ರಾಜಸ್ಥಾನ | ಜಾನುವಾರು ಸಾಗಣೆ ಆರೋಪ; ಹಿಂದುತ್ವ ಪುಂಡರಿಂದ ಯುವಕನ ಹತ್ಯೆ

Date:

ಹಸುಗಳನ್ನು ಸಾಗಿಸುತ್ತಿದ್ದಾರೆ ಎಂಬ ಕಾರಣಕ್ಕಾಗಿ ಹಿಂದುತ್ವ ಕೋಮುವಾದಿ ಪುಂಡರ ಗುಂಪು ದಾಳಿ ನಡೆಸಿದ್ದು, ಘರ್ಷಣೆಯಲ್ಲಿ ಯುವಕನೊಬ್ಬ ಹತ್ಯೆಗೀಡಾಗಿರುವ ಘಟನೆ ರಾಜಸ್ಥಾನದ ಭಿವಾಡಿಯಲ್ಲಿ ನಡೆದಿದೆ.

ಯುವಕನನ್ನು ಗುಂಡಿಕ್ಕಿ ಕೊಲ್ಲಲಾಗಿದೆ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ. ಆದರೆ, ದಾಳಿ ನಡೆಸಿದ ಕೋಮುವಾದಿ ಗೂಂಡಾಗಳ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿ ಪ್ರತಿಭಟನೆ ನಡೆಸಿದ್ದಾರೆ. ಯುವಕನ ಸಾವಿಗೆ ನಿಖರವಾದ ಕಾರಣವೇನೆಂದು ತನಿಖೆಯ ನಂತರವಷ್ಟೇ ತಿಳಿದುಬರಲಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಭಿವಾಡಿ ಡಿಎಸ್‌ಪಿ ಕೈಲಾಶ್ ಚೌಧರಿ ಅವರ ಪ್ರಕಾರ, “ಮುಂಜಾನೆ 5 ಗಂಟೆಯ ಸುಮಾರಿಗೆ ಜಾನುವಾರುಗಳನ್ನು ಹೊತ್ತ ಪಿಕಪ್ ಟ್ರಕ್ ಭಿವಾಡಿಯ ತಪುಕ್ಡಾದಿಂದ ತವಾಡೂ ಕಡೆಗೆ ಹೋಗುತ್ತಿದೆ. ಕೆಲವರು ಅದನ್ನು ಬೆನ್ನಟ್ಟಿದ್ದಾರೆ. ಸಾರೆ ಕಲಾ ಗ್ರಾಮದ ಬಳಿ ಎರಡೂ ಗುಂಪುಗಳ ನಡುವೆ ಘರ್ಷಣೆ ನಡೆದಿದೆ. ಪರಸ್ಪರ ಕಲ್ಲು ತೂರಾಟ ನಡೆದಿದೆ. ಘಟನೆಯಲ್ಲಿ ಹರಿಯಾಣದ ಉತಾವಡ್ ಗ್ರಾಮದ ನಿವಾಸಿ ಅಮೀರ್ ಎಂಬ ಯುವಕ ಗಂಭೀರವಾಗಿ ಗಾಯಗೊಂಡಿದ್ದರು. ಆತನನ್ನು ಭಿವಾಡಿ ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ, ಆವೇಳೆಗೆ ಆತ ಸಾವನ್ನಪ್ಪಿದ್ದರು” ಎಂದು ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಮೃತ ಅಮೀರ್ ಗೋವುಗಳ ಸಾಗಣೆಯಲ್ಲಿ ಭಾಗಿಯಾಗಿರಲಿಲ್ಲ. ಹಿಂಸಾಚಾರ ನಡೆದಾಗ ಆತ ಕೇವಲ ರಸ್ತೆಬದಿಯಲ್ಲಿ ನಿಂತಿದ್ದಎಂದು ಆತನ ಕುಟುಂಬಸ್ಥರು ಹೇಳಿದ್ದಾರೆ.

ಅಮೀರ್ ಅವರ ಮಾವ ಯಾಹ್ಯಾ ಖಾನ್ ಮಾತನಾಡಿ, “ಅಮೀರ್ ಚಾಲಕನಾಗಿ ಕೆಲಸ ಮಾಡುತ್ತಿದ್ದರು. ಆತನಿಗೆ ಮದುವೆಯಾಗಿದ್ದು, ಪತ್ನಿ ಮತ್ತು ಎರಡು ವರ್ಷದ ಮಗಳಿದ್ದಾಳೆ. ಅಮೀರ್ ತನ್ನ ಸ್ನೇಹಿತನೊಂದಿಗೆ ವಾಹನವೊಂದನ್ನು ಪಡೆಯಲು ಸಾರೆ ಕಲಾ ಗ್ರಾಮಕ್ಕೆ ಬಂದಿದ್ದರು. ಅವರು ರಸ್ತೆಬದಿಯಲ್ಲಿ ಕಾಯುತ್ತಿದ್ದಾಗ ಜಾನುವಾರುಗಳನ್ನು ಹೊತ್ತ ಪಿಕಪ್ ಟ್ರಕ್ ಅಲ್ಲಿಂದ ಹಾದುಹೋಗಿದೆ. ಆದರೆ, ವಾಹನವನ್ನು ಬೆನ್ನಟ್ಟಿಬಂದ ಗುಂಪು ಅಮೀರ್ ಮತ್ತು ಆತನ ಸ್ನೇಹಿತನನ್ನು ಗೋಸಾಗಣೆದಾರರೆಂದು ತಪ್ಪಾಗಿ ಭಾವಿಸಿ, ದಾಳಿ ನಡೆಸಿದ್ದಾರೆ. ಆತನ ಮೇಲೆ ಗುಂಡು ಹಾರಿಸಿ, ಹತ್ಯೆಗೈದಿದ್ದಾರೆ” ಎಂದು ಆರೋಪಿಸಿದ್ದಾರೆ.

ದಾಳಿ ನಡೆಸಿದ 15 ರಿಂದ 20 ಜನರು ಮೂರು ವಾಹನಗಳಲ್ಲಿ ಬಂದು ಅಮೀರ್‍‌ನನ್ನು ಕೊಂದು, ಭಿವಾಡಿ ಕಡೆಗೆ ಪರಾರಿಯಾಗಿದ್ದಾರೆ ಎಂದು ಅವರು ದೂರಿದ್ದಾರೆ.

ಈ ಲೇಖನ ಓದಿದ್ದೀರಾ?: ಇರಾನ್-ರಷ್ಯಾ ಸಂಬಂಧವೇನು; ಪರಸ್ಪರ ಬೆಂಬಲ ಯಾಕೆ ಮುಖ್ಯ?

ಆದಾಗ್ಯೂ, ಪೋಲೀಸರ ವಾದ ಬೇರೆಯೇ ಇದೆ. “ಸಾರೆ ಕಲಾ ಗ್ರಾಮದ ಬಳಿ ಗೋಸಾಗಣೆದಾರರಿಗೆ ಸಹಾಯ ಮಾಡಲು ಮತ್ತೊಂದು ಪಿಕಪ್ ಟ್ರಕ್‌ನಲ್ಲಿ ಐದರಿಂದ ಆರು ಜನರು ಬಂದಿದ್ದರು. ಅಮೀರ್ ಕೂಡ ಅದೇ ಪಿಕಪ್ ವಾಹನದಲ್ಲಿದ್ದರು. ಆ ವಾಹನದಲ್ಲಿ ಕಲ್ಲುಗಳನ್ನು ತುಂಬಲಾಗಿತ್ತು. ಸಂಘರ್ಷದ ವೇಳೆ ನಡೆದ ಕಲ್ಲು ತೂರಾಟದಲ್ಲಿ ಅಮೀರ್ ಕೂಡ ಭಾಗಿಯಾಗಿದ್ದರು” ಎಂದು ಡಿಎಸ್‌ಪಿ ಕೈಲಾಶ್ ಚೌಧರಿ ಹೇಳಿದ್ದಾರೆ.

ಗುಂಡಿನ ದಾಳಿಯ ಆರೋಪದ ಬಗ್ಗೆ ಪ್ರತಿಕ್ರಿಯಿಸಿದ ಅವರು, “ಸಾವು ಗುಂಡೇಟಿನಿಂದ ಸಂಭವಿಸಿದೆಯೇ ಅಥವಾ ಕಲ್ಲು ತೂರಾಟದ ಗಾಯಗಳಿಂದಾಗಿದೆಯೇ ಎಂಬುದು ತನಿಖೆಯ ನಂತರವಷ್ಟೇ ಸ್ಪಷ್ಟವಾಗಲಿದೆ” ಎಂದಿದ್ದಾರೆ.

ಘಟನೆಯ ನಂತರ ಮೃತನ ಸಂಬಂಧಿಕರು ಮತ್ತು ಗ್ರಾಮಸ್ಥರು ಚೌಪಂಕಿ ಪೊಲೀಸ್ ಠಾಣೆಯ ಮುಂದೆ ಜಮಾಯಿಸಿ ಪ್ರತಿಭಟನೆ ನಡೆಸಿದ್ದಾರೆ. ಬಜರಂಗದಳದ ಕಾರ್ಯಕರ್ತರು ಗುಂಡಿನ ದಾಳಿಯಲ್ಲಿ ಭಾಗಿಯಾಗಿದ್ದಾರೆ ಎಂದು ಆರೋಪಿಸಿರುವ ಕುಟುಂಬಸ್ಥರು, ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹಿಸಿದ್ದಾರೆ.

ರಾಜಸ್ಥಾನದಲ್ಲಿ ಕಳೆದ ದಶಕದಲ್ಲಿ ಗೋಸಾಗಣೆಯ ಆರೋಪಕ್ಕೆ ಸಂಬಂಧಿಸಿದಂತೆ ಹಲವಾರು ಹಿಂಸಾಚಾರದ ಘಟನೆಗಳು ನಡೆದಿವೆ. 2017ರಲ್ಲಿ ಅಲ್ವಾರ್‌ನಲ್ಲಿ ಪೆಹ್ಲೂ ಖಾನ್ ಹತ್ಯೆ ಮತ್ತು 2018ರಲ್ಲಿ ರಕ್ಬರ್ ಖಾನ್ ಮೇಲಿನ ಗುಂಪು ದಾಳಿ ಪ್ರಕರಣಗಳು ರಾಷ್ಟ್ರಮಟ್ಟದಲ್ಲಿ ಆಕ್ರೋಶಕ್ಕೆ ಗುರಿಯಾಗಿದ್ದವು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಎಐಎಡಿಎಂಕೆ 178, ಬಿಜೆಪಿ 27 ಕ್ಷೇತ್ರಗಳಲ್ಲಿ ಸ್ಪರ್ಧೆ

ಈ ಬಾರಿಯ ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ ಗೆದ್ದು ಅಧಿಕಾರಕ್ಕೇರಲೇ ಬೇಕೆಂದು ಪಣ...

ಮಧ್ಯಪ್ರಾಚ್ಯ ಸಂಘರ್ಷ | ಕದನ ವಿರಾಮ ಎಂದ ಟ್ರಂಪ್; ಮಾತುಕತೆ ನಡೆದಿಲ್ಲವೆಂದ ಇರಾನ್

ಮಧ್ಯಪ್ರಾಚ್ಯದಲ್ಲಿ ಉಲ್ಬಣಗೊಳ್ಳುತ್ತಿರುವ ಸಂಘರ್ಷವನ್ನು ಕೊನೆಗಾಣಿಸಲು ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್ ನಾನಾ...

ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಬ್ಯಾಲೆಟ್ ಪೇಪರ್ ಬಳಕೆ; ವಿಧಾನಸಭೆಯಲ್ಲಿ ಮಸೂದೆ ಅಂಗೀಕಾರ

ರಾಜ್ಯದ ಸ್ಥಳೀಯ ಸಂಸ್ಥೆಗಳ ಚುನಾವಣಾ ಪ್ರಕ್ರಿಯೆಯಲ್ಲಿ ಬದಲಾವಣೆ ತರಲು ರಾಜ್ಯ ಸರ್ಕಾರ...

ಪ್ರಧಾನಿ ಮೋದಿ ಅಮೆರಿಕಕ್ಕೆ 100% ಶರಣಾಗಿದ್ದಾರೆ: ರಾಹುಲ್ ಗಾಂಧಿ

ಪಶ್ಚಿಮ ಏಷ್ಯಾದಲ್ಲಿನ ಯುದ್ಧದ ಪರಿಸ್ಥಿತಿ ಮತ್ತು ದೇಶದ ಆರ್ಥಿಕ ನೀತಿಗಳ ಕುರಿತು...