ಮದುವೆಯಾಗಲು ನಿರಾಕರಿಸಿದ ಅಪ್ರಾಪ್ತೆಯ ಕತ್ತು ಸೀಳಿ ಹತ್ಯೆಗೈದ ಯುವಕ

Date:

ಅಪ್ರಾಪ್ತೆ ಮದುವೆಯಾಗಲು ನಿರಾಕರಿಸಿದ್ದಕ್ಕೆ ಯುವಕನೋರ್ವ ಆಕೆಯ ಕತ್ತು ಸೀಳಿ ಹತ್ಯೆಗೈದ ಘಟನೆ ಹರಿಯಾಣದ ಫರಿದಾಬಾದ್‌ನ ದಬುವಾ ಕಾಲೋನಿಯಲ್ಲಿ ನಡೆದಿದೆ ಎಂದು ವರದಿಯಾಗಿದೆ.

ಆರೋಪಿಯನ್ನು ಪವನ್, ಮೃತ ಬಾಲಕಿಯನ್ನು ಖುಷ್ನುಮಾ ಅಲಿಯಾಸ್ ಕರಿಷ್ಮಾ ಎಂದು ಗುರುತಿಸಲಾಗಿದೆ.

ಕಳೆದ ಏಪ್ರಿಲ್‌ನಲ್ಲಿ ಪವನ್ ಮತ್ತು ಕರಿಷ್ಮಾ ಇಬ್ಬರು ಮನೆ ಬಿಟ್ಟು ಹೋಗಿದ್ದರು. ಪೊಲೀಸರು ಇಬ್ಬರನ್ನು ಪತ್ತೆ ಹಚ್ಚಿ ಕರಿಷ್ಮಾ ಬಾಲಕಿಯಾದ ಕಾರಣ ಆಕೆಯನ್ನು ಕುಟುಂಬಸ್ಥರಿಗೆ ಒಪ್ಪಿಸಿದ್ದರು. ಪವನ್ ಅನ್ನು ಜೈಲಿಗೆ ಹಾಕಲಾಗಿತ್ತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನು ಓದಿದ್ದೀರಾ? ಸಂತ್ರಸ್ತೆ ಜೊತೆ ಮದುವೆ ಷರತ್ತು; ಅತ್ಯಾಚಾರ ಆರೋಪಿಗೆ ಜಾಮೀನು

ಸೆಪ್ಟೆಂಬರ್‌ನಲ್ಲಿ ಜಾಮೀನಿನ ಮೇಲೆ ಹೊರಬಂದ ಪವನ್ ತನ್ನನ್ನು ಮದುವೆಯಾಗುವಂತೆ ಕರಿಷ್ಮಾಗೆ ಒತ್ತಾಯಿಸುತ್ತಿದ್ದ.

ಶನಿವಾರ ಕರಿಷ್ಮಾ ತನ್ನ ನೆರೆಮನೆಗೆ ಹೋಗಿದ್ದಳು. ಅಲ್ಲಿದ್ದ ಪವನ್ ತನ್ನನ್ನು ಮದುವೆಯಾಗುವಂತೆ ಕರಿಷ್ಮಾಳನ್ನು ಪೀಡಿಸಿದ್ದಾನೆ. ಆಕೆ ಮದುವೆಯಾಗಲು ನಿರಾಕರಿಸಿದ್ದಕ್ಕೆ ಆಕೆಯ ಕತ್ತು ಸೀಳಿ ಸ್ಥಳದಿಂದ ಪರಾರಿಯಾಗಿದ್ದಾನೆ.

ಬಾಲಕಿಯ ತಂದೆಯ ದೂರಿನ ಆಧಾರದಲ್ಲಿ ದಬುವಾ ಪೊಲೀಸ್ ಠಾಣೆಯಲ್ಲಿ ಭಾರತೀಯ ನ್ಯಾಯ ಸಂಹಿತೆಯಡಿ ಎಫ್‌ಐಆರ್ ದಾಖಲಿಸಲಾಗಿದೆ.

ಇದನ್ನು ಓದಿದ್ದೀರಾ? ಬಳ್ಳಾರಿ | ಅಪ್ರಾಪ್ತೆ ಮೇಲೆ ಅತ್ಯಾಚಾರ; ಆರೋಪಿ ಶೋಧಕ್ಕೆ ತಂಡ ರಚನೆ

“ಪವನ್ ನನ್ನ ಮಗಳನ್ನು ಮದುವೆಯಾಗುವಂತೆ ಒತ್ತಡ ಹೇರುತ್ತಿದ್ದನು. ಆದರೆ ಆಕೆ ನಿರಾಕರಿಸುತ್ತಿದ್ದಳು. ಆಕೆಯನ್ನು ಕೊಲ್ಲುವುದಾಗಿ ಪವನ್ ಬೆದರಿಕೆ ಹಾಕುತ್ತಿದ್ದನು. ಕೊನೆಗೆ ನನ್ನ ಮಗಳನ್ನು ಕೊಂದುಬಿಟ್ಟ” ಎಂದು ಬಾಲಕಿಯ ತಂದೆ ಅನ್ಸರ್ ಖಾನ್ ತಮ್ಮ ದೂರಿನಲ್ಲಿ ತಿಳಿಸಿದ್ದಾರೆ.

ಈ ಬಗ್ಗೆ ಮಾಹಿತಿ ನೀಡಿದ ಫರಿದಾಬಾದ್ ಪೊಲೀಸ್ ವಕ್ತಾರರು, “ಎಫ್‌ಐಆರ್ ದಾಖಲಿಸಲಾಗಿದ್ದು, ಇನ್ನೂ ತಲೆಮರೆಸಿಕೊಂಡಿರುವ ಆರೋಪಿಯನ್ನು ಬಂಧಿಸಲು ನಮ್ಮ ತಂಡ ಕಾರ್ಯಾಚರಣೆ ನಡೆಸುತ್ತಿವೆ. ಆರೋಪಿಯನ್ನು ಶೀಘ್ರದಲ್ಲೇ ಬಂಧಿಸಲಾಗುವುದು” ಎಂದು ಹೇಳಿದ್ದಾರೆ.

ಇದೇ ರೀತಿಯ ಘಟನೆ ಹುಬ್ಬಳ್ಳಿ, ಹರಿಯಾಣ ಮೊದಲಾದ ಕಡೆ ನಡೆದಿತ್ತು. ಆದರೆ ನೇಹಾ ಹತ್ಯೆ ಪ್ರಕರಣದಲ್ಲಿ ಆರೋಪಿ ಮುಸ್ಲಿಂ ಆದ ಕಾರಣ ಮಾಧ್ಯಮಗಳು ಕೃತ್ಯಕ್ಕೆ ಲವ್ ಜಿಹಾದ್ ಬಣ್ಣ ಬಳಿದು ತಮ್ಮ ಟಿಆರ್‌ಪಿ ಹೆಚ್ಚಿಸುವ ಕೀಳು ಮಟ್ಟಕ್ಕೆ ಇಳಿದಿದ್ದರು. ಇನ್ನೊಂದೆಡೆ ಬಿಜೆಪಿ ತನ್ನ ರಾಜಕೀಯ ಬೇಳೆ ಬೇಯ್ಯಿಸುವ ಯತ್ನ ಮಾಡಿತ್ತು.

ಆದರೆ ಹರಿಯಾಣದಲ್ಲಿ ನಡೆದಿರುವ ಈ ಘಟನೆಯಲ್ಲಿ ಆರೋಪಿ ಮುಸ್ಲಿಂ ಅಲ್ಲದ ಕಾರಣ ಮಾಧ್ಯಮಗಳ ಕಣ್ಣು ಈ ಪ್ರಕರಣದತ್ತ ಬಿದ್ದಿಲ್ಲ. ಯಾವುದೇ ಧರ್ಮಕ್ಕೆ ಸೇರಿದವರಾದರೂ ಇದು ಸ್ಪಷ್ಟವಾಗಿ ವಿರೋಧಿಸಬೇಕಾದ, ಖಂಡಿಸಬೇಕಾದ ಹೆಣ್ಣು ಮಕ್ಕಳ ಮೇಲೆ ನಡೆಯುವ ದೌರ್ಜನ್ಯ ಎಂದು ಜನರಿಗೆ ತಿಳಿಸಬೇಕಾಗಿದ್ದು ಮಾಧ್ಯಮಗಳ ಕರ್ತವ್ಯ. ಆದರೆ ಮಾಧ್ಯಮಗಳು ಸಂಘಪರಿವಾರದ ಜೀತಕ್ಕಿಳಿದು ಲವ್ ಜಿಹಾದ್ ಎಂಬ ಕಥೆ ಕಟ್ಟುತ್ತಿರುವುದು, ಮುಸ್ಲಿಂ ದ್ವೇಷ ಹರಡುತ್ತಿರುವುದು ಶೋಚನೀಯ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...