ಅರ್ಮಾನ್ ಮಲಿಕ್‌ಗೆ ಜೀವ ಬೆದರಿಕೆ, ಬಂದೂಕು ಪರವಾನಗಿ ಕೋರಿದ ಯೂಟ್ಯೂಬರ್

Date:

ಯೂಟ್ಯೂಬರ್, ಗಾಯಕ ಮತ್ತು ರಿಯಾಲಿಟಿ ಶೋನಲ್ಲಿ ಭಾಗವಹಿಸುವ ಅರ್ಮಾನ್ ಮಲಿಕ್‌ಗೆ ಜೀವ ಬೆದರಿಕೆ ಬಂದಿದೆ. ಇದಾದ ಬೆನ್ನಲ್ಲೇ ಅರ್ಮಾನ್ ಮಲಿಕ್ ಪಂಜಾಬ್ ಪೊಲೀಸರಿಂದ ಬಂದೂಕು ಪರವಾನಗಿ ನೀಡುವಂತೆ ಕೋರಿದ್ದಾರೆ.

ಅರ್ಮಾನ್ ಕೊಲೆ ಬೆದರಿಕೆಗಳು ಬಂದಿದ್ದು, ಈ ಸಂಬಂಧ ವಿಡಿಯೋ ಒಂದು ವೈರಲ್ ಆಗಿದೆ. ಈ ಬೆನ್ನಲ್ಲೇ ತನ್ನ ಸುರಕ್ಷತೆಗಾಗಿ ಬಂದೂಕು ಪರವಾನಗಿ ಅತ್ಯಗತ್ಯ ಎಂದು ಅರ್ಮಾನ್ ಹೇಳಿದ್ದಾರೆ. ಸದ್ಯ ವಿಡಿಯೋ ಡಿಲೀಟ್ ಆಗಿದೆ.

ಇದನ್ನು ಓದಿದ್ದೀರಾ? ಬೆಂಗಳೂರು | ಹಳೆ ದ್ವೇಷಕ್ಕೆ ಸಂಗಡಿಗನ ಹತ್ಯೆ; ನಾಲ್ವರ ಬಂಧನ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಗುಂಪೊಂದು ನಿರಂತರವಾಗಿ ಪಂಜಾಬ್‌ನ ಕಲಾವಿದರನ್ನು ಗುರಿಯಾಗಿಸಿಕೊಂಡು ಕಾಲಕಾಲಕ್ಕೆ ಕೊಲೆ ಬೆದರಿಕೆ ಮತ್ತು ಸುಲಿಗೆಯನ್ನು ಮಾಡುತ್ತಿವೆ. ಪಂಜಾಬ್ ಸಿನಿಮಾ ಉದ್ಯಮದ ಅರ್ಮಾನ್ ಮಲಿಕ್ ಈಗ ಇದಕ್ಕೆ ಬಲಿಯಾಗಿದ್ದಾರೆ.

ಈ ಬಗ್ಗೆ ಎಕ್ಸ್‌ನಲ್ಲಿ ಅರ್ಮಾನ್ ವಿಡಿಯೋ ಹಾಕಿದ್ದಾರೆ. “ನನ್ನ ಸುರಕ್ಷತೆಗಾಗಿ ನಾನು ಶಸ್ತ್ರಾಸ್ತ್ರ ಪರವಾನಗಿಗೂ ಅರ್ಜಿ ಸಲ್ಲಿಸಿದ್ದೇನೆ. ನನ್ನ ಕುಟುಂಬ ಮತ್ತು ನನ್ನನ್ನು ನಾನು ರಕ್ಷಿಸಿಕೊಳ್ಳಬೇಕಾಗಿದೆ. ಪ್ರತಿ ಬಾರಿಯೂ ನನ್ನ ವಿರುದ್ಧ ಒಂದು ಪ್ರಕರಣವಿದೆ ಎಂದು ಕಾರಣ ನೀಡಿ ಪರವಾನಗಿಯನ್ನು ನಿರಾಕರಿಸಲಾಗಿದೆ” ಎಂದು ತಿಳಿಸಿದ್ದಾರೆ.

“ಈ ಪ್ರಕರಣವು ಸಂಪೂರ್ಣವಾಗಿ ಸುಳ್ಳು ಮತ್ತು ಆಧಾರರಹಿತ. ನ್ಯಾಯಾಂಗದ ಮೇಲೆ ನನಗೆ ಸಂಪೂರ್ಣ ನಂಬಿಕೆ ಇದೆ. ಕೊನೆಗೆ ಸತ್ಯವು ಮೇಲುಗೈ ಸಾಧಿಸುತ್ತದೆ. ನನ್ನ ಕುಟುಂಬ ಮತ್ತು ನಾನು ಅಭದ್ರತೆಯ ಬೆಂಕಿಯ ಅಡಿಯಲ್ಲಿ ಬದುಕುತ್ತಿರುವುದನ್ನು ಮುಂದುವರಿಸಬೇಕೇ” ಎಂದು ಅರ್ಮಾನ್ ಪ್ರಶ್ನಿಸಿದ್ದಾರೆ.

ಇನ್ನು ಅಧಿಕಾರಿಗಳಿಗೆ ಪರಿಸ್ಥಿತಿಯ ಗಂಭೀರತೆಯನ್ನು ಅರ್ಥಮಾಡಿಕೊಳ್ಳಲು ಮನವಿ ಮಾಡಿದರು. ಒಬ್ಬ ತಂದೆ ಮತ್ತು ಜವಾಬ್ದಾರಿಯುತ ನಾಗರಿಕನಾಗಿ, ನನ್ನನ್ನು ಮತ್ತು ನನ್ನ ಮಕ್ಕಳನ್ನು ರಕ್ಷಿಸಿಕೊಳ್ಳುವ ಹಕ್ಕು ನನಗಿದೆ. ಈ ವಿನಂತಿಯು ಬಂಡಾಯವಲ್ಲ, ಆದರೆ ಸುರಕ್ಷತೆಗಾಗಿ ಮನವಿ ಎಂದಿದ್ದಾರೆ.

ಕಾನೂನು ಮಾರ್ಗಗಳನ್ನು ಅನುಸರಿಸುತ್ತಿದ್ದರೂ, ತಾನೂ ಮತ್ತು ಕುಟುಂಬಕ್ಕೆ ನಿರಂತರ ಬೆದರಿಕೆಗಳನ್ನು ಎದುರಿಸಬೇಕಾಗಿದೆ. ಆದ್ದರಿಂದ ಪರವಾನಗಿ ನೀಡಿ ಎಂದು ಮನವಿ ಮಾಡಿರಬಹುದು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...