ಕ್ಯಾಂಡಿ ನೀಡುವುದಾಗಿ ಆಮಿಷವೊಡ್ಡಿ ಮೂರು ವರ್ಷದ ಮತು ಮೇಲೆ 22 ವರ್ಷದ ಯುವಕ ಅತ್ಯಾಚಾರ ಎಸಗಿರುವ ಘಟನೆ ಉತ್ತರ ಪ್ರದೇಶದ ಸೋನಭದ್ರದಲ್ಲಿ ನಡೆದಿದೆ.
ಈ ಬಗ್ಗೆ ಮಾಹಿತಿ ನೀಡಿರುವ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಅನಿಲ್ ಕುಮಾರ್, “ಈ ಅತ್ಯಾಚಾರದ ಬಗ್ಗೆ ಶುಕ್ರವಾರ ಸಂಜೆ ಮಹಿಳಾ ಸಹಾಯವಾಣಿ 1090 ಮೂಲಕ ದೂರು ನೀಡಲಾಗಿದೆ” ಎಂದು ತಿಳಿಸಿದ್ದಾರೆ.
ಇದನ್ನು ಓದಿದ್ದೀರಾ? ಅಪ್ರಾಪ್ತ ಬಾಲಕಿಯ ಅತ್ಯಾಚಾರ ಪ್ರಕರಣ: ಉತ್ತರ ಪ್ರದೇಶದ ಬಿಜೆಪಿ ಶಾಸಕ ದೋಷಿ ಎಂದ ನ್ಯಾಯಾಲಯ
ತಮ್ಮ ಅಜ್ಜ-ಅಜ್ಜಿಯ ಮನೆಗೆ ಹೋಗಿದ್ದ ಮೂರು ವರ್ಷದ ಹೆಣ್ಣು ಮಗುವಿಗೆ ಆರೋಪಿ ಕ್ಯಾಂಡಿ ನೀಡುವ ಮೂಲಕ ಆಮಿಷವೊಡ್ಡಿದ್ದಾನೆ. ನಂತರ ಆಕೆ ಮೇಲೆ ಅತ್ಯಾಚಾರ ಎಸಗಿ, ಆಕೆಯ ಮನೆಗೆ ಬಿಟ್ಟು ಪರಾರಿಯಾಗಿದ್ದಾನೆ ಎಂದು ಪೊಲೀಸ್ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಸದ್ಯ ಈ ಬಗ್ಗೆ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸ್ ಅಧಿಕಾರಿ ಅನಿಲ್ ಕುಮಾರ್ ಹೇಳಿದ್ದಾರೆ. ಆರೋಪಿಯ ಶೋಧಕ್ಕಾಗಿ ವಿಶೇಷ ತಂಡಗಳನ್ನು ರಚಿಸಲಾಗಿದೆ. ಮಗುವನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದ್ದು, ವೈದ್ಯರ ಪ್ರಕಾರ ಮಗುವಿಗೆ ಯಾವುದೇ ಆಂತರಿಕ ಗಾಯಗಳಿಲ್ಲ ಮತ್ತು ಆಕೆಯ ಸ್ಥಿತಿ ಸ್ಥಿರವಾಗಿದೆ ಎಂದು ವರದಿಯಾಗಿದೆ.
ಗಮನಿಸಿ: ಅತ್ಯಾಚಾರವು ಒಂದು ಗಂಭೀರ ಸಾಮಾಜಿಕ ದುಷ್ಕೃತ್ಯ. ಈ ಕ್ರೂರ ಕೃತ್ಯವು ಸಮಾಜದ ನೈತಿಕತೆ ಮತ್ತು ಮಾನವೀಯತೆಯನ್ನು ಕುಂದಿಸುತ್ತದೆ. ಅತ್ಯಾಚಾರವನ್ನು ತಡೆಯುವುದು ಮತ್ತು ಅತ್ಯಾಚಾರ ಮುಕ್ತ ಸಮಾಜವನ್ನು ನಿರ್ಮಿಸುವುದು ನಮ್ಮೆಲ್ಲರ ಜವಾಬ್ದಾರಿ. ಮಹಿಳೆಯರು ಭಯಮುಕ್ತವಾಗಿ ಬದುಕಲು ಹೆಣ್ಣುಮಕ್ಕಳ ಸುರಕ್ಷತೆ, ಗೌರವ ಮತ್ತು ನ್ಯಾಯವನ್ನು ಕಾಪಾಡಲು ನಾವು ಒಗ್ಗೂಡಿ ಹೋರಾಡಬೇಕು. ಅತ್ಯಾಚಾರದ ವಿರುದ್ಧ ಕಠಿಣ ಕಾನೂನು ಜಾರಿಯಾಗಬೇಕು ಮತ್ತು ಸಮಾಜದಲ್ಲಿ ಜಾಗೃತಿ ಮೂಡಿಸಬೇಕು. ನಮ್ಮ ಕುಟುಂಬಗಳಲ್ಲಿ, ಶಾಲೆಗಳಲ್ಲಿ ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ಹೆಣ್ಣುಮಕ್ಕಳ ಜೊತೆ ಗೌರವ ಮತ್ತು ಸಂವೇದನೆಯಿಂದ ನಡೆದುಕೊಳ್ಳಬೇಕು. ಮಹಿಳೆಯರ ರಕ್ಷಣೆಯ ಹೊಣೆ ನಮ್ಮೆಲ್ಲರದ್ದಾಗಿದೆ.





