆ ದೂರದ ಪ್ರಯಾಣಕ್ಕೆ ಸ್ವಂತ ವಾಹನಗಳನ್ನು ಕೊಂಡೊಯ್ಯುವುದನ್ನು ಬಹುತೇಕರು ಮಾಡುತ್ತಾರೆ. ಆದರೆ, ಇಷ್ಟು ಕಡಿಮೆ ಅಂತರದ ಪ್ರಯಾಣಕ್ಕೆ ‘ಕ್ಯಾಬ್‌’ಗಳನ್ನು ಬುಕ್‌ ಮಾಡಿಕೊಂಡು ಹೋಗುವುದು ಇದೇ ಮೊದಲ ಪ್ರಕರಣ ಇರಬಹುದು ಎಂದು ನೆಟ್ಟಿಗರು ಅಭಿಪ್ರಾಯ ಪಟ್ಟಿದ್ದಾರೆ.

ಹಲವಾರು ನೆಟ್ಟಿಗರು 180 ಮೀಟರ್‌ ಪ್ರಯಾಣಕ್ಕೂ ಓಲಾ ಬುಕ್‌ ಮಾಡಿದವರ ಕುರಿತು ಹಾಸ್ಯ ಮಾಡುತ್ತಿದ್ದಾರೆ. ಆದರೆ, ಬೀದಿ ನಾಯಿಗಳ ದಾಳಿ ಮತ್ತು ಕಾಟಕ್ಕೆ ಹೆದರಿ ಆಕೆ ಕಡಿಮೆ ಅಂತರದ ಪ್ರಯಾಣಕ್ಕೂ ಓಲಾ ಬೈಕ್‌ಅನ್ನು ಅವಲಂಬಿಸಿದ್ದರೆಂದು ವಿಡಿಯೋದಲ್ಲಿನ ಸಂಭಾಷಣೆಯಲ್ಲಿ ಗೊತ್ತಾಗಿದೆ. ಆಕೆ, ತನ್ನ ಕಡಿಮೆ ಅಂತರದ ಪ್ರಯಾಣಕ್ಕೆ 19 ರೂ.ಗಳನ್ನು ಪಾವತಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಆದಾಗ್ಯೂ, ಈ ವಿಡಿಯೋ ಯಾವ ನಗರ ಅಥವಾ ಪ್ರದೇಶದ್ದು ಎಂಬುದು ಗೊತ್ತಾಗಿಲ್ಲ. ಆದರೆ, ಓಲಾ ಬೈಕ್‌ ಚಾಲಕ ಮತ್ತು ಯುವತಿ ಹಿಂದಿಯಲ್ಲಿ ಸಂಭಾಷಣೆ ನಡೆಸಿದ್ದು, ಘಟನೆಯು ಉತ್ತರ ಭಾರತದಲ್ಲಿ ನಡೆದಿದೆ ಎಂಬುದು ಸ್ಪಷ್ಟವಾಗಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...