ಉತ್ತರ ಪ್ರದೇಶ | ಯುವಕನ ಮೇಲೆ ಹಲ್ಲೆ ನಡೆಸಿ ಬಲವಂತವಾಗಿ ಉಗುಳು ನೆಕ್ಕಿಸಿದ ದುರುಳರು

Date:

ದುರುಳರ ಗುಂಪೊಂದು ಯುವಕನ ಮೇಲೆ ಹಲ್ಲೆ ನಡೆಸಿ ಬಲವಂತವಾಗಿ ಯುವಕನಿಂದ ಉಗುಳು ನೆಕ್ಕಿಸಿದ ಘಟನೆ ಉತ್ತರ ಪ್ರದೇಶದ ಹಳ್ಳಿಯೊಂದರಲ್ಲಿ ನಡೆದಿದೆ. ಸದ್ಯ ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದ್ದು, ಪೊಲೀಸರು ಓರ್ವ ಆರೋಪಿಯನ್ನು ಬಂಧಿಸಿದ್ದಾರೆ.

ಗೋಬರೈ ಗ್ರಾಮದಲ್ಲಿ ನಡೆದ ಘಟನೆ ಎಂದು ಹೇಳಲಾಗುವ ಈ ವಿಡಿಯೋ ಭಾನುವಾರ ಸಂಜೆಯಿಂದ ವೈರಲ್ ಆಗುತ್ತಿದೆ. ಹಳ್ಳಿಯೊಂದರ ಜನರ ಗುಂಪು ಯುವಕನ ಮೇಲೆ ಬೆಲ್ಟ್ ಮತ್ತು ಚಪ್ಪಲಿಯಿಂದ ಹಲ್ಲೆ ನಡೆಸಿ, ಆತನ ಮೇಲೆ ಉಗುಳುವುದು ವಿಡಿಯೋದಲ್ಲಿ ಕಂಡುಬಂದಿದೆ.

ಇದನ್ನು ಓದಿದ್ದೀರಾ? ಉತ್ತರ ಪ್ರದೇಶ | ಪೊಲೀಸ್ ಠಾಣೆಯ ಶೌಚಾಲಯದಲ್ಲಿ ಆರೋಪಿ ಶವವಾಗಿ ಪತ್ತೆ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸಂಬಂಧ ಸಂತ್ರಸ್ತ ಯುವಕನ ತಾಯಿ ದೂರು ನೀಡಿದ್ದಾರೆ. ನವೆಂಬರ್ 29ರಂದು ಮಧ್ಯಾಹ್ನ 3 ಗಂಟೆ ಸುಮಾರಿಗೆ ತನ್ನ ಮಗ ಡಿಯೋರಿಯಾ ಪಟ್ಟಣಕ್ಕೆ ಹೋಗುತ್ತಿದ್ದಾಗ, ಸಕ್ರಾ ಪಾರ್ ಮತ್ತು ಗೋಬರೈ ಗ್ರಾಮಗಳ ನಾಲ್ವರು ಆತನನ್ನು ತಡೆದು ಹಲ್ಲೆ ನಡೆಸಿದ್ದಾರೆ. ಉಗುಳು ನೆಕ್ಕುವಂತೆ ಬಲವಂತ ಮಾಡಿದ್ದಾರೆ ಎಂದು ತಾಯಿ ದೂರಿದ್ದಾರೆ.

ನಂತರ ಆ ರಾತ್ರಿ ಅದೇ ಗುಂಪು ಮನೆಯ ಬಾಗಿಲು ಮುರಿದು ಒಳಬರುವ ಯತ್ನ ಮಾಡಿದೆ. ಮನೆಯ ಮೇಲೆ ಕಲ್ಲು ತೂರಾಟ ನಡೆಸಿದೆ ಎಂದು ಮಹಿಳೆ ಹೇಳಿಕೊಂಡಿದ್ದಾರೆ.

ಈ ಬಗ್ಗೆ ಮಾಧ್ಯಮಕ್ಕೆ ಮಾಹಿತಿ ನೀಡಿರುವ ಡಿಯೋರಿಯಾ ಪೊಲೀಸ್ ಠಾಣೆಯ ಸ್ಟೇಷನ್ ಹೌಸ್ ಆಫೀಸರ್ ವಿನೋದ್ ಕುಮಾರ್ ಸಿಂಗ್, “ಯುವಕ ತಾಯಿ ದೂರು ದಾಖಲಿಸಿದ್ದಾರೆ. ಈ ಸಂಬಂಧ ಓರ್ವ ವ್ಯಕ್ತಿಯನ್ನು ಬಂಧಿಸಲಾಗಿದೆ. ಮುಂದಿನ ಕ್ರಮ ಕೈಗೊಳ್ಳಲಾಗುತ್ತಿದೆ. ಉಳಿದ ಆರೋಪಿಗಳನ್ನು ಶೀಘ್ರದಲ್ಲೇ ವಶಕ್ಕೆ ಪಡೆಯಲಾಗುತ್ತದೆ” ಎಂದು ತಿಳಿಸಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...