ಯುವತಿ ಮೇಲೆ ಪೊಲೀಸ್ ಅಧಿಕಾರಿಯಿಂದಲೇ ಅತ್ಯಾಚಾರ; ಮದುವೆಯಾಗುತ್ತೇನೆಂದು ವಂಚನೆ

Date:

ಯುವತಿಯೊಬ್ಬರನ್ನು ಪೊಲೀಸ್‌ ಅಧಿಕಾರಿಯೊಬ್ಬ ವಂಚಿಸಿ ಅತ್ಯಾಚಾರ ಎಸಗಿರುವ ಪ್ರಕರಣ ಬೆಳಕಿಗೆ ಬಂದಿದೆ. ಅತ್ಯಾಚಾರಕ್ಕೊಳಗಾಗಿದ್ದ ಯುವತಿ ಪೊಲೀಸರಿಗೆ ದೂರು ನೀಡಿದ್ದು, ವಿಶೇಷ ತನಿಖಾ ತಂಡ (ಎಸ್‌ಐಟಿ) ತನಿಖೆ ನಡೆಸುತ್ತಿದೆ.

ಸಹಾಯಕ ಪೊಲೀಸ್‌ ಆಯುಕ್ತ (ಎಎಸ್‌ಪಿ) ಆಗಿ ಸೇವೆ ಸಲ್ಲಿಸುತ್ತಿದ್ದ ಮೊಹಮ್ಮದ್ ಮೊಹ್ಸಿನ್ ಖಾನ್, ಕಾನ್ಪುರ ಐಐಟಿಯಲ್ಲಿ ಪಿಎಚ್‌ಡಿ ಮಾಡುತ್ತಿದ್ದ ಯುವತಿ ಮೇಲೆ ಅತ್ಯಾಚಾರ ಎಸಗಿದ್ದಾರೆ ಎಂದು ಆರೋಪಿಸಲಾಗಿದೆ.

“ಯುವತಿ ಐಐಟಿಯಲ್ಲಿದ್ದಾಗ ಮೊಹ್ಸಿನ್ ಅವರು ತಮ್ಮ ಪತ್ನಿಗೆ ವಿಚ್ಛೇದನ ನೀಡಿ, ತನ್ನನ್ನು ಮದುವೆಯಾಗುವುದಾಗಿ ಭರವಸೆ ನೀಡಿದ್ದರು. ದೈಹಿಕ ಸಂಬಂಧ ಬೆಳೆಸಿದ್ದರು. ಆದರೆ, ಈಗ ನನ್ನನ್ನು ವಿವಾಹವಾಗದೆ ವಂಚಿಸಿದ್ದಾರೆ” ಎಂದು ಆರೋಪಿಸಿರುವ ಯುವತಿ ಅತ್ಯಾಚಾರ ಪ್ರಕರಣ ದಾಖಲಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಸಂತ್ರಸ್ತ ಯುವತಿ ಕಲ್ಯಾಣಪುರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಪ್ರಕರಣದ ತನಿಖೆಗಾಗಿ ಹೆಚ್ಚುವರಿ ಡಿಸಿಪಿ (ಟ್ರಾಫಿಕ್) ಅರ್ಚನಾ ಸಿಂಗ್ ನೇತೃತ್ವದಲ್ಲಿ ಎಸ್‌ಐಟಿ ರಚಿಸಲಾಗಿದೆ. ಆರೋಪಿ ಅಧಿಕಾರಿಯನ್ನು ಸೇವೆಯಿಂದ ಅಮಾನತು ಮಾಡಲಾಗಿದೆ. ಆದರೆ, ಇನ್ನೂ ಆತನನ್ನು ಬಂಧಿಸಿಲ್ಲವೆಂದು ಉಪ ಪೊಲೀಸ್ ಆಯುಕ್ತೆ ಅಂಕಿತಾ ಶರ್ಮಾ ತಿಳಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...